ಅಗ್ನಿಶಾಮಕಕ್ಕೆ ಈ ವರ್ಷ 2000 ಜನ ನೇಮಕ: ಗೃಹ ಸಚಿವ ಜ್ಞಾನೇಂದ್ರ

*  ಬೆಂಗಳೂರಲ್ಲಿ ಹೊಸ ಅಗ್ನಿಶಾಮಕ ಕಟ್ಟಡ ಉದ್ಘಾಟಿಸಿದ ಗೃಹ ಸಚಿವ ಆರಗ
*  ರಾಜ್ಯದ ಜನತೆಯ ಪ್ರಾಣ ಹಾಗೂ ಆಸ್ತಿ ರಕ್ಷಣೆಗೆ ಸರ್ಕಾರ ಬದ್ಧ
*  ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ವಿಶೇಷ ಆದತ್ಯೆ 

2000 Post Recruitment to Fire Department This Year in Karnataka Says Araga Jnanendra grg

ಬೆಂಗಳೂರು(ಜೂ.30): ರಾಜ್ಯದಲ್ಲಿ ಪ್ರಸಕ್ತ ವರ್ಷ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗೆ ಇಲಾಖೆಗೆ 2 ಸಾವಿರ ಸಿಬ್ಬಂದಿಯನ್ನು ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬುಧವಾರ ಜಯನಗರದಲ್ಲಿ ಅಗ್ನಿಶಾಮಕ ದಳ ಠಾಣೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಜನತೆಯ ಪ್ರಾಣ ಹಾಗೂ ಆಸ್ತಿ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದರು.
ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ವಿಶೇಷ ಆದತ್ಯೆ ನೀಡುತ್ತದೆ. ಪ್ರಸಕ್ತ ವರ್ಷ ಅಗ್ನಿಶಾಮಕ ದಳಕ್ಕೆ ಹೊಸದಾಗಿ ಎರಡು ಸಾವಿರ ಸಿಬ್ಬಂದಿಯನ್ನು ನೇಮಕ ಮಾಡಲಾಗುತ್ತದೆ. ಇಲಾಖೆಗೆ ಹೆಚ್ಚಿನ ಅನುದಾನವನ್ನು ಸರ್ಕಾರ ಒದಗಿಸಲಿದೆ ಎಂದು ತಿಳಿಸಿದರು.

ಮುಂದಿನ 3 ವರ್ಷದಲ್ಲಿ 5,300 ಪೌರಕಾರ್ಮಿಕರ ನೇಮಕ: ಎಂಟಿಬಿ

ಕಾರ್ಯಕ್ರಮದಲ್ಲಿ ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ, ರಾಜ್ಯ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕೆ.ವಿ.ಶರತ್‌ ಚಂದ್ರ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಅಮರ್‌ ಕುಮಾರ್‌ ಪಾಂಡೆ ಹಾಗೂ ಎಡಿಜಿಪಿ ಹರಿಶೇಖರನ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
 

Latest Videos
Follow Us:
Download App:
  • android
  • ios