ಶೀಘ್ರ 3800 ಪ್ರಾಧ್ಯಾಪಕರ ನೇಮಕ
ರಾಜ್ಯದ ಪದವಿ ಕಾಲೇಜುಗಳಲ್ಲಿ ಕಾಲಿ ಇರುವ ಪ್ರಾಧ್ಯಾಕರ ನೇಮಕಾತಿಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಬೆಂಗಳೂರು : ರಾಜ್ಯದ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 396 ಪ್ರಾಂಶುಪಾಲರು ಮತ್ತು 3800 ಬೋಧಕರ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಇದೇ ವೇಳೆ ಹೇಳಿದ್ದಾರೆ.
ರಾಜ್ಯದಲ್ಲಿರುವ ಹಲವು ಕಾಲೇಜುಗಳಲ್ಲಿ ಪ್ರಾಂಶುಪಾಲರೆ ಇರಲಿಲ್ಲ. ಕಾಲೇಜಿನಲ್ಲಿರುವ ಹಿರಿಯ ಪ್ರಾಧ್ಯಾಪಕರನ್ನೆ ಪ್ರಾಂಶುಪಾಲರ ನ್ನಾಗಿ ತಾತ್ಕಾಲಿಕವಾಗಿ ನೇಮಿಸಲಾಗಿತ್ತು.
ಹಲವು ಕಾಲೇಜುಗಳಲ್ಲಿ ಪ್ರಾಧ್ಯಾಪಕರು ಕೊರತೆಯು ಇತ್ತು. ಹೀಗಾಗಿ ನೇಮಕಾತಿಗೆ ಆದೇಶ ಹೊರಡಿಸಿದ್ದೇನೆ ಎಂದು ಹೇಳಿದರು.