ಕೆಎಸ್‌ಆರ್‌ಟಿಸಿಯಲ್ಲಿನ ವಿವಿಧಗಳ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಚಾಲಕ ಮತ್ತು ಚಾಲಕ ಕಂ ನಿರ್ವಾಹಕರ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಕೆಎಸ್‌ಆರ್‌ಟಿಸಿ ಸಂಸ್ಥೆ ವಿಸ್ತರಿಸಿದೆ.

745-driver-and-conductor-post-ksrtc-application-date-extended to April 20

ಬೆಂಗಳೂರು, (ಮಾ.31): ದಿನಾಂಕ 14-02-2020ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಕರೆಯಲಾಗಿದ್ದಂತ ಚಾಲಕ ಮತ್ತು ಚಾಲಕ ಕಂ ನಿರ್ವಾಹಕರ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. 

ದಿನಾಂಕ 30-03-2020ರಂದು ಮುಕ್ತಾಯಗೊಳ್ಳುತ್ತಿದ್ದ ಅವಧಿಯನ್ನು ದಿನಾಂಕ 20-04-2020ರ ವರೆಗೆ ವಿಸ್ತರಣೆ ಮಾಡಲಾಗಿದೆ.

KSRTCಯಲ್ಲಿ 3745 ಹುದ್ದೆ ನೇಮಕಾತಿ: ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ನಿಗಮದಲ್ಲಿ ಖಾಲಿ ಇರುವ ದರ್ಜೆ-3ರ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ತುಂಬಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ದಿನಾಂಕ 30-03-2020ರ ವರೆಗೆಗೆ ಕೊನೆಯ ದಿನಾಂಕ ನೀಡಿ ಅಹ್ವಾನಿಸಲಾಗಿತ್ತು.

ಆದ್ರೆ, ಕೊರೋನಾ ವೈರಸ್  ಏಪ್ರಿಲ್ 14ರ ವರಗೆ ಲಾಕ್‌ಡೌನ್ ಇರುವುದರಿಂದ ಯಾರೂ ಮನೆಗಳಿಂದ ಓಡಾಡದಂತಾಗಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಠಿಯಿಂದ ಅರ್ಜಿ ಸ್ವೀಕರಿಸಲು ಅಂತಿಮ ದಿನಾಂಕವನ್ನು 20-04-2020ರ ವರೆಗೆ ಅವಕಾಶ ನೀಡಲಾಗಿದೆ. ಅಲ್ಲದೇ ಅರ್ಜಿ ಶುಲ್ಕ ಪಾವತಿಗೆ ಅಂತಿಮ ದಿನಾಂಕ 23-04-2020ರ ವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.

ಇನ್ನೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಕಾಂಕ್ಷಿಗಳು www.ksrtcjobs.karnataka.gov.in ಜಾಲತಾಣಕ್ಕೆ ಭೇಟಿ ತಿಳಿದುಕೊಳ್ಳಬಹುದು.

Latest Videos
Follow Us:
Download App:
  • android
  • ios