ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ: 945 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗವು ಕೃಷಿ ಇಲಾಖೆಯಲ್ಲಿ 945 ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 7ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

Agriculture Department Recruitment Notification for filling 945 Group B Posts sat

ಬೆಂಗಳೂರು (ಸೆ.20): ಕೃಷಿ ಇಲಾಖೆಯಲ್ಲಿ  ಒಟ್ಟಾರೆ 945 ಕೃಷಿ ಅಧಿಕಾರಿಗಳು ಹಾಗೂ ಸಹಾಯಕ  ಕೃಷಿ  ಅಧಿಕಾರಿಗಳನ್ನೊಳಗೊಂಡ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ  (ಕೆಪಿಎಸ್‌ಸಿ) ಅಧಿಸೂಚನೆ ಹೊರಡಿಸಿದೆ.

ಕೃಷಿ ಇಲಾಖೆಯ ಉಳಿಕೆ ಮೂಲ ವೃಂದದ ಗ್ರೂಪ್ 'ಬಿ' ಹುದ್ದೆಗಳಾದ ಕೃಷಿ ಅಧಿಕಾರಿಗಳು 86 ಹಾಗೂ ಸಹಾಯಕ ಕೃಷಿ ಅಧಿಕಾರಿಗಳು 586 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಉಳಿದಂತೆ ಹೈದರಾಬಾದ್ ಕರ್ನಾಟಕ ವಿಭಾಗದ 6 ಜಿಲ್ಲೆಗಳ ವ್ಯಾಪ್ತಿಯಲ್ಲಿ 42 ಕೃಷಿ ಅಧಿಕಾರಿಗಳು ಹಾಗೂ 231 ಸಹಾಯಕ ಕರಷಿ ಅಧಿಕಾರಿಗಳ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ. ಒಟ್ಟಾರೆ ರಾಜ್ಯದಲ್ಲಿ 945 ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಈವರೆಗೆ ಕೃಷಿ ಇಲಾಖೆಯ ಅತಿ ದೊಡ್ಡ ನೇಮಕಾತಿ ಇದಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ಆನ್‌ಲೈನ್ ಮೂಲಕ ಅ.07ರಿಂದ ಅರ್ಜಿ ಸಲ್ಲಿಕೆ ಮಾಡಬಹುದಿದ್ದು, ನವೆಂಬರ್ 07ಕ್ಕೆ ಕೊನೆಯ ದಿನಾಂಕವಾಗಿದೆ. ಶೈಕ್ಷಣಿಕ ಮಾನದಂಡಗಳು, ವಯೋಮಿತಿ ಸೇರಿದಂತೆ ಇತರೆ ಅರ್ಹತೆಗಳಿಗಾಗಿ ಈ ಪಿಡಿಎಫ್ ವೀಕ್ಷಣೆ ಮಾಡಿ.

ಇಲ್ಲಿದೆ ಲಿಂಕ್: https://kpsc.kar.nic.in/AAO%20-%20AO_RPC_Notification.pdf

ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರ ವಿಶೇಷ ಪ್ರಯತ್ನದ ಫಲಾವಾಗಿ ಈ   ನೇಮಕಾತಿ ಪ್ರಕ್ರಿಯೆಗೆ  ಚಾಲನೆ ದೊರೆತಿದೆ. ಇಲಾಖೆ ಇತಿಹಾಸದಲ್ಲಿ  ಇಷ್ಟು ದೊಡ್ಡಪ್ರಮಾಣದಲ್ಲಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರಿವುದು ಇದೇ ಮೊದಲು. ಎನ್. ಚಲುವರಾಯಸ್ವಾಮಿ ಕೃಷಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ದಿನದಿಂದಲೇ ಇಲಾಖಾ ಸುಧಾರಣೆಗೂ ಹೆಚ್ಚಿನ  ಆದ್ಯತೆ ನೀಡಿದ್ದಾರೆ. ಇಲಾಖೆಯಲ್ಲಿ ಶೇ.60 ಕ್ಕೂ ಅಧಿಕ ಹುದ್ದೆ ಗಳು‌ ಖಾಲಿ  ಇರುವುದನ್ನು ಮನಗಂಡು ಮುಖ್ಯ ಮಂತ್ರಿ  ಸಿದ್ದರಾಮಯ್ಯ ಅವರ ಮನವೊಲಿಸಿ ಆರ್ಥಿಕ ಇಲಾಖೆ ಅನುಮತಿಯನ್ನು ಪಡೆದು  ಇಲಾಖೆ‌ ಮೂಲಕ ಕೆ.ಪಿ.ಎಸ್.ಸಿ ಗೆ ಪ್ರಸ್ತಾವನೆ ಕಳಿಸಲು ಕಾರಣರಾಗಿದ್ದಾರೆ.

ಈ ನೇಮಕಾತಿಯಿಂದ ರಾಜ್ಯದ 31 ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳಲ್ಲಿ ತಳ ಮಟ್ಟದಲ್ಲಿ ಕೆಲಸ ಮಾಡಲು ಅಧಿಕಾರಿಗಳನ್ನು ನೇಮಿಸಲು ಸಾಧ್ಯವಾಗಲಿದೆ. 2008 ರಲ್ಲಿ  ಕೆ.ಪಿ ಎಸ್.ಸಿ  ಮೂಲಕ 410 ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಇದೀಗ ಒಂದೇ ಬಾರಿಗೆ  ದೊಡ್ಡ ಪ್ರಮಾಣದಲ್ಲಿ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿಗಳ  ನೇಮಕಾತಿ ಮಾಡಲು ಕ್ರಮ ವಹಿಸಲಾಗಿದ್ದು ಮೂರು ತಿಂಗಳೊಳಗೆ  ನೇಮಕಾತಿ ಪ್ರಕ್ರಿಯೆ ಪೂರ್ಣ ಗೊಳಿಸಲು ಸೂಚಿಸಲಾಗಿದೆ. ಇದರಿಂದ‌ ಎಲ್ಲಾ ರೈತ ಸಂಪರ್ಕ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿಗಳು ಲಭ್ಯವಾಗಲಿದ್ದು ಕೃಷಿಕ ಸಮುದಾಯದ ಮಾರ್ಗದರ್ಶನ ಹಾಗೂ ಸೇವೆಗೆ ದೊಡ್ಡ ಶಕ್ತಿ ದೊರೆತಂತಾಗಲಿದೆ.

ಹೈದರಾಬಾದ್ ಕರ್ನಾಟಕ ವೃಂದದ ನೇಮಕಾತಿ ಅಧಿಸೂಚನೆ: https://kpsc.kar.nic.in/AAO%20-%20AO_HK_Notification.pdf

ಮುಖ್ಯಮಂತ್ರಿಯವರಿಗೆ ಧನ್ಯವಾದ:  ಕೃಷಿ  ಇಲಾಖೆಯಲ್ಲಿ ಏಕಕಾಲದಲ್ಲಿ ಇಷ್ಟು ದೊಡ್ಡ ಮಟ್ಟದ ನೇಮಕಾತಿಗೆ ಅನುಮತಿ ಒದಗಿಸಿಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃಷಿ ಸಚಿವರು ವಿಶೇಷ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಈ‌ ನೇಮಕಾತಿಯಿಂದ ಇಲಾಖೆಯಲ್ಲಿ ಖಾಲಿ ಇದ್ದ  ಮೂರನೇ ಒಂದರಷ್ಟು ಅಧಿಕಾರಿಗಳ ಹುದ್ದೆ ಭರ್ತಿಯಾದಂತಾಗಲಿದೆ. ಇದರಿಂದ  ರೈತರಿಗೆ  ಸೇವಾ ಸೌಲಭ್ಯ ಒದಗಿಸುವ ಪ್ರಕ್ರಿಯೆ ಸುಗಮವಾಗಲಿದೆ. ಬಾಕಿ ಉಳಿವ ಖಾಲಿ  ಹುದ್ದೆಗಳ ಭರ್ತಿಗೂ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೃಷಿ ಸಚಿವರು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios