ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಪೊಲೀಸ್ ಇಲಾಖೆಯು ಬಹುಮುಖ್ಯ ಮಾಹಿತಿಯೊಂದನ್ನು ನೀಡಿದೆ. ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇದ್ದ ಕೊನೆ ದಿನಾಂಕವನ್ನು ವಿಸ್ತರಿಸಿದೆ.

application last date extension for police sub inspector Post

ಬೆಂಗಳೂರು, (ಜೂನ್.26) : ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವೃಂದದ ವಿವಿಧ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆ ದಿನಾಂಕವನ್ನು ವಿಸ್ತರಿಸಲಾಗಿದೆ.

ಪೊಲೀಸ್ ಇಲಾಖೆಯ ಮಾಹಿಯ ಪ್ರಕಾರ, ಈ ಮೊದಲು ಕೆಎಸ್‌ಆರ್ ಪಿ ಮತ್ತು ಆರ್.ಎಸ್.ಐ ವೃಂದದ ಹುದ್ದೆಗಳಿಗೆ ಜುಲೈ 16 ರವರೆಗೆ ಅರ್ಜಿ ಸಲ್ಲಿಕೆ ಕೊನೆ ದಿನವಾಗಿತ್ತು. 

ಇದೀಗ ಅರ್ಜಿ ಸಲ್ಲಿಕೆ ದಿನಾಂಕವನ್ನು ಜು. 18ಕ್ಕೆ ವಿಸ್ತರಿಸಲಾಗಿದೆ. ಇನ್ನು  ಶುಲ್ಕ ಪಾವತಿಸಲು ಜು.21 ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಈ ಬಗ್ಗೆ ಧಾರವಾಡ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

36,261 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

2020-21 ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿ ಕೈಗೊಳ್ಳಲಾಗಿದೆ. ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಪ್ರಸ್ತುತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಈ ಹಿಂದೆ ನಿಗದಿಪಡಿಸಲಾಗಿದ್ದ ಅರ್ಜಿ ಆಹ್ವಾನದ ದಿನಾಂಕವನ್ನು ವಿಸ್ತರಿಸಲಾಗಿರುತ್ತದೆ. ಅರ್ಹತಾ ಷರತ್ತುಗಳಲ್ಲಿ (ವಯೋಮಿತಿ ಸೇರಿದಂತೆ) ಯಾವುದೇ ಬದಲಾವಣೆಗಳಿರುವುದಿಲ್ಲ.

ಆರ್.ಎಸ್.ಐ (ಸಿಎಆರ್/ ಡಿಎಆರ್) 45 ಹುದ್ದೆಗಳು 16-ಜುಲೈ 2020 ರವರೆಗೆ, ವಿಶೇಷ .ಆರ್.ಎಸ್.ಐ (ಕೆ.ಎಸ್.ಆರ್.ಪಿ)40 ಹುದ್ದೆಗಳು,ಎಸ್.ಐ (ಕೆ.ಎಸ್.ಐ.ಎಸ್.ಎಫ್)51 ಹುದ್ದೆಗಳು ಹಾಗೂ ಪಿ.ಎಸ್.ಐ.(ವೈರ್‍ಲೆಸ್) 26 ಹುದ್ದೆಗಳಿಗೆ 18 ಜುಲೈ 2020 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios