ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ನೇಮಕಾತಿ: ಅರ್ಜಿ ಸಲ್ಲಿಸಿ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಬೀದರ್, ಬಳ್ಳಾರಿ, ಮೈಸೂರು, ಕೊಪ್ಪಳ, ಯಾದಗಿರಿ, ಕಲಬುರಗಿ, ರಾಯಚೂರು, ಬಾಗಲಕೋಟೆ, ಕೋಲಾರ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

Applications Call For Selection of  552 Nurse Mid Level Heath Providers

ಬೆಂಗಳೂರು, (ಡಿ.01) : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಆರೋಗ್ಯ ಪೂರೈಕೆದಾರ ಶುಶ್ರೂಷಕಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಬೀದರ್, ಬಳ್ಳಾರಿ, ಮೈಸೂರು, ಕೊಪ್ಪಳ, ಯಾದಗಿರಿ, ಕಲಬುರಗಿ, ರಾಯಚೂರು, ಬಾಗಲಕೋಟೆ, ಕೋಲಾರ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಭಾರತ ಸರ್ಕಾರದ UIDAIನಲ್ಲಿ ನೇಮಕಾತಿ: ಬೆಂಗಳೂರಿನಲ್ಲಿ ಕೆಲಸ

ಒಟ್ಟು 552 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ 10/12/2019ರೊಳಗೆ ಅರ್ಜಿಗಳನ್ನು ಸಲ್ಲಿಸಲು ಕೋರಲಾಗಿದೆ.

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್‌ಸಿ ನರ್ಸಿಂಗ್/ಪೋಸ್ಟ್ ಬಿಎಸ್‌ಸಿ ನರ್ಸಿಂಗ್ ಜತೆಗೆ ರಾಜ್ಯ ನರ್ಸಿಂಗ್ ಕೆಎನ್‌ಸಿ/ಐಎನ್‌ಸಿ ನೋಂದಣಿ ಹೊಂದಿರಬೇಕು.

ವೇತನ ಶ್ರೇಣಿ: ಗುತ್ತಿಗೆ ಆಧಾರದಲ್ಲಿ ನೇಮಕಗೊಂಡವರಿಗೆ ಮಾಸಿಕ 24,200 ರು. ಆದ್ರೆ, ಕೋಲಾರ, ಮೈಸೂರು ಜಿಲ್ಲೆಯಲ್ಲಿ ನೇಮಕಗೊಂಡವರಿಗೆ 22,000 ರು.  ಸಂಭಾವನೆ ನಿಗದಿಪಡಿಸಲಾಗಿದೆ. 

ಭಾರತೀಯ ಅಂಚೆ ಇಲಾಖೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ. ಎಸ್‌ಸಿ/ಎಸ್‌ಟಿ/ಪ್ರವರ್ಗ-1/ಮಾಜಿ ಸೈನಿಕರಿಗೆ 40 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. 

ಆಯ್ಕೆ ಪ್ರಕ್ರಿಯೆ: ಆನ್‌ಲೈನ್ ಮೂಲಕವೇ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.  ಲಿಖಿತ ಪರೀಕ್ಷೆ 21/12/2019ರಂದು ನಡೆಯಲಿದ್ದು,  ಮೂಲ ದಾಖಲೆಗಳ ಪರಿಶೀಲನೆ 26/12/2019ರಂದು ನಡೆಯಲಿದೆ. 

ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ  ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಸೆಂಬರ್ 1ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Latest Videos
Follow Us:
Download App:
  • android
  • ios