Asianet Suvarna News Asianet Suvarna News

6662 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

6662 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು, ಕೊನೆ ದಿನಾಂಕ ಸೇರಿದಂತೆ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Assam Police recruitment 2020 for 6662 Constable Vacancies
Author
Bengaluru, First Published Jan 1, 2020, 6:32 PM IST
  • Facebook
  • Twitter
  • Whatsapp

ಬೆಂಗಳೂರು, (ಜ.01):  ಅಸ್ಸಾಂ ಪೊಲೀಸ್ ಇಲಾಖೆ 6662 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ದಿನಾಂಕ 06-01-2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ (SSLC) ವ್ಯಾಸಂಗ ಮಾಡಿರಬೇಕು. ಅಥವಾ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 2nd PUC ತೇರ್ಗಡೆಯಾಗಿರಬೇಕು. 

ವಯೋಮಿತಿ:  18 ರಿಂದ 25 ವಯೋಮಿತಿ ಇರುವ ಅಭ್ಯರ್ಥಿಗಳು ಕಾನ್ಸ್ ಟೇಬಲ್ ಹುದ್ದೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ದೇಹದಾರ್ಡ್ಯತೆ ಪರೀಕ್ಷೆ ನಡೆಸಲಾಗುತ್ತದೆ. ಇದಾದ ಬಳಿಕ ದಾಖಲೆಗಳ ಪರಿಶೀಲನೆಯೊಂದಿಗೆ ನೇಮಕಾತಿ ನಡೆಯಲಿದೆ.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲದೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us:
Download App:
  • android
  • ios