ಕಡೆಗೂ 8000 ಮಹಿಳಾ ಪೌರ ಕಾರ್ಮಿಕರಿಗೆ ಕಾಯಂ ಭಾಗ್ಯ!
ಹಲವು ವರ್ಷದಿಂದ ಮಹಿಳಾ ಪೌರ ಕಾರ್ಮಿಕರು ಗುತ್ತಿಗೆ ಹಾಗೂ ನೇರ ಪಾವತಿಯಡಿ ಕಾರ್ಯ ನಿರ್ವಹಣೆ ಮಾಡಿಕೊಂಡು ಬರುತ್ತಿದ್ದರು. ಕಾಯಂಗೊಳಿಸುವುದಕ್ಕೆ ಕನಿಷ್ಠ ಎರಡು ವರ್ಷ ಅರ್ಹತೆ ಸೂಚಿಸಲಾಗಿತ್ತು.
ಬೆಂಗಳೂರು(ಡಿ.19): ಬಿಬಿಎಂಪಿಯ ಪೌರಕಾರ್ಮಿಕ ನೇಮಕಾತಿ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದ್ದು, ಕಾಯಂಗೊಂಡಿರುವ 12 ಸಾವಿರ ಹುದ್ದೆಗಳ ಪೈಕಿ ಸುಮಾರು 8 ಸಾವಿರ ಮಹಿಳಾ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ.
ಬಿಬಿಎಂಪಿಯಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಎರಡು ಹಂತದಲ್ಲಿ ನೇಮಕ ಮಾಡಿಕೊಳ್ಳಲಾಗಿದ್ದು, ಒಟ್ಟು 14980 ಪೌರಕಾರ್ಮಿಕರನ್ನು ಕಾಯಂಗೊಳಿಸವುದಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಈ ಪೈಕಿ ಇದೀಗ 12,699 ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಇದರಲ್ಲಿ ಬಹುತೇಕ 7,500 ರಿಂದ 8 ಸಾವಿರ ಮಹಿಳಾ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿ ನೇಮಕಾತಿಪತ್ರ ವಿತರಣೆ ಮಾಡಲಾಗುವುದು ಎಂದು ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತ ಮಂಜುನಾಥ ಸ್ವಾಮಿ ಮಾಹಿತಿ ನೀಡಿದ್ದಾರೆ.
ಪೊಲೀಸರನ್ನು ನೇಮಕ ಮಾಡಲಾಗದೇ ಠಾಣೆಗೆ ಬೀಗ ಜಡಿದ ಸರ್ಕಾರ!
ಹಲವು ವರ್ಷದಿಂದ ಮಹಿಳಾ ಪೌರ ಕಾರ್ಮಿಕರು ಗುತ್ತಿಗೆ ಹಾಗೂ ನೇರ ಪಾವತಿಯಡಿ ಕಾರ್ಯ ನಿರ್ವಹಣೆ ಮಾಡಿಕೊಂಡು ಬರುತ್ತಿದ್ದರು. ಕಾಯಂಗೊಳಿಸುವುದಕ್ಕೆ ಕನಿಷ್ಠ ಎರಡು ವರ್ಷ ಅರ್ಹತೆ ಸೂಚಿಸಲಾಗಿತ್ತು.
2281 ಹುದ್ದೆ ಖಾಲಿ:
ಬಿಬಿಎಂಪಿಯು ಮೊದಲ ಹಂತದಲ್ಲಿ 3,673 ಹುದ್ದೆ, ಎರಡನೇ ಹಂತದಲ್ಲಿ 11,307 ಹುದ್ದೆ ಸೇರಿ ಒಟ್ಟು 14,980 ಹುದ್ದೆ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಮೀಸಲಾತಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿರುವವರನ್ನು ನೇಮಕ ಸಾಧ್ಯವಾಗದ ಹಿನ್ನೆಲೆಯಲ್ಲಿ ಮೀಸಲಾತಿ ಪಾಲನೆಗೆ ವಿನಾಯಿತಿ ಪಡೆಯಲಾಗಿತ್ತು. ಹಾಗಾಗಿ ಇನ್ನೂ 2281 ಹುದ್ದೆ ಖಾಲಿ ಇವೆ. ಈ ಹುದ್ದೆಗೆ ಗ್ರಾಮೀಣ ಅಭ್ಯರ್ಥಿ, ಅಂಗವಿಕಲ, ಮಾಜಿ ಸೈನಿಕ ಸೇರಿದಂತೆ ಮೊದಲಾದ ಮೀಸಲಾತಿಗೆ ಭರ್ತಿ ಸಾಧ್ಯವಾಗಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ಪೌರಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯ ತಲುಪಲಿಸಿ: ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ವಿ.ವೆಂಕಟೇಶನ್
ಬಾಗಲಕೋಟೆ: ಸಫಾಯಿ ಕರ್ಮಚಾರಿಗಳಿಗೆ ನ್ಯಾಯಯುತವಾಗಿ ಸಿಗಬೇಕಾಗ ಸರಕಾರದ ಎಲ್ಲ ಯೋಜನೆಗಳನ್ನು ತಲುಪಿಸುವ ಕೆಲಸವಾಗಬೇಕೆಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ವೆಂಕಟೇಶನ್ ಹೇಳಿದ್ದರು.
ಅವರು ಬಾಗಲಕೋಟೆ ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಸಫಾಯಿ ಕರ್ಮಚಾರಿ ಮತ್ತು ಸಂಘಟನೆಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪೌರಕಾರ್ಮಿಕರಿಗೆ ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಪೂರೈಸುವುದು ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರ ಕರ್ತವ್ಯವಾಗಿದೆ. ನಗರ ಸ್ಥಳೀಯ ಸಂಸ್ಥೆ ಸೇರಿದಂತೆ ಸರಕಾರದ ಸ್ವಾಯತ್ತ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಕನಿಷ್ಠ ವೇತನ ನೀಡುವ ಕೆಲಸವಾಗಬೇಕು ಎಂದಿದ್ದರು.
ಪಿಡಿಒ ಪರೀಕ್ಷೆ ಗೊಂದಲ: ಮುಖ್ಯಮಂತ್ರಿಗೇ ತಪ್ಪು ಮಾಹಿತಿ ನೀಡಿತೇ ಕೆಪಿಎಸ್‌ಸಿ?
ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಸಾಮೂಹಿತ ಶೌಚಾಲಯದ ಸ್ಥಿತಿಗತಿಗಳ ಬಗ್ಗೆ ಪ್ರಶ್ನಿಸಿದ ಅವರು ಜಮಖಂಡಿ ಭಾಗದಲ್ಲಿ ಡಿ ಗ್ರೂಪ್ ನೌಕರರ ಉಪಯೋಗಿಸಿ ಸಾಮೂಹಿಕ ಶೌಚಾಲಯಗಳನ್ನು ಶುಚಿಗೊಳಿಸಲಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ಇದ್ದಲ್ಲಿ ಜಟ್ಟಿಂಗ್ ಮಷೀನ್ ಉಪಯೋಗಿಸಲಾಗುವುದೆಂದು ಪೌರಾಯುಕ್ತೆ ಲಕ್ಷ್ಮೀ ಅಸ್ಟಗಿ ಸಭೆಗೆ ತಿಳಿಸಿದ್ದರು.
ನಗರಸಭೆಯಲ್ಲಿ ಖಾಯಂಗೊಂಡ ಕೆಲ ಸಿಬ್ಬಂದಿಗಳಿಗೆ ಮನೆ ಇಲ್ಲದ್ದನ್ನು ಗಮನಿಸಿದ ಅಧ್ಯಕ್ಷರು ಮುಂಬರುವ ದಿನಗಳಲ್ಲಿ ನಿವೇಶನ ರಹಿತ, ನಿವೇಶನ ಸಹಿತ ಪೌರಕಾರ್ಮಿಕರಿಗೆ ಮನೆ ನಿರ್ಮಿಸಿಕೊಡಲು ಆಯುಕ್ತರಿಗೆ ನಿವೇಶನ ಗುರುತಿಸಲು ಸೂಚಿಸಿದರು. ಪ್ರತಿ ಗ್ರಾಮ ಪಂಚಾಯತಿಯಲ್ಲಿ 5 ಜನ ಸಿಬ್ಬಂದಿಗಳಿರುವುದು ಸಾಮಾನ್ಯ ಜನಸಂಖ್ಯೆ ಹೆಚ್ಚಾಗಿರುವ ಗ್ರಾ.ಪಂಗಳಿಗೆ ಹೆಚ್ಚುವರಿಯಾಗಿ ಹೊರಗುತ್ತಿಗೆ ಆಧಾರ ಮೇಲೆ ಸಿಬ್ಬಂದಿ ನೇಮಿಸಿಕೊಳ್ಳಲು ಹೇಳಿದರು. ಪ್ರತಿ ಕಾರ್ಮಿಕರ ಆರೋಗ್ಯಕ್ಕೆ ಹೆಚ್ಚಿನ ನಿಗಾ ಇಡುವದಲ್ಲದೇ ವಿಮಾ ಯೋಜನೆ, ಸುರಕ್ಷತಾ ಪರಿಕರಣಗಳನ್ನು ಒದಗಿಸಬೇಕು ಎಂದರು.