Asianet Suvarna News Asianet Suvarna News

ನಮ್ಮ ಕ್ಲಿನಿಕ್‌ಗೆ ವೈದ್ಯಾಧಿಕಾರಿ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಿಬಿಎಂಪಿ ವ್ಯಾಪ್ತಿಯಲ್ಲಿ ನೂತನವಾಗಿ ಸ್ಥಾಪಿಸಲಾಗುವ ‘ನಮ್ಮ ಕ್ಲಿನಿಕ್‌’ಗಳಲ್ಲಿ ಕರ್ತವ್ಯನಿರ್ವಹಿಸಲು ವೈದ್ಯಾಧಿಕಾರಿಗಳ ಹುದ್ದೆಗೆ ಒಂದು ವರ್ಷದ ಅವಧಿಗೆ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

BBMP invites Namma clinic  recruitment for various posts gow
Author
First Published Dec 1, 2022, 4:29 PM IST

ಬೆಂಗಳೂರು (ಡಿ.1): ಬಿಬಿಎಂಪಿ ವ್ಯಾಪ್ತಿಯಲ್ಲಿ ನೂತನವಾಗಿ ಸ್ಥಾಪಿಸಲಾಗುವ ‘ನಮ್ಮ ಕ್ಲಿನಿಕ್‌’ಗಳಲ್ಲಿ ಕರ್ತವ್ಯನಿರ್ವಹಿಸಲು ವೈದ್ಯಾಧಿಕಾರಿಗಳ ಹುದ್ದೆಗೆ ಒಂದು ವರ್ಷದ ಅವಧಿಗೆ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತಿವುಳ್ಳ ಎಂಬಿಬಿಎಸ್‌ ಪದವಿ ಮತ್ತು ಕೆಎಂಸಿ ಕೌನ್ಸಿಲ್‌ ನೋಂದಾವಣಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ವಿದ್ಯಾರ್ಹತೆಯ ಮೂಲ ದಾಖಲೆಗಳು ಮತ್ತು ಒಂದು ಜೆರಾಕ್ಸ್‌ ಪ್ರತಿ, ಭಾವಚಿತ್ರದೊಂದಿಗೆ ಮುಖ್ಯ ಆರೋಗ್ಯಾಧಿಕಾರಿ(ಸಾರ್ವಜನಿಕ ಆರೋಗ್ಯ)ರವರ ಕಚೇರಿ, ಅನೆಕ್ಸ್‌-2 ಕಟ್ಟಡ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ, ಎನ್‌.ಆರ್‌.ಚೌಕ, ಬೆಂಗಳೂರು-560 002 ವಿಳಾಸಕ್ಕೆ ಖುದ್ದಾಗಿ ಅರ್ಜಿ ಸಲ್ಲಿಸಬಹುದು ಎಂದು ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್‌ ಕೋರಿದ್ದಾರೆ.

ಅರೆವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಅರ್ಜಿ
ಹಾವೇರಿ: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಹಾವೇರಿ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಅರೇ ವೈದ್ಯಕೀಯ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಪಿಎಂಡಬ್ಲ್ಯೂ ತರಬೇತಿಯ ಹೈಸ್ಕೂಲ್‌, ಹೈಯರ್‌ ಸೆಕೆಂಡರಿ ಹೋಲ್ಡಿಂಗ್‌ ಪ್ರಮಾಣಪತ್ರ ಅಥವಾ ಎಂ.ಎಸ್‌. ಡಬ್ಲ್ಯೂ, ಬಿಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು. ಆರೋಗ್ಯ ಕ್ಷೇತ್ರದಲ್ಲಿ ಮೂರು ವರ್ಷ ಅನುಭವ ಮತ್ತು ಕಂಪ್ಯೂಟರ್‌ ಜ್ಞಾನ ಹೊಂದಿರಬೇಕು. 65 ವರ್ಷದೊಳಗಿರಬೇಕು. ಮೆರಿಟ್‌ ಕಂ ರೋಸ್ಟರ್‌ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಡಿ. 8ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಚೇರಿ, ಬಿ ಬ್ಲಾಕ್‌, ಜಿಲ್ಲಾಡಳಿತ ಭವನ ದೇವಗಿರಿ ಹಾಗೂ ದೂ.08375-249294 ಅಥವಾ ಮೊ. 9986346188 ಸಂಪರ್ಕಿಸಲು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

JOB LAYOFFS: ಉದ್ಯೋಗದಿಂದ ವಜಾಗೊಂಡ ನಂತರ ಖಿನ್ನತೆ ಹೋಗಲಾಡಿಸುವುದು ಹೇಗೆ ?

ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ನೇರ ಸಂದರ್ಶನ
ಹಾವೇರಿ: ಹನುಮನಮಟ್ಟಿಕೃಷಿ ವಿದ್ಯಾಲಯದಲ್ಲಿ ಕನ್ನಡ, ಇಂಗ್ಲಿಷ್‌, ಗಣಿತಶಾಸ್ತ್ರ, ಹಾಗೂ ಮನೋವಿಜ್ಞಾನ ವಿಷಯಗಳ ಅರೆಕಾಲಿಕ ಉಪನ್ಯಾಸಕರ ತಾತ್ಕಾಲಿಕ ಹುದ್ದೆಗೆ ಡಿ. 13ರಂದು ಸಂದರ್ಶನ ಆಯೋಜಿಸಲಾಗಿದೆ. ಡಿ. 13ರಂದು ಬೆಳಗ್ಗೆ 10.30ಕ್ಕೆ ಕನ್ನಡ ವಿಷಯದ ಅಭ್ಯರ್ಥಿಗಳು, ಇಂಗ್ಲಿಷ್‌ ವಿಷಯ ಅಭ್ಯರ್ಥಿಗಳು ಮಧ್ಯಾಹ್ನ 12 ಗಂಟೆಗೆ, ಗಣಿತಶಾಸ್ತ್ರ ವಿಷಯ ಅಭ್ಯರ್ಥಿಗಳು ಮಧ್ಯಾಹ್ನ 2.30ಕ್ಕೆ ಹಾಗೂ ಮನೋವಿಜ್ಞಾನ ವಿಷಯದ ಅಭ್ಯರ್ಥಿಗಳು ಮಧ್ಯಾಹ್ನ 4 ಗಂಟೆಗೆ ಹನುಮನಮಟ್ಟಿಕೃಷಿ ವಿದ್ಯಾಲಯದ ಡೀನ್‌ (ಕೃಷಿ) ಅವರ ಕಾರ್ಯಾಲಯಕ್ಕೆ ಸಂದರ್ಶನಕ್ಕೆ ಹಾಜರಾಗಬೇಕು. ಅರ್ಹ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ವಿದ್ಯಾರ್ಹತೆಗೆ ಸಂಬಂಧಪಟ್ಟಎಲ್ಲ ಮೂಲ ದಾಖಲೆಗಳನ್ನು ಹಾಗೂ ದೃಢೀಕೃತ ಎರಡು ಪ್ರತಿಗಳನ್ನು ತರಬೇಕು. ಅರ್ಜಿಯನ್ನು ಮುಂಗಡವಾಗಿ ಕಳುಹಿಸಬಾರದು. ಹೆಚ್ಚಿನ ಮಾಹಿತಿಗಾಗಿ ದೂ. 08373-253553 ಸಂಪರ್ಕಿಸಲು ಕೋರಲಾಗಿದೆ.

13,000 ಶಿಕ್ಷಕರ ನೇಮಕ ಪಟ್ಟಿಗೆ ಹೈಕೋರ್ಟ್‌ ತಡೆ

ಐಟಿ ಕ್ಷೇತ್ರದಲ್ಲಿ ಉದ್ಯೋಗಾವಕಾಶ
ಬೆಂಗಳೂರು: ವಿಟಿಲಿಟಿ ಡಿಜಿಟಲ್‌ ಟೆಕ್‌ ಐಟಿ ಉದ್ಯಮ ಸಂಸ್ಥೆ ಕರ್ನಾಟಕದ ಎಲ್ಲಾ ತಾಲೂಕು ಮಟ್ಟದಲ್ಲಿ ವರ್ಕ್ ಫ್ರಂ ಹೋಮ್‌ ಹಾಗೂ ವಿವಿಧ ಶ್ರೇಣಿಯ ಹುದ್ದೆಗಳಿಗೆ 600 ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಶುಲ್ಕ ಪಾವತಿಸುವಂತಿಲ್ಲ, ಉತ್ತಮ ಕ್ರಿಯಾಶೀಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ   ಇ-ಮೇಲ್‌ sakalasanyoj@gmail.com ಮೂಲಕ ಪಡೆಯಬಹುದಾಗಿದೆ ಎಂದು ಸಕಾಲ ಸಂದೇಶ ಯೋಜನೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow Us:
Download App:
  • android
  • ios