BECIL Recruitment 2021: ಸರ್ಕಾರಿ ಸ್ವಾಮ್ಯದ ಬಿಇಸಿಐಎಲ್ ನಲ್ಲಿ ಖಾಲಿ ಇರುವ ಹುದ್ದೆಗೆ ಇಂದೇ ಅರ್ಜಿ ಹಾಕಿ
- ಬಿಇಸಿಐಎಲ್ ನಲ್ಲಿ ಖಾಲಿ ಇರುವ ಹುದ್ದೆಗೆ ಆಸಕ್ತರಿಂದ ಅರ್ಜಿ ಆಹ್ವಾನ
- ಯುಡಿಸಿ, ಫಾರ್ಮಾಸಿಸ್ಟ್ ಸೇರಿ ಒಟ್ಟು 80 ಹುದ್ದೆಗಳಿಗೆ ನೇಮಕಾತಿ
- ಅರ್ಜಿ ಸಲ್ಲಿಸಲು ಕೊನೆ ದಿನ ಡಿಸೆಂಬರ್ 18, 2021
ಬೆಂಗಳೂರು (ಡಿ.13): ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿ. (Broadcast Engineering Consultants India Limited) ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. 80 ಯುಡಿಸಿ, ಫಾರ್ಮಾಸಿಸ್ಟ್, ಸ್ಟೋರ್ ಕೀಪರ್ ಕಮ್ ಕ್ಲರ್ಕ್, ಲ್ಯಾಬ್ ಟೆಕ್ನೀಶಿಯನ್ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ (online) ಮೂಲಕ ಅರ್ಜಿ ಸಲ್ಲಿಸಲು 2021 ಡಿಸೆಂಬರ್ 18 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://www.becil.com/vacancies ಭೇಟಿ ನೀಡಲು ಕೋರಲಾಗಿದೆ.
ಬಿಇಸಿಐಎಲ್ ನಲ್ಲಿ ಯುಡಿಸಿ (UDC), ಫಾರ್ಮಾಸಿಸ್ಟ್ (pharmacist), ಸ್ಟೋರ್ ಕೀಪರ್ & ಕ್ಲರ್ಕ್, ಲ್ಯಾಬ್ ಟೆಕ್ನೀಶಿಯನ್ (lab technician) ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಒಟ್ಟು 80 ಹುದ್ದೆಗಳ ವಿವರ ಇಂತಿದೆ.
ಯುಡಿಸಿ - 36 ಹುದ್ದೆಗಳು ಫಾರ್ಮಾಸಿಸ್ಟ್ - 2 ಹುದ್ದೆಗಳು ಸ್ಟೋರ್ ಕೀಪರ್ ಕಮ್ ಕ್ಲರ್ಕ್ - 3 ಹುದ್ದೆಗಳು ಲ್ಯಾಬ್ ಟೆಕ್ನೀಶಿಯನ್ - 33 ಹುದ್ದೆಗಳು ಗ್ಯಾಸ್ ಸ್ಟೀವರ್ಡ್ - 1 ಹುದ್ದೆ ಮೆಡಿಕಲ್ ರೆಕಾರ್ಡ್ ಟೆಕ್ನೀಶಿಯನ್ - 2 ಹುದ್ದೆಗಳು ಲೈಬ್ರರಿಯನ್ ಗ್ರೇಡ್ III - 3 ಹುದ್ದೆಗಳು.
UPSC RECRUITMENT 2021: ಬಿಇ, ಬಿ.ಟೆಕ್ ಆದವರಿಗೆ ಲೋಕ ಸೇವಾ ಆಯೋಗದಲ್ಲಿ ಉದ್ಯೋಗ
ಶೈಕ್ಷಣಿಕ ವಿದ್ಯಾರ್ಹತೆ: ಬಿಇಸಿಐಎಲ್ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ಅಥವಾ 12ನೇ ತರಗತಿ ಅಥವಾ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
LIC Recruitment 2021: ಎಲ್‌ಐಸಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಅರ್ಹರು ಅರ್ಜಿ ಸಲ್ಲಿಸಿ
ಮಾಸಿಕ ವೇತನ: ಬಿಇಸಿಐಎಲ್ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,100/- ರಿಂದ 43,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಬಿಇಸಿಐಎಲ್ ನ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಮೊದಲಿಗೆ ಕಿರುಪಟ್ಟಿ ಮಾಡಲಾಗುವುದು ಅದರಲ್ಲಿ ಆಯ್ಕೆಯಾದವರನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ESIC Recruitment 2021: ನೌಕರರ ರಾಜ್ಯ ವಿಮಾ ನಿಗಮದಲ್ಲಿ ಸೀನಿಯರ್ ರೆಸಿಡೆಂಟ್ ಹುದ್ದೆಗೆ
ಬಿಇಸಿಐಎಲ್ ನೇಮಕಾತಿಯ ವಿವಿಧ ಹುದ್ದೆಗಳಿಗೆ ಸೇರಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.becil.com/vacancies ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಹೊರತುಪಡಿಸಿ ಇನ್ಯಾವುದೇ ರೀತಿಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.
ಭಾರತೀಯ ನೌಕಾಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಭಾರತೀಯ ನೌಕಾಸೇನೆಯಲ್ಲಿ (Indian Navy) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಿಯುಸಿ (PUC)ಪಾಸಾಗಿರುವವರು ಕ್ರೀಡಾ ಕೋಟದ ಮೇಲೆ ನಾವಿಕ ಹುದ್ದೆಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಡಿಸೆಂಬರ್ 11ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾದಳದ ಅಧಿಕೃತ ವೆಬ್‌ಸೈಟ್ https://www.indiannavy.nic.in/ ಗೆ ಭೇಟಿ ನೀಡಲು ಕೋರಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 17 ರಿಂದ 22 ವರ್ಷದೊಳಗಿರಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಕೆಲಸ ನೀಡಲಾಗುತ್ತದೆ.