BEL Recruitment 2022: ಬೆಂಗಳೂರಿನ BELನಲ್ಲಿ ಟ್ರೈನಿ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ
- ಎಂಜಿನಿಯರ್ ಟ್ರೈನಿ ಹುದ್ದೆಗಳ ನೇಮಕಾತಿಗೆ BEL ಅರ್ಜಿ ಆಹ್ವಾನ
- ಖಾಲಿ ಇರುವ 8 ಟ್ರೈನಿ ಎಂಜಿನಿಯರ್-1 ಹುದ್ದೆಗಳಿಗೆ ನೇಮಕಾತಿ
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನ ಜನವರಿ 15 , 2022
ಬೆಂಗಳೂರು(ಡಿ.24): ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharath Electronics Limited-BEL) ಮತ್ತೊಮ್ಮೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಇರುವ 8 ಟ್ರೈನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜನವರಿ 15,2022ರೊಳಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ bel-india.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.
ಶೈಕ್ಷಣಿಕ ವಿದ್ಯಾರ್ಹತೆ: ಬಿಇಎಲ್ ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಶೇ.60 ರಷ್ಟು ಅಂಕಗಳೊಂದಿಗೆ ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಬಿಇಎಲ್ ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಸೆಂಬರ್ 1,2021ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
BEL Recruitment 2022: ಬೆಂಗಳೂರಿನ BELನಲ್ಲಿ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಬಳಿಕ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 40,000/-ರೂಗಳ ವರೆಗೆ ವೇತನ ಸಿಗಲಿದೆ. ಟ್ರೈನಿ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.
ಅರ್ಜಿ ಶುಲ್ಕ: ಟ್ರೈನಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.
ಅರ್ಜಿ ಸಲ್ಲಿಕೆ: ಬಿಇಎಲ್ ನೇಮಕಾತಿಯ ಟ್ರೈನಿ ಇಂಜಿನಿಯರ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಜನವರಿ 15,2022ರೊಳಗೆ ಅರ್ಜಿಯನ್ನು ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಬೇಕು.
ಕಚೇರಿ ವಿಳಾಸ:
DGM (HR/MR,MS&ADSN)
Bharat Electronics Limited
Jalahalli Post, Bangalore-560013, Karnataka.
ಅಭ್ಯರ್ಥಿಗಳು ಬಿಇಎಲ್ ನೇಮಕಾತಿ ಬಗೆಗಿನ ಅಧಿಸೂಚನೆ ಈ ಲಿಂಕ್ ಕ್ಲಿಕ್ ಮಾಡಿ ಓದಿ https://bel-india.in/Documentviews.aspx?fileName=ADVT%20TE%20ADSN-29-12-2021.pdf
South Indian Bank Recruitment 2022: ಸ್ಪೆಷಲಿಸ್ಟ್ ಆಫೀಸರ್ ಸೇರಿ ಹಲವು ಹುದ್ದೆಗಳಿಗೆ ಅರ್ಜಿಆಹ್ವಾನ
ಬೆಂಗಳೂರಿನ BELನಲ್ಲಿ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharath Electronics Limited-BEL) ಮತ್ತೊಮ್ಮೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿಇಎಲ್‌ನ ಬೆಂಗಳೂರು ಘಟಕದ ನೇಮಕಾತಿಗಾಗಿ ಅರ್ಜಿಗಳನ್ನು ಕರೆಯಲಾಗಿದೆ. ಕಾಂಟ್ರ್ಯಾಕ್ಟ್ ಆಧಾರದ ಮೇಲೆ 10 ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 6 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ bel-india.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸಬೇಕಾಗಿರುವ ವಿಳಾಸ ಇಂತಿದೆ: ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bel-india.in/Default.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 6 ರೊಳಗೆ ಅರ್ಜಿಯನ್ನು ಕೊರಿಯರ್ ಅಥವಾ ಪೋಸ್ಟ್ ಮೂಲಕ ಈ ವಿಳಾಸಕ್ಕೆ ಕಳುಹಿಸಿ ಕೊಡಿ.
Sr. Dy. General Manager (HR)
Naval Systems SBU
Bharat Electronics Limited
Jalahalli Post
Bangalore - 560013, Karnataka.
ಅಧಿಸೂಚನೆಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ : https://www.bel-india.in/Documentviews.aspx?fileName=web-ad%20for%20PE-I-21-12-21.pdf