Asianet Suvarna News Asianet Suvarna News

ಎಸ್‌ಎಸ್‌ಎಲ್‌ಸಿ ಪಾಸಾದವರಿಂದ ಅರ್ಜಿ ಆಹ್ವಾನ: ಜನವರಿ 5 ಕೊನೇ ದಿನ

ಬೆಂಗಳೂರು ನಗರ ಜಿಲ್ಲಾಡಳಿತದ ವತಿಯಿಂದ ಎಸ್‌ಎಸ್‌ಎಲ್‌ಸಿ ಪಾಸಾದವರಿಂದ ಗೃಹ ರಕ್ಷಕ ದಳದ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

Bengaluru District Administration call for to Home Guard Recruitment for SSLC holders sat
Author
First Published Dec 31, 2023, 11:13 PM IST

ಬೆಂಗಳೂರು (ಡಿ.31): ಗೃಹ ರಕ್ಷಕದಳ, ಬೆಂಗಳೂರು ಉತ್ತರ ಜಿಲ್ಲೆ ವತಿಯಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ಸ್ಥಾನಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರದಿಂದ ಅರ್ಜಿ ಪಡೆದುಕೊಳ್ಳಲು ಜನವರಿ 5 ಕೊನೆಯ ದಿನಾಂಕವಾಗಿದೆ.

ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು, 19 ವರ್ಷ ವಯಸ್ಸು ತುಂಬಿರಬೇಕು. ಉತ್ತಮ ಆರೋಗ್ಯ ಮತ್ತು ದೇಹದಾರ್ಢ್ಯತೆ ಹೊಂದಿರಬೇಕು. ಜೊತೆಗೆ, ಕಂಪ್ಯೂಟರ್ ಟೈಪಿಂಪಗ್  ಕನ್ನಡ ಮತ್ತು ಇಂಗ್ಲೀಷ್, ಡ್ರೈವರ್ಸ್, ಅಡುಗೆ ಭಟ್ಟರು, ಕಾರ್ಪೆಂಟರ್, ಎಲೆಕ್ಟ್ರೀಷಿಯನ್, ಪೈಂಟರ್ ಮತ್ತು ಪ್ಲಂಬರ್ ಇತ್ಯಾದಿ ಕೌಶಲ್ಯಗಳ ತರಬೇತಿ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ಅರ್ಜಿ ನಮೂನೆಗಳನ್ನು  ಸಮಾದೇಷ್ಟರವರ ಕಚೇರಿ, ಗೃಹರಕ್ಷಕ ದಳ, ಬೆಂಗಳೂರು ಉತ್ತರ ಜಿಲ್ಲೆ, ವೆಸ್ಟ್ ಆಫ್ ಕಾರ್ಡ್ ರಸ್ತೆ, ಅಗ್ನಿಶಾಮಕ ಠಾಣೆ ಪಕ್ಕ, ರಾಜಾಜಿನಗರ, ಬೆಂಗಳೂರು-560010  ಅರ್ಜಿಗಳನ್ನು ಜನವರಿ 5 ರವರೆಗೆ ಮಧ್ಯಾಹ್ನ 2.30ರಿಂದ 5.00 ಗಂಟೆಯ ವರೆಗೆ ಉಚಿತವಾಗಿ ವಿತರಿಸಲಾಗುವುದು.

ಕರ್ನಾಟಕ ಸರ್ಕಾರದಿಂದ ಬೃಹತ್ ಉದ್ಯೋಗ ಮೇಳ ಆಯೋಜನೆ: ವಿದೇಶದಲ್ಲಿ ಕೆಲಸ ಗಿಟ್ಟಿಸಲು ಅವಕಾಶ!

ಅರ್ಜಿಯನ್ನು ಪಡೆಯುವ ಸಂದರ್ಭದಲ್ಲಿ ಜನ್ಮ ದಿನಾಂಕವುಳ್ಳ ಶಾಲೆಯ ಒರಿಜಿನಲ್ ಟಿ.ಸಿ ಅಥವಾ ಒರಿಜಿನಲ್ ಅಂಕಪಟ್ಟಿ ಹಾಜರುಪಡಿಸಿ ಅರ್ಜಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ  ಸಮಾದೇಷ್ಟರವರ ಕಚೇರಿ, ಗೃಹರಕ್ಷಕ ದಳ, ಬೆಂಗಳೂರು ಉತ್ತರ  ಜಿಲ್ಲೆ, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ, ಬೆಂಗಳೂರು-560010 ಅಥವಾ ದೂರವಾಣಿ ಸಂಖ್ಯೆ 080-23142542 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ಜಿಲ್ಲಾ ಹೋಮ್ ಗಾರ್ಡ್ಸ್ ಕಮಾಂಡೆಂಟ್  ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow Us:
Download App:
  • android
  • ios