BMRCL Recruitment 2022: ಫೈರ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ  ಖಾಲಿ ಇರುವ 6 ಫೈರ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದೆ.

Bengaluru Metro Rail Corporation Limited notification for recruitment 2022 Fire Inspector  post gow

ಬೆಂಗಳೂರು (ಮೇ.7): ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ (Bengaluru Metro Rail Corporation Limited- BMRCL) ಖಾಲಿ ಇರುವ ವಿವಿಧ  ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಫೈರ್ ಇನ್‌ಸ್ಪೆಕ್ಟರ್ (Fire Inspector)​ ಒಟ್ಟು 6 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೇ ದಿನ ಜೂನ್ 3 ಆಗಿದೆ.  ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ  ಅಧಿಕೃತ ವೆಬ್​ಸೈಟ್​ https://english.bmrc.co.in/ ಗೆ ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾಭ್ಯಾಸ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ B.Sc, B.E ಅಥವಾ B.Tech ವಿದ್ಯಾರ್ಹತೆ ಪಡೆದಿರಬೇಕು.

ಆಯ್ಕೆ ಪ್ರಕ್ರಿಯೆ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು  ಮೊದಲು ಶಾರ್ಟ್ ಲಿಸ್ಟ್ ಮಾಡಲಾಗುವುದು. ಬಳಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 

ONGC Recruitment 2022: ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ

ವಯೋಮಿತಿ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 20 ರಿಂದ 35 ವರ್ಷದ ಒಳಗಿರಬೇಕು.

ವೇತನ ವಿವರ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳೀಗೆ ಮಾಸಿಕ ₹40000 ವೇತನ ದೊರೆಯಲಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ಜೂನ್ 3 ರೊಳಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು.
General Manager (HR),
Bangalore Metro Rail Corporation Limited,
III Floor, BMTC Complex, K.H. Road,
Shanthinagar, Bengaluru-560027
Email: helpdesk@bmrc.co.in

VOCAL FOR LOCAL ಪ್ರತೀ ಜಿಲ್ಲೆಯಲ್ಲೂ ಉದ್ಯೋಗ ಮೇಳಕ್ಕೆ ಮುಂದಾದ ರಾಜ್ಯ ಸರಕಾರ

ಹಿರಿಯ ಸಂಶೋಧನಾ ​ ಫೆಲೋ ಸೇರಿ 4 ಹುದ್ದೆಗಳಿಗೆ ನೇಮಕಾತಿ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು (National Institute of Mental Health and Neuro Sciences) ಇಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಸೀನಿಯರ್ ರಿಸರ್ಚ್​​ ಫೆಲೋ (Senior Research Fellow) ಮತ್ತು ಪ್ರಾಜೆಕ್ಟ್​ ಅಸೋಸಿಯೇಟ್ (Project Associate) ಸೇರಿ ಒಟ್ಟು 4 ಹುದ್ದೆ ಖಾಲಿ ಇದ್ದು, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಮೇ.21 ಈ ಮೇಲ್  ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು nimhans.ac.in ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಒಟ್ಟು 4ಹುದ್ದೆಗಳ ಮಾಹಿತಿ ಇಂತಿದೆ:
ಹಿರಿಯ ಸಂಶೋಧನಾ ​ ಫೆಲೋ: 2 ಹುದ್ದೆಗಳು
ಯೋಜನಾ ಸಹಾಯಕ: 2 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ  ಹಿರಿಯ ಸಂಶೋಧನಾ ​ ಫೆಲೋ ಮತ್ತು  ಯೋಜನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಆಯಾಯ  ಹುದ್ದೆಗೆ ಸಂಬಂಧಿಸಿ   ಸ್ನಾತಕೋತ್ತರ ಪದವಿ ಪಡೆದಿರಬೇಕು. 

ಹಿರಿಯ ಸಂಶೋಧನಾ ​ ಫೆಲೋ ಹುದ್ದೆಗೆ  ಬಿಎಎಂಎಸ್ ಮಾಡಿರಬೇಕು. ಮತ್ತು  ಯೋಜನಾ ಸಹಾಯಕ ಹುದ್ದೆಗಳಿಗೆ (ಲೈಫ್ ಸೈನ್ಸ್ ಮತ್ತು ಯೋಗ) ಬಿ.ಟೆಕ್, ಸ್ನಾತಕೋತ್ತರ ಪದವಿ , BNYS, MBBS, BAMS, ಸ್ನಾತಕೋತ್ತರ ಡಿಪ್ಲೊಮಾ, M.Sc ಮಾಡಿರಬೇಕು.

Latest Videos
Follow Us:
Download App:
  • android
  • ios