BBMP Recruitment: 3500 ಪೌರ ಕಾರ್ಮಿಕರ ನೇಮಕಾತಿಗೆ ಬರೋಬ್ಬರಿ 11,500ಕ್ಕೂ ಹೆಚ್ಚು ಅರ್ಜಿ!

ಬಿಬಿಎಂಪಿ ವ್ಯಾಪ್ತಿಯಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕ ಭರ್ತಿಗಾಗಿ 11,500ಕ್ಕೂ ಅಧಿಕ ಅರ್ಜಿಗಳು ಬಂದಿವೆ. ಸರ್ಕಾರದಿಂದ ಆದೇಶ ಬಂದ ಕೂಡಲೇ ನೋಟಿಫಿಕೇಷನ್‌ ಹೊರಡಿಸಲು ಸಿದ್ಧರಿದ್ದೇವೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದ್ದಾರೆ.

Bengaluru's sanitation workers recruitment  More than 11,500 applications for  3500 post gow

ಬೆಂಗಳೂರು (ಮಾ.29): ಬಿಬಿಎಂಪಿ ವ್ಯಾಪ್ತಿಯಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕ ಭರ್ತಿಗಾಗಿ 11,500ಕ್ಕೂ ಅಧಿಕ ಅರ್ಜಿಗಳು ಬಂದಿವೆ. ಸರ್ಕಾರದಿಂದ ಆದೇಶ ಬಂದ ಕೂಡಲೇ ನೋಟಿಫಿಕೇಷನ್‌ ಹೊರಡಿಸಲು ಸಿದ್ಧರಿದ್ದೇವೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು. ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ. ರಾಜ್‌ಕುಮಾರ್‌ ಗಾಜಿನಮನೆಯಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್‌.ಅಂಬೇಡ್ಕರ್‌ ಹಾಗೂ ಪೌರಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಈಗಾಗಲೇ 3500 ಪೌರ ಕಾರ್ಮಿಕರ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಪ್ರಕ್ರಿಯೆ ನಡೆಯುತ್ತಿದೆ. ಇನ್ನೂ 11,500 ಅರ್ಜಿಗಳು ಬಂದಿವೆ. ನೇಮಕಾತಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಕೆಲ ನಿಯಮಗಳು ಬದಲಾವಣೆಯಾಗಿ ಬರುತ್ತಿದ್ದು ಯಾವುದೇ ಕ್ಷಣದಲ್ಲಿ ಆದೇಶ ಬಂದರೂ ಕೂಡಲೇ ನೋಟಿಫಿಕೇಷನ್‌ ಹೊರಡಿಸಲು ಪಾಲಿಕೆ ಸಿದ್ಧವಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ವಿಭಾಗದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವ 15 ಮಂದಿ ಪೌರ ಕಾರ್ಮಿಕರಿಗೆ ಅಭಿನಂದಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಆಡಳಿತಗಾರ ರಾಕೇಶ್‌ಸಿಂಗ್‌, ವಿಶೇಷ ಆಯುಕ್ತರಾದ ಜಯರಾಮ್‌ ರಾಯಪುರ, ಡಾ.ಹರೀಶ್‌ಕುಮಾರ್‌, ಡಾ.ಆರ್‌.ಎಲ್‌.ದೀಪಕ್‌, ಪಿ.ಎನ್‌.ರವೀಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ.ರಾಜ್‌ಕುಮಾರ್‌ ಗಾಜಿನಮನೆಯಲ್ಲಿ ಆಯೋಜಿಸಲಾಗಿದ್ದ ಪೌರಕಾರ್ಮಿಕರ ದಿನಾಚರಣೆಯಲ್ಲಿ 15 ಮಂದಿ ಸಾಧಕ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್‌ಸಿಂಗ್‌ ಮತ್ತು ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಇದ್ದರು.

GITHUB LAYOFFS ಇಂಡಿಯಾ ಗಿಟ್‌ಹಬ್‌ನಲ್ಲಿದ್ದ ಎಲ್ಲಾ ಇಂಜಿನಿಯರ್‌ಗಳ ವಜಾ!

ಲೋಕೋಪಯೋಗಿ ಇಲಾಖೆಯ 143 ಸಹಾಯಕ ಎಂಜಿನಿಯ​ರ್ಸ್‌ ಗೆ ನೇಮಕಾತಿ ಆದೇಶ ಪ್ರತಿ ವಿತರಣೆ
ಬೆಂಗಳೂರು: ಸರ್ಕಾರದ ಪ್ರತಿಯೊಂದು ಅಭಿವೃದ್ಧಿ ಯೋಜನೆಗಳನ್ನು ಗುಣಮಟ್ಟದಿಂದ ಹಾಗೂ ಕಾಲಮಿತಿಯಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸುವಲ್ಲಿ ಎಂಜಿನಿಯರ್‌ಗಳ ಪಾತ್ರ ದೊಡ್ಡದು. ಹಾಗಾಗಿ ಅವರು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಕಠಿಬದ್ಧವಾಗಿ ಶ್ರಮಿಸಬೇಕು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ.

Accenture Layoffs: ವಾರ್ಷಿಕ ಆದಾಯ ಜೊತೆಗೆ 19 ಸಾವಿರ ಉದ್ಯೋಗಿಗಳ ಕಡಿತ!

ಕಬ್ಬನ್‌ ಪಾರ್ಕ್ನ ಎನ್‌ಜಿಒ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 143 ಸಹಾಯಕ ಎಂಜಿನಿಯರ್‌ ಮತ್ತು 18 ಕಿರಿಯ ಎಂಜಿನಿಯರ್‌ಗಳಿಗೆ ನೇಮಕಾತಿ ಆದೇಶ ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ರಸ್ತೆ, ಸೇತುವೆ, ಕಟ್ಟಡ ನಿರ್ಮಾಣ ಸೇರಿದಂತೆ ಸರ್ಕಾರ ನಿರ್ಧಾರ ಮಾಡುವ, ಅನುಮೋದನೆ ನೀಡುವ ಯಾವುದೇ ಯೋಜನೆಗಳು ಸಮರ್ಪಕ ರೀತಿಯಲ್ಲಿ ಪೂರ್ಣಗೊಳ್ಳಲು ಎಂಜಿನಿಯರ್‌ಗಳು ಮಹತ್ವದ ಪಾತ್ರ ವಹಿಸುತ್ತಾರೆ. ಅವರೆಲ್ಲರೂ ದಕ್ಷ ಹಾಗೂ ಪ್ರಮಾಣಿಕವಾಗಿ ಕೆಲಸ ನಿರ್ವಹಿಸಿ ಇಲಾಖೆ ಹಾಗೂ ರಾಜ್ಯಕ್ಕೆ ಒಳ್ಳೆಯ ಹೆಸರು ತರಬೇಕು ಎಂದರು. ಈ ವೇಳೆ ಇಲಾಖೆ ಕಾರ್ಯದರ್ಶಿ ಡಾ.ಕೃಷ್ಣಾರೆಡ್ಡಿ, ಮುಖ್ಯ ಎಂಜಿನಿಯರ್‌ ಗೋವಿಂದರಾಜು ಇತರೆ ಅಧಿಕಾರಿಗಳು ಇದ್ದರು.

Latest Videos
Follow Us:
Download App:
  • android
  • ios