Bengaluru University Recruitment: ಫುಲ್ ಟೈಂ/ಪಾರ್ಟ್​​ ಟೈಂ ಉಪನ್ಯಾಸಕ ಹುದ್ದೆ ಖಾಲಿ ಇದೆ

ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ವಿವಿಧ ಫುಲ್ ಟೈಂ/ಪಾರ್ಟ್​​ ಟೈಂ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 30, 2022 ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

bengaluru university recruitment notification for full-time-and-part-time-guest-faculty-posts gow

ಬೆಂಗಳೂರು (ನ.19): ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ವಿವಿಧ ಫುಲ್ ಟೈಂ/ಪಾರ್ಟ್​​ ಟೈಂ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 30, 2022 ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಪಡೆದಿರುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಅಧಿಕೃತ ವೆಬ್‌ತಾಣ  bangaloreuniversity.ac.in  ಗೆ ಭೇಟಿ ನೀಡಲು ಕೋರಲಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯ ಉದ್ಯೋಗ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನದನ್ನು ತಿಳಿಯಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಪೂರ್ಣ ಅಧಿಸೂಚನೆಯನ್ನು ಓದಿಕೊಳ್ಳಲು ಮನವಿ ಮಾಡಿಕೊಳ್ಳಲಾಗಿದೆ.

ಶೈಕ್ಷಣಿಕ ವಿದ್ಯಾಭ್ಯಾಸ: ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ವಿವಿಧ ಫುಲ್ ಟೈಂ/ಪಾರ್ಟ್​​ ಟೈಂ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಸ್ನಾತಕೋತ್ತರ ವಿದ್ಯಾರ್ಹತೆ ಪಡೆದಿರಬೇಕು. 

ಅರ್ಜಿ ಶುಲ್ಕ: ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ವಿವಿಧ ಫುಲ್ ಟೈಂ/ಪಾರ್ಟ್​​ ಟೈಂ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವ ಅಗತ್ಯವಿಲ್ಲ.

ಆಯ್ಕೆ ಪ್ರಕ್ರಿಯೆ: ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ವಿವಿಧ ಫುಲ್ ಟೈಂ/ಪಾರ್ಟ್​​ ಟೈಂ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ: ಫ್ಯಾಕಲ್ಟೀಸ್ ಆರ್ಟ್ಸ್ ಅಡಿಯಲ್ಲಿ ಸ್ನಾತಕೋತ್ತರ ವಿಭಾಗಗಳ ಆಯಾ ಪ್ರಾಂಶುಪಾಲರು/ನಿರ್ದೇಶಕರು/ಅಧ್ಯಕ್ಷರು/ಸಂಯೋಜಕರು, ವಿಜ್ಞಾನ, ವಾಣಿಜ್ಯ, ಶಿಕ್ಷಣ ಮತ್ತು ದೈಹಿಕ ಶಿಕ್ಷಣ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನ ಭಾರತಿ ಕ್ಯಾಂಪಸ್,
ಬೆಂಗಳೂರು - 560056 (ನೀವು ಯಾವ ವಿಭಾಗಕ್ಕೆ ಅರ್ಜಿ ಸಲ್ಲಿಸುತ್ತಿದ್ದೀರಿ ಆ ವಿಭಾಗವನ್ನು ಸ್ಪಷ್ಟವಾಗಿ ನಮೂದಿಸಬೇಕು)

ವೇತನ ವಿವರ: ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ವಿವಿಧ ಫುಲ್ ಟೈಂ/ಪಾರ್ಟ್​​ ಟೈಂ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ  ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ದೊರೆಯಲಿದೆ.

ಅತಿಥಿ ಉಪನ್ಯಾಸಕರ ನೇಮಕಕ್ಕೆ ಹೊಸ ಆದೇಶ ಹೊರಡಿಸಿ, ಕುಲಪತಿಗೆ ಎನ್‌ಎಸ್‌ಯುಐ ಮನವಿ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಈ ಬಾರಿ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ನಿಯಮಾವಳಿಗಳಂತೆ ನೇಮಕ ಮಾಡದೇ ಮುಂದುವರಿಸುತ್ತಿರುವುದನ್ನು ವಿರೋಧಿಸಿ ಎನ್‌ಎಸ್‌ಯುಐ ವತಿಯಿಂದ ಪ್ರತಿಭಟನೆ ನಡೆಸಿ ಕುಲಪತಿ ಅವರಿಗೆ ಮನವಿ ಸಲ್ಲಿಸಲಾಯಿತು.

ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಪ್ರತಿ ವರ್ಷ ಅಧಿಸೂಚನೆ ಹೊರಡಿಸುವ ಮೂಲಕ ಮಾಡಿಕೊಳ್ಳಬೇಕು. ಇದರಿಂದ ಅವಕಾಶ ವಂಚಿತ ಉಪನ್ಯಾಸಕರಿಗೆ ಅವಕಾಶ ಸಿಗುವ ಸಾಧ್ಯತೆ ಇತ್ತು. ಆದರೆ, ಕೋವಿಡ್‌ ಕಾರಣದಿಂದಾಗಿ ಕಳೆದೆರಡು ವರ್ಷ ಈಗಾಗಲೇ ನೇಮಕಾತಿ ಹೊಂದಿದ್ದವರನ್ನೇ ಮುಂದುವರಿಸಲಾಯಿತು. ಆದರೆ, ಈಗ ಹಿಂದಿನಂತೆಯೇ ಅಧಿಸೂಚನೆ ಹೊರಡಿಸುವ ಮೂಲಕ ನೇಮಕಾತಿ ಮಾಡಬೇಕು. ಆದರೆ, ಈ ನಿಯಮಾವಳಿಗಳನ್ನು ಗಾಳಿಗೆ ತೂರಿ ಹೊಸದಾಗಿ ಅಧಿಸೂಚನೆ ಹೊರಡಿಸದೇ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

UPSC Recruitment 2022: ಉಪನ್ಯಾಸಕ ಮತ್ತು ಇತರ ಹುದ್ದೆಗಳಿಗೆ ನೇಮಕಾತಿ

ಈ ನೇಮಕ ನೀತಿಯಿಂದ ನೆಟ್‌, ಸೆಟ್‌, ಪಿಎಚ್‌.ಡಿ ಪದವಿ ಪೂರೈಸಿ ಉದ್ಯೋಗ ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ಈ ಹಿಂದೆ ನೇಮಕ ಮಾಡಿದವರನ್ನೇ ಮುಂದುವರಿಸಲು ವಿ.ವಿ.ಯಲ್ಲಿ ಹಣದ ವ್ಯವಹಾರ ನಡೆದಿರುವ ಅನುಮಾನಗಳೂ ವ್ಯಕ್ತವಾಗುತ್ತಿದೆ. ಆದ್ದರಿಂದ ಕೂಡಲೇ ಕುಲಪತಿ ಅವರು ನೇಮಕಾತಿ ಅಧಿಸೂಚನೆ ಹೊರಡಿಸಿಯೇ ನೇಮಕಾತಿ ಮಾಡಿಕೊಳ್ಳಬೇಕೆಂದು ಆಗ್ರಹಿಸಿದರು.

ಮಂಗಳೂರು: ಕರಾವಳಿಯಲ್ಲಿ ಸೇನಾ ಪೂರ್ವ ಕೇಂದ್ರದ ಮೊದಲ ತರಬೇತಿ ಆರಂಭ 

ಮನವಿ ಅರ್ಪಿಸುವ ಸಂದರ್ಭ ಎನ್‌ಎಸ್‌ಯುಐ ಜಿಲ್ಲಾ ಅಧ್ಯಕ್ಷ ವಿಜಯ್‌, ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ಗ್ರಾಮಾಂತರ ಅಧ್ಯಕ್ಷ ಹರ್ಷಿತ್‌, ನಗರ ಅಧ್ಯಕ್ಷ ಚರಣ್‌, ಭದ್ರಾವತಿ ತಾಲೂಕು ಉಪಾಧ್ಯಕ್ಷ ಕೀರ್ತಿ, ಚಂದ್ರೋಜಿ ರಾವ್‌, ವಿಶಾಲ್‌ ಇದ್ದರು.

Latest Videos
Follow Us:
Download App:
  • android
  • ios