ಭಾರತ್ ಪೆಟ್ರೋಲಿಯಂನಲ್ಲಿ ಅಪ್ರೆಂಟಿಸ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತದ ಸಾರ್ವಜನಿಕ ವಲಯದ ಪ್ರಮುಖ ಕಂಪನಿಯಾಗಿರುವ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ 168 ಅಪ್ರೆಂಟಿಸ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ನೀವೇನಾದ್ರೂ ಇಂಜಿನಿಯರಿಂಗ್ ಡಿಗ್ರಿ ಮುಗಿಸಿ ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದೀರಾ? ಖಾಸಗಿ ಕಂಪನಿಗಳ ಇಂಟರ್‌ವ್ಯೂ ಅಟೆಂಡ್ ಮಾಡಿ ಮಾಡಿ ಬೇಜಾರಾಗಿದ್ಯಾ? ಹಾಗಿದ್ರೆ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ( ಬಿಪಿಸಿಎಲ್)ನಲ್ಲಿ ಒಮ್ಮೆ ಟ್ರೈ ಮಾಡಿ ನೋಡಿ.
ಸದ್ಯ 168 ಅಪ್ರೆಂಟಿಸ್ ಎಂಜಿನಿಯರ್ ಹುದ್ದೆಗಳಿಗೆ ಬಿಪಿಸಿಎಲ್ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಬಿಪಿಸಿಎಲ್ನ ಅಧಿಕೃತ ವೆಬ್ಸೈಟ್ www.bharatpetroleum.comಗೆ ಭೇಟಿ ನೀಡಿ ವಿವರಗಳನ್ನು ಪರಿಶೀಲಿಸಬಹುದು.
ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗದ್ದು, ಜುಲೈ ೨೭ ಅರ್ಜಿ ಸಲ್ಲಿಸಲು ಅಂತಿಮ ದಿನವಾಗಿದೆ, NATS ಪೋರ್ಟಲ್ನಲ್ಲಿ ಜುಲೈ ೨೫ರೊಳಗೆ ನೋಂದಣಿ ಮಾಡಿಕೊಂಡವರು, ನೇರವಾಗಿ ಬಿಪಿಸಿಎಲ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಎಂಜಿನಿಯರ್ ಹುದ್ದೆಗಳ ನೇಮಕಾತಿಯ ಅಧಿಸೂಚನೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.
ಸ್ಪೋರ್ಟ್ಸ್ ಕೋಟಾದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಆಗಿ
ಕೊಚ್ಚಿಯ ಅಂಬಾಮುಗಲ್ನಲ್ಲಿರೋ ಕೊಚ್ಚಿ ರಿಫೈನರಿ, ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್‌ನ ವಿವಿಧ ಇಲಾಖೆಗಳಲ್ಲಿ ಅಪ್ರೆಂಟಿಸ್ ಹುದ್ದೆಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗುತ್ತಿದೆ. ಲಭ್ಯವಿರುವ ೧೬೮ ಖಾಲಿ ಹುದ್ದೆಗಳು ಪದವೀಧರ ಮತ್ತು ಡಿಪ್ಲೊಮಾ ಅಪ್ರೆಂಟಿಸ್‌ಶಿಪ್‌ಗಳಾಗಿದ್ದು, ಅಭ್ಯರ್ಥಿಗಳು ಅಪ್ರೆಂಟಿಸ್‌ಶಿಪ್ ತಿದ್ದುಪಡಿ ಕಾಯ್ದೆ 1973 ರ ಅಡಿಯಲ್ಲಿ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ತರಬೇತಿಯನ್ನು ಮಾಡಬೇಕಾಗುತ್ತದೆ. ಪದವೀಧರ ಅಪ್ರೆಂಟಿಸ್‌ಗಳಿಗೆ ತಿಂಗಳಿಗೆ 25 ಸಾವಿರ ರೂ ಹಾಗೂ ಡಿಪ್ಲೊಮಾ ಅಪ್ರೆಂಟಿಸ್‌ಗಳಿಗೆ 18,000 ರೂ. ಸ್ಟೆಫೈಂಡ್ ನೀಡಲಾಗುತ್ತದೆ.
2019, 2020 ಮತ್ತು 2021 ರಿಂದ ಎಂಜಿನಿಯರಿಂಗ್ ಪದವಿ ಮತ್ತು ಡಿಪ್ಲೊಮಾ ಮುಗಿಸಿರುವ ಅಭ್ಯರ್ಥಿಗಳು ಬಿಪಿಸಿಎಲ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ವಿಶೇಷ ಅಂದ್ರೆ ಖಾಲಿಯಿರುವ 168 ಹುದ್ದೆಗಳ ಪೈಕಿ 120 ಹುದ್ದೆಗಳು ಶೇಕಡಾ 60ರಷ್ಟು ಅಂಕಗಳೊಂದಿಗೆ ಪ್ರಥಮ ದರ್ಜೆ ಪಡೆದ ಎಂಜಿನಿಯರಿಂಗ್ ಪದವೀಧರರಿಗೆ ಮೀಸಲಿರಿಸಲಾಗಿದೆ.
ಕೆಮಿಕಲ್ ಇಂಜಿನಿಯರಿಂಗ್ -೨೯ ಹುದ್ದೆ, ಸಿವಿಲ್ ಇಂಜಿನಿಯರಿಂಗ್ -೮, ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ -೧೫, ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ೯, ಸೇಫ್ಟಿ ಇಂಜಿನಿಯರಿಂಗ್ - ೧೨, ಮೆಕ್ಯಾನಿಕಲ್ ಇಂಜಿನಿಯರಿಂಗ್- ೩೫ ಹುದ್ದೆ, ಇಂಶ್ರುಮೆಂಟೇಷನ್ ಇಂಜಿನಿಯರಿಂಗ್ -೧೦ ಹುದ್ದೆ, ಮೆಟಾಲರ್ಜಿ ಇಂಜಿನಿಯರಿಂಗ್- ೨ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಆರ್ಥಿಕ ಹಿಂಜರಿತ ಉಂಟಾದ್ರೆ, ಯಾವೆಲ್ಲ ಉದ್ಯೋಗಳು ಉಳಿಯಲಿವೆ?
ಇನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಡಿಪ್ಲೋಮಾ ಅಥವಾ ಇಂಜಿನಿಯರಿಂಗ್‌ನಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರುವ ಅಭ್ಯರ್ಥಿಗಳನ್ನು ೪೮ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಕೆಮಿಕಲ್ ಇಂಜಿನಿಯರಿಂಗ್ ಪೂರೈಸಿದವರಿಗೆ ೨೬ ಹುದ್ದೆಗಳು, ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ೭, ಮೆಕ್ಯಾನಿಕಲ್ ಇಂಜಿನಿಯರಿಂಗ್ ೯ ಹಾಗೂ ಇಂಶ್ರುಮೆಂಟೇಷನ್ ಇಂಜಿನಿಯರಿಂಗ್ -೬ ಹುದ್ದೆಗಳನ್ನ ಭರ್ತಿ ಮಾಡಿಕೊಳ್ಳಲಾಗುತ್ತದೆ,
ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಟ ವಯೋಮಿತಿ ೧೮ ವರ್ಷ, ಗರಿಷ್ಟ ವಯೋಮಿತಿ ೨೭ ವರ್ಷಗಳಾಗಿರುತ್ತದೆ. ಸರ್ಕಾರಿ ನಿಯಮದ ಪ್ರಕಾರ ಕಾಯ್ದಿರಿಸಿದ ವರ್ಗಗಳಿಗೆ ವಯೋಮಿತಿಯಿಂದ ಸಡಿಲಿಕೆ ನೀಡಲಾಗುವುದು.
ಅರ್ಹತಾ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಪ್ರೆಂಟಿಸ್ಗಳನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ ಜನರಲ್ / ಎಸ್‌ಸಿ / ಎಸ್‌ಟಿ ಐ ಒಬಿಸಿ ಐ ಪಿಡಬ್ಲ್ಯೂಡಿ ವಿಭಾಗಗಳ ಪ್ರಕಾರ ಅಂತಿಮ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ.
PU ಪಾಸಾದವರಿಗೆ ಆಯಿಲ್ ಇಂಡಿಯಾ ಕಂಪನಿಯಲ್ಲಿ ಕೆಲಸ, ಅಪ್ಲೈ ಮಾಡಿ
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇದು ಅಪ್ರಂಟಿಸ್ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಹಾಗಾಗಿ, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಸ್ಟೈಫಂಡ್ ಕೂಡ ಇದ್ದೇ ಇರುತ್ತದೆ. ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನವಾಗಿದೆ.