Asianet Suvarna News Asianet Suvarna News

BWSSB Recruitment 2022: ಬೆಂಗಳೂರು ಜಲಮಂಡಳಿಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಫೆಬ್ರವರಿ 15 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

BWSSB Recruitment 2022 notification for Law Officer post gow
Author
Bengaluru, First Published Feb 1, 2022, 9:21 PM IST

ಬೆಂಗಳೂರು(ಫೆ.1): ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (Bangalore Water Supply and Sewerage Board) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅಗತ್ಯ ಇರುವ ಕಾನೂನು ಅಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಿಕೊಳ್ಳುತ್ತಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ  ಫೆಬ್ರವರಿ 15 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ https://bwssb.karnataka.gov.in/ ಗೆ ಭೇಟಿ ನೀಡಿ.

ಅರ್ಹತೆ: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನ್ಯಾಯಾಂಗ ಇಲಾಖೆಯಲ್ಲಿ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ / ಸ್ವಯಂ ನಿವೃತ್ತಿ ಹೊಂದಿರಬೇಕು. 70 ವರ್ಷಗಳ ವಯಸ್ಸಿನ ಒಳಗಿನವರಾಗಿರಬೇಕು ಮತ್ತು ಆರೋಗ್ಯವಾಗಿ ಸದೃಢರಾಗಿರಬೇಕು.

ಅರ್ಜಿ ಸಲ್ಲಿಸುವ ವಿಧಾನ: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವೈಯಕ್ತಿಕ ವಿವರ, ಸರ್ಕಾರಿ ಸೇವೆ ಸಲ್ಲಿಸಿರುವ ವಿವರ ಹಾಗೂ ಪಿಂಚಣಿ ಪುಸ್ತಕದ ನಕಲು ಪ್ರತಿಯ ವಿವರಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ : 'ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, 1ನೇ ಮಹಡಿ, ಕಾವೇರಿ ಭವನ, ಕೆ.ಜಿ ರಸ್ತೆ, ಬೆಂಗಳೂರು', ಇಲ್ಲಿಗೆ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಹುದ್ದೆಗೆ ಸಂಬಂಧಿಸಿದ ಇತರ ಮಾಹಿತಿ ಪಡೆಯಲು ಕಚೇರಿಯ ಕರ್ತವ್ಯದ ವೇಳೆ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 05-30 ಗಂಟೆಯೊಳಗೆ ಪಡೆಯಲು ಕೋರಲಾಗಿದೆ.

BENGALURU ANGANWADI RECRUITMENT 2022: ಬೆಂಗಳೂರಿನಲ್ಲಿ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (Bengaluru Metro Rail Corporation Limited- BMRCL)​ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸಹಾಯಕ ಮ್ಯಾನೇಜರ್‌, ಸೀನಿಯರ್ ಟ್ರಾನ್ಸ್​​​ಪೋರ್ಟ್​​ ಪ್ಲ್ಯಾನರ್  ಸೇರಿ ಒಟ್ಟು 11 ಹುದ್ದೆಗಳು ಖಾಲಿ ಇವೆ. ಜನವರಿ 21ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​​​ಲೈನ್​(Online) ಮತ್ತು ಆಫ್‌ಲೈನ್ ಮೂಲಕ ಕೂಡ ಅರ್ಜಿ ಸಲ್ಲಿಸಲು ಫೆಬ್ರವರಿ 21 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ  ಅಧಿಕೃತ ವೆಬ್​ಸೈಟ್​ https://english.bmrc.co.in/ ಗೆ ಭೇಟಿ ನೀಡಬಹುದು.

ಒಟ್ಟು 11 ಹುದ್ದೆಗಳ ಮಾಹಿತಿ
ಚೀಫ್​ ಎಂಜಿನಿಯರ್ಸ್​/ಅಡ್ವೈಸರ್ಸ್​-4
ಸೀನಿಯರ್ ಟ್ರಾನ್ಸ್​​ಪೋರ್ಟ್​ ಪ್ಲ್ಯಾನರ್(ಕನ್ಸಲ್ಟೆಂಟ್)-1
ಅಸಿಸ್ಟೆಂಟ್ ಮ್ಯಾನೇಜರ್(ಪ್ರಾಪರ್ಟಿ ಡೆವಲಪ್​ಮೆಂಟ್)-6

BEL Recruitment 2022: ವಿವಿಧ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಫೆ.4 ಕೊನೆಯ ದಿನ

ಶೈಕ್ಷಣಿಕ ವಿದ್ಯಾರ್ಹತೆ: ನಮ್ಮ ಮೆಟ್ರೋ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹುದ್ದೆಗನುಸಾರವಾಗಿ ಓದಿರಬೇಕು
ಚೀಫ್​ ಎಂಜಿನಿಯರ್ಸ್​/ಅಡ್ವೈಸರ್ಸ್​-ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ, ಬಿ.ಟೆಕ್ ಮಾಡಿರಬೇಕು.
ಸೀನಿಯರ್ ಟ್ರಾನ್ಸ್​​ಪೋರ್ಟ್​ ಪ್ಲ್ಯಾನರ್(ಕನ್ಸಲ್ಟೆಂಟ್)- ಸಿವಿಲ್ ಎಂಜಿನಿಯರಿಂಗ್, ಟ್ರಾನ್ಸ್​ಪೋರ್ಟ್​ ಪ್ಲ್ಯಾನಿಂಗ್​​ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಅಸಿಸ್ಟೆಂಟ್ ಮ್ಯಾನೇಜರ್(ಪ್ರಾಪರ್ಟಿ ಡೆವಲಪ್​ಮೆಂಟ್)- ಎಂಬಿಎ, ಎಕನಾಮಿಕ್ಸ್​/ಕಾಮರ್ಸ್​​ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್
3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್​
ಕೆ.ಹೆಚ್​. ರಸ್ತೆ , ಶಾಂತಿನಗರ
ಬೆಂಗಳೂರು-560027

Follow Us:
Download App:
  • android
  • ios