C.V. Raman Hospital Recruitment 2022: ಖಾಲಿ ಇರುವ Pharmacist ಮತ್ತು Staff Nurse ಹುದ್ದೆಗೆ ನೇರ ಸಂದರ್ಶನ
- ಖಾಲಿ ಇರುವ ಹುದ್ದೆ ಭರ್ತಿಗೆ ಮುಂದಾದ ಸಿ.ವಿ.ರಾಮನ್ ಆಸ್ಪತ್ರೆ
- ಸ್ಟಾಫ್ ನರ್ಸ್ ಮತ್ತು ಫಾರ್ಮಾಸಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಿ
- ಜನವರಿ 5 ರಂದು ನಡೆಯಲಿದೆ ನೇರ ಸಂದರ್ಶನ
ಬೆಂಗಳೂರು(ಡಿ.28): ಸರ್ ಸಿ.ವಿ.ರಾಮನ್ ಜನರಲ್ ಆಸ್ಪತ್ರೆ (Sir C.V.Raman General Hospital) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಫಾರ್ಮಾಸಿಸ್ಟ್ (Pharmacist) ಮತ್ತು ಸ್ಟಾಫ್ ನರ್ಸ್ (Staff Nurse) ಹೀಗೆ ಒಟ್ಟು 2 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ನೇರ ಸಂದರ್ಶನದ (Walk-in-Interview) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಜನವರಿ 5, 2022ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಆಸಕ್ತರು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ karnataka.gov.in ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಸರ್ ಸಿ.ವಿ.ರಾಮನ್ ಜನರಲ್ ಆಸ್ಪತ್ರೆಯಲ್ಲಿ ಖಾಲಿ ಇರುವ ಫಾರ್ಮಾಸಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಫಾರ್ಮಾ, ಡಿ.ಫಾರ್ಮಾ ಮಾಡಿರಬೇಕು. ಮತ್ತು ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಡಿಪ್ಲೋಮಾ, ಬಿಎಸ್ಸಿ ನರ್ಸಿಂಗ್, GNM ಮಾಡಿರಬೇಕು.
ಅನುಭವ: ಫಾರ್ಮಾಸಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ವೇತನ ಮತ್ತು ವಯೋಮಿತಿ: ಫಾರ್ಮಾಸಿಸ್ಟ್ ಮತ್ತು ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 60 ವರ್ಷ ಮೀರಿರಬಾರದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 13,000 ರೂ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಫಾರ್ಮಾಸಿಸ್ಟ್ ಮತ್ತು ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ:
ಸರ್ ಸಿ.ವಿ.ರಾಮನ್ ಜನರಲ್ ಆಸ್ಪತ್ರೆ
ಇಂದಿರಾನಗರ
ಬೆಂಗಳೂರು-560038
NTPC RECRUITMENT 2022: ಸಹಾಯಕ ಕಾನೂನು ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 1.2 ಲಕ್ಷ ವೇತನ
Msc ಆದವರಿಗೆ ಕನ್ನಡ ಸ್ಪಷ್ಟವಾಗಿ ಬರೆಯಲು ಬಂದರೆ ನಿಮ್ಹಾನ್ಸ್ನಲ್ಲಿ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು (National Institute of Mental Health and Neuro Sciences) ಇಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 1 ಜೂನಿಯರ್ ರಿಸರ್ಚ್ ಫೆಲೋ (Junior Research Fellow) ಹುದ್ದೆ ಖಾಲಿ ಇದ್ದು, ಎಂಎಸ್ಸಿ (MSc), ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಡಿಸೆಂಬರ್ 24ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು. ಜನವರಿ 2, 2022 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು nimhans.ac.in ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ನಿಮ್ಹಾನ್ಸ್ನಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಆಡಿಯಾಲಜಿ ಮತ್ತು ಸ್ಪೀಚ್ & ಲಾಂಗ್ವೇಜ್ ಫೆಥಾಲಜಿಯಲ್ಲಿ ಎಂ.ಎಸ್ಸಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ಮಾತ್ರವಲ್ಲ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಮಾತನಾಡಲು ಬರಬೇಕು.
ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ- pradaud@gmail.com ಗೆ ಜನವರಿ 2, 2022ರೊಳಗೆ ಕಳುಹಿಸಲು ಕೋರಲಾಗಿದೆ.