ಅತಿಥಿ ಉಪನ್ಯಾಸಕರಿಗೆ 8000 ರೂ. ಗೌರವ ಧನ ಹೆಚ್ಚಳ ಮಾಡ್ತೇವೆಂದ ಸಿಎಂ ಸಿದ್ದರಾಮಯ್ಯ!

ರಾಜ್ಯಾದ್ಯಂತ ಸೇವಾ ಭದ್ರತೆಗಾಗಿ ಮುಸ್ಕರ ಹಮ್ಮಿಕೊಂಡಿರುವ ಅತಿಥಿ ಉಪನ್ಯಾಸಕರಿಗೆ 5 ಸಾವಿರ ರೂ.ಗಳಿಂದ 8 ಸಾವಿರ ರೂ.ವರೆಗೆ ಗೌರವ ಧನ ಹೆಚ್ಚಳ ಮಾಡಲು ಸಿಎಂ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ.

CM Siddaramaiah agrees to increase honorarium of Rs 8000 for guest lecturers sat

ಬೆಂಗಳೂರು (ಜ.06): ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರು ಸೇವಾ ಭದ್ರತೆಗೆ ಒತ್ತಾಯಿಸಿ ಪ್ರತಿಭಟನೆ ಮಾಡಿದ್ದು, ಈಗ ಪಾದಯಾತ್ರೆ ಮೂಲಕ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿಯೂ ಮುಷ್ಕರ ಮಾಡುತ್ತಿದ್ದಾರೆ. ಪ್ರತಿಭಟನಾ ನಿರತರ ಪೈಕಿ ಕೆಲವು ಮುಖಂಡರೊಂದಿಗೆ ಚರ್ಚೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ ಎಲ್ಲ ಉಪನ್ಯಾಸಕರಿಗೆ 5,000 ರೂ.ಗಳಿಂದ 8,000 ರೂ.ಗಳಷ್ಟು ಗೌರವ ಧನ ಹೆಚ್ಚಳ ಮಾಡಲಾಗುವುದು ಎಂದು ಭರವಸೆ ನೀಡುವ ಮೂಲಕ ಮುಷ್ಕರ ವಾಪಸ್ ಪಡೆಯುವಂತೆ ಮನವಿ ಮಾಡಿದರು.

ವಿಧಾನಸೌಧದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರ ನೇತೃತ್ವದಲ್ಲಿ ಅತಿ ಉಪನ್ಯಾಸಕ ಹೋರಾಟಗಾರರ ಮುಖಂಡರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ಎಲ್ಲ ಅತಿಥಿ ಉಪನ್ಯಾಸಕರಿಗೆ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡುವುದಕ್ಕೆ ಸಮ್ಮತಿ ಸೂಚಿಸಿದರು. ಇದರ ಬೆನ್ನಲ್ಲಿಯೇ ತಮ್ಮ ಮುಷ್ಕರವನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದರು.

ಸಚಿವಗಿರಿ ಅಂದ್ರೆ ಚಮಚಾಗಿರಿಯಲ್ಲ, ಸತ್ಯದ ಪರ ನಿಲ್ಲೋ ಗಂಡಸ್ತನವಿಲ್ಲವೆಂದು ಒಪ್ಪಿಕೊಳ್ಳಿ: ಕುಮಾರಸ್ವಾಮಿ ಟೀಕೆ

ಇನ್ನು ಗೌರವಧನ ಹೆಚ್ಚಳಕ್ಕೆ ಕೆಲವು ಷರತ್ತುಗಳನ್ನು ಹಾಕಿರುವ ಸರ್ಕಾರ ರಾಜ್ಯದಲ್ಲಿ ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5ಸಾವಿರ ರೂ. ಹೆಚ್ಚಳ ಮಾಡಲಾಗುವುದು. 5ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ. ಹೆಚ್ಚಳ, 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹೆಚ್ಚಳ ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ.ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

ಅತಿಥಿ ಉಪನ್ಯಾಸಕರಿಗೆ ಸೇವಾ ಭಧ್ರತೆ:

  • ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ.
  • ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಡು ನೀಡುವುದು. 
  • ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು.
  • 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಲಾಯಿತು.

ಬೆಂ.ವಿವಿ ಕ್ಯಾಂಪಸ್‌ನ 34.4 ಎಕರೆ ಒತ್ತುವರಿ ಹಿಂಪಡೆಯಿರಿ: ಸಚಿವ ಎಂ.ಸಿ.ಸುಧಾಕರ್ ಸೂಚನೆ

ಇದರೊಂದಿಗೆ ನೇಮಕಾತಿಯಲ್ಲಿ ಅವರ ಸೇವಾನುಭವ ಆಧರಿಸಿ, ವೈಟೇಜ್‌ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ, ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್‌ ಪ್ರಕ್ರಿಯೆ ಸರಳೀಕರಣಗೊಳಿಸಲು ಸಹ ಸಮ್ಮತಿ ನೀಡಲಾಗಿದೆ. ಅತಿಥಿ ಉಪನ್ಯಾಸಕರು ಕೂಡಲೇ ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದರು. ಮುಷ್ಕರ ನಿರತ ಅತಿಥಿ ಉಪನ್ಯಾಸಕರ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಬೇಡಿಕೆಗಳ ಕುರಿತು ಚರ್ಚಿಸಿದರು. ಈ ವೇಳೆ ಉನ್ನತ ಶಿಕ್ಷಣ ಸಚಿವ ಎಂ.‌ಸಿ.ಸುಧಾಕರ್ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಇತರರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios