PSI Recruitment ಕಲ್ಯಾಣ ಕರ್ನಾಟಕ ಭಾಗಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ ಕೈ ಶಾಸಕರು
* ಪಿಎಸ್‌ಐ ನೇಮಕಾತಿಯಲ್ಲಿ ಅನ್ಯಾಯ
* ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯ
* ಮೆರಿಟ್, ರೋಸ್ಟರ್ ಅನ್ವಯ ಆದ್ಯತೆ ನೀಡಬೇಕೆಂದು ಆಗ್ರಹ
ಕೊಪ್ಪಳ/ಬೀದರ್, (ಜ. 22): ರಾಜ್ಯ ಪೊಲೀಸ್ ಇಲಾಖೆಯ ಪ್ರಸ್ತುತ ಪಿಎಸ್‌ಐ ನೇಮಕಾತಿಯ (PSI Recruitment) ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸೇಕೆಂದು ಒತ್ತಾಯಗಳು ಕೇಳಿಬರುತ್ತಿವೆ.
ಕಲ್ಯಾಣ ಕರ್ನಾಟಕ (kalyana karnataka) ಪ್ರದೇಶದ ಅಭ್ಯರ್ಥಿಗಳಿಗೆ ಮೆರಿಟ್, ರೋಸ್ಟರ್ ಅನ್ವಯ ಆದ್ಯತೆ ನೀಡಬೇಕೆಂದು ಕಾಂಗ್ರೆಸ್ ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪೂರ ಹಾಗೂ ಈಶ್ವರ್ ಖಂಡ್ರೆ(Eshwar Khandre) ಆಗ್ರಹಿಸಿದ್ದಾರೆ.
ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಈಶ್ವರ್ ಖಂಡ್ರೆ ಹೇಳಿದ್ದೇನು?
ಪೊಲೀಸ್ ಇಲಾಖೆ ಹೊರಡಿಸಿರುವ 542 ಸಬ್ ಇನ್ಸ್ಪೆಕ್ಟರಗಳ ತಾತ್ಕಾಲಿಕ ನೇಮಕಾತಿ ಪಟ್ಟಿಯಿಂದಾಗಿ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಮೆರಿಟ್ ಪ್ರಕಾರ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದವರನ್ನು ರಾಜ್ಯವ್ಯಾಪಿ ನೇಮಕಾತಿಯಲ್ಲಿ ಪರಿಗಣಿಸಿ ನಂತರ ಉಳಿದ ಅಭ್ಯರ್ಥಿಗಳನ್ನು 371ಜೆ ಮೀಸಲಾತಿ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಬೇಕೆಂದು ಕಾನೂನಿನಲ್ಲಿ ನಿಯಮವಿದೆ.
ಇಷ್ಟೆಲ್ಲಾ ನಿಯಮಗಳು 371ಜೆ ಯಲ್ಲಿದ್ರು ಕೂಡಾ ಅತಿ ಹೆಚ್ಚು ಅಂಕ ಪಡೆದ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳನ್ನು ಕಲ್ಯಾಣ ಕರ್ನಾಟಕ ಮೀಸಲಾತಿಗೆ ಸೀಮಿತಗೊಳಿಸಿ ಈ ಭಾಗದ ಉಳಿದ ಅಭ್ಯರ್ಥಿಗಳಿಗೆ ನೇರ ಅನ್ಯಾಯ ಮಾಡಲಾಗುತ್ತಿದೆ.
ಪ್ರಾದೇಶಿಕ ಅಸಮತೋಲನೆ ಹೋಗಲಾಡಿಸಲು ಕಾಯ್ದೆ 371ಜೆ ಅಡಿಯಲ್ಲಿ ತಿದ್ದುಪಡಿ ತಂದು ಹೈದ್ರಾಬಾದ ಕರ್ನಾಟಕ ಈಗಿನ ಕಲ್ಯಾಣ ಕರ್ನಾಟಕ ಭಾಗದವರಿಗೆ ನ್ಯಾಯ ಸಿಗಬೇಕೆಂಬ ಮಹದ್ದುದ್ದೇಶದಿಂದ 371ಜೆ ಜಾರಿಗೆ ತರಲಾಗಿತ್ತು, ಆದರೆ ರಾಜ್ಯ ಬಿಜೆಪಿ ಸರ್ಕಾರ ಮಾತ್ರ ಎಲ್ಲಾ ಕಾನೂನು ನಿಯಮಗಳನ್ನು ಗಾಳಿಗೆ ತೂರಿ 371ಜೆ ಕಾಯ್ದೆಯ ಉದ್ದೇಶವನ್ನೇ ಹಾಳು ಮಾಡುತ್ತಿದೆ.
ಪೊಲೀಸ್ ಇಲಾಖೆ ಬಿಡುಗಡೆ ಮಾಡಿರುವ 542 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳ ನೇಮಕಾತಿ ಪಟ್ಟಿ ನ್ಯಾಯಯುತವಾದದ್ದಲ್ಲ, ಸರ್ಕಾರ ಕೂಡಲೇ ಪಟ್ಟಿಯನ್ನು ಪುನರ್ ಪರಿಷ್ಕರಿಸಿ/ಪರಿಶೀಲಿಸಿ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಕೂಡಲೇ ಸರಿಪಡಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದರು.
ಪತ್ರ ಬರೆದ ಶಾಸಕ ಬಯ್ಯಾಪೂರ
ಸರ್ಕಾರದ ಕಾರ್ಯದರ್ಶಿ ಬರೆದಿರುವ ಪತ್ರದಲ್ಲಿ ಪ್ರಸ್ತಾಪಿಸಿದಂತೆ ಶಾಸಕ ಬಯ್ಯಾಪೂರ ಅವರು, ಕಲ್ಯಾಣ ಕರ್ನಾಟಕ ಪ್ರದೇಶದ 371 (ಜೆ) ಅಡಿಯಲ್ಲಿ ರಚಿಸಲಾದ ಕರ್ನಾಟಕ ಸಾರ್ವಜನಿಕ ಉದ್ಯೋಗ ಮೀಸಲಾತಿಯಲ್ಲಿ ಆದೇಶದನ್ವಯ 2013 ರನ್ವಯ ವಿವಿಧ ವೃಂಧದ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ನೇಮಕಾತಿ ಪ್ರಾಧೀಕಾರಗಳು ನಡೆಸುವ ಯಾವೂದೇ ನೇಮಕಾತಿಯನ್ನು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ 6-6-2020ರ ಸುತ್ತೋಲೆಯಲ್ಲಿ ನಡೆಸುವಂತೆ ಸೂಚ್ಯವಾಗಿ ತಿಳಿಸಲಾಗಿದೆ.
ರಾಜ್ಯ ಪೊಲೀಸ್ ಇಲಾಖೆಯ ಪಿಎಸೈ (ಸಿವಿಲ್) ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳು ಹೆಚ್ಚು ಅಂಕ ಪಡೆದರೂ, ಸಹ ಸ್ಥಳೀಯ ವೃಂದದ ಆಯ್ಕೆ ಪಟ್ಟಿಯಲ್ಲಿ ಆಯ್ಕೆ ಮಾಡಲಾಗಿದೆ. ಇದು ಇನ್ನುಳಿದ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ.
ಗ್ರಾಮೀಣ ಭಾಗದ ಅಭ್ಯರ್ಥಿಗಳ ಉ 6-6-2020ರ ಸುತ್ತೋಲೆಯನ್ನು ಅರ್ಥ ಮಾಡಿಕೊಳ್ಳುವಲ್ಲಿ ಗೊಂದಲ ಮಾಡಿಕೊಂಡಿಕೊಂಡಿದ್ದಾರೆ. ಪಿಎಸೈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸುವಾಗ ತಪ್ಪಾಗಿ ಆಯ್ಕೆ ಸೂಚಿಸಿರುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಅಭ್ಯರ್ಥಿಗಳಿಗಿಂತ ಹೆಚ್ಚು ಅಂಕ ಪಡೆದರೂ ಸಹ ಸ್ಥಳೀಯ ವೃಂಧದಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾಗಿರುತ್ತಾರೆ.
ಈ ಹಿನ್ನೆಲೆಯಲ್ಲಿ ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ ಮೆರಿಟ್, ರೋಸ್ಟರ್ ಅನ್ವಯ ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳನ್ನು ಮೊದಲಾದ್ಯತೆ ನೀಡಬೇಕು. ಮಿಕ್ಕುಳಿದ ವೃಂದದಲ್ಲಿ ಆಯ್ಕೆ ಮಾಡಿ ಕಡಿಮೆ ಅಂಕ ಪಡೆದಿರುವ ಅಭ್ಯರ್ಥಿಗಳನ್ನು ಸ್ಥಳೀಯ ವೃಂಧದಲ್ಲಿ ಆಯ್ಕೆ ಮಾಡುವಂತೆ ಸಂಬಂಧಪಟ್ಟ ನೇಮಕಾತಿ ಪ್ರಾಧಿಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಪತ್ರ ಬರೆದಿದ್ದಾರೆ.