ದಕ್ಷಿಣ ಕನ್ನಡ ಜಿಲ್ಲಾ ಕೋರ್ಟ್‌ನಲ್ಲಿ ನೇಮಕಾತಿ: ವಿವಿಧ ಹುದ್ದೆಗೆ ಅರ್ಜಿ ಹಾಕಿ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರ ಮತ್ತಷ್ಟು  ಮಾಹಿತಯನ್ನು ತಿಳಿಯಲು ಮುಂದೆ ಓದಿ...

dakshina kannada district court recruitment 2020 Apply For 34 various posts

ಮಂಗಳೂರು, (ಜ.18): ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಒಟ್ಟು  34 ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.

10 ಶೀಘ್ರಲಿಪಿಗಾರ, 6 ಬೆರಳಚ್ಚುಗಾರ, 13 ಬೆರಳಚ್ಚು ನಕಲುಗಾರ ಮತ್ತು 5 ಆದೇಶ ಜಾರಿಕಾರ ಸೇರಿದಂತೆ ಒಟ್ಟು 34 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 

ಗ್ರಾಮಲೆಕ್ಕಾಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನ; ಪರೀಕ್ಷೆ ಇಲ್ಲದೇ ನೇರ ನೇಮಕಾತಿ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 12,2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ವಿದ್ಯಾರ್ಹತೆ: 
* ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು. 
* ಶೀಘ್ರಲಿಪಿಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ.
* ಬೆರಳಚ್ಚುಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ
* ಬೆರಳಚ್ಚುಗಾರ ನಕಲುಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ.

ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುದ್ದೆಗಳ ವೇತನ ಶ್ರೇಣಿ ವಿವರ
* ಶೀಘ್ರಲಿಪಿಗಾರ 27,650 ರಿಂದ 52,650 ರೂ. ತಿಂಗಳಿಗೆ.
* ಬೆರಳಚ್ಚುಗಾರ 21,400 ರಿಂದ 42,000 ರೂ. ತಿಂಗಳಿಗೆ
* ಬೆರಳಚ್ಚು ನಕಲುಗಾರ 21,400 ರಿಂದ 42,000 ರೂ. ತಿಂಗಳಿಗೆ. 
* ಆದೇಶ ಜಾರಿಕಾರ  19,950 ರಿಂದ 37,900 ರೂ. ತಿಂಗಳಿಗೆ.

ವಯೋಮಿತಿ: ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ. 2A,2B,3A ಮತ್ತು 3B ಯ ಗರಿಷ್ಠ 38 ವರ್ಷ ಮತ್ತು ST/SC/ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:  ಸಾಮಾನ್ಯ ವರ್ಗ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳಿಗೆ  200 ರೂ. SC/ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ.

ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿ ಕ್ಲಿಕ್ ಮಾಡಿ

Latest Videos
Follow Us:
Download App:
  • android
  • ios