Guest Teacher Recruitment: ತಾತ್ಕಾಲಿಕ ಅತಿಥಿ ಶಿಕ್ಷಕರ ನೇಮಕಾತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ

  • 2021-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ತಾತ್ಕಾಲಿಕ ಅತಿಥಿ ಶಿಕ್ಷಕರ ನೇಮಕಾತಿ
  • ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ನೇಮಕ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ
  • ಆಯಾ ಜಿಲ್ಲೆಯ ಅರ್ಹ ಅಭ್ಯರ್ಥಿಗಳನ್ನು ಅತಿಥಿ ಶಿಕ್ಷಕರಾಗಿ ನೇಮಿಸಲು ಸೂಚನೆ
Department of Public Education Karnataka orders to  Guest Teacher recruitment

ಬೆಂಗಳೂರು (ಡಿ.10): ಕರ್ನಾಟಕದ (Karnataka)ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ (Teachers) ಹುದ್ದೆಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ ಹೊರಬಿದ್ದಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ  ಖಾಲಿ ಇರುವ ಶಿಕ್ಷಕರ ಹುದ್ದೆಯನ್ನು ಮರುಹೊಂದಾಣಿಕೆ ಮಾಡಲು ಆದೇಶಿಸಲಾಗಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಜಾಲ್ತಿಯಲ್ಲಿದ್ದು, ಖಾಲಿ ಹುದ್ದೆಗೆ ಶಿಕ್ಷಕರು ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾದ ಕೂಡಲೇ ಅತಿಥಿ ಶಿಕ್ಷಕರನ್ನು  ಶಾಲೆಯಿಂದ ಬಿಡುಗಡೆ ಮಾಡದೆ ಖಾಲಿ ಇರುವ ಜಿಲ್ಲೆಯ ಇತರ ಶಾಲೆಗಳಿಗೆ ನೇಮಕ ಮಾಡಲು ಇಲಾಖೆಯು ಸಂಬಂಧಿಸಿದ ಜಿಲ್ಲೆಯ ಶಿಕ್ಷಣ ಅಧಿಕಾರಿಗಳಿಗೆ , ಸಂಬಂಧಿಸಿದ ಕ್ಷೇತ್ರ ಶಿಕ್ಷಣ ಅಧಿಕಾರಿಗಳಿಗೆ ಸೂಚನೆ ಹೊರಡಿಸಲಾಗಿದೆ.

ಇನ್ನು ಕೆಲವು ತಾಲೂಕುಗಳಲ್ಲಿ ಖಾಲಿ ಹುದ್ದೆಗಳಿಗೆ ವರ್ಗಾವಣೆ ಪಡೆದು ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಿರುವುದರಿಂದ ಹುದ್ದೆಗಳು ಭರ್ತಿಯಾಗಿವೆ ಮತ್ತು ಅದೇ ಜಿಲ್ಲೆಯಲ್ಲಿನ ಬೇರೆ ತಾಲೂಕಿನಲ್ಲಿ ಶಿಕ್ಷಕರು ವರ್ಗಾವಣೆಯಿಂದ ಹೊರ ಹೋಗಿರುವುದಿಂದ ಹೆಚ್ಚು ಹುದ್ದೆಗಳು ಖಾಲಿಯಾಗಿವೆ. ಈ ವರ್ಗಾವಣೆ ಪ್ರಕ್ರಿಯೆಯಿಂದ ಅತಿ ಹೆಚ್ಚು ಖಾಲಿ ಹುದ್ದೆಗಳು ಇರುವ ತಾಲೂಕಿನ ಶಾಲೆಗಳಲ್ಲಿ(School) ಶೈಕ್ಷಣಿಕ ವಿಚಾರವಾಗಿ ತೊಂದರೆಯಾಗುತ್ತಿದ್ದು, ಜಿಲ್ಲೆಗೆ ಹಂಚಿಕೆ ಮಾಡಲಾದ ಅತಿಥಿ ಉಪನ್ಯಾಸಕರ ಅವಶ್ಯಕತೆ ಮತ್ತು ಮಿತಿಯನ್ನು ಆಧರಿಸಿ ಹುದ್ದೆಯನ್ನು ಭರ್ತಿ ಮಾಡಲು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರಿಗೆ ಅನುಮತಿ ನೀಡಲಾಗಿದೆ.

ಕರ್ನಾಟಕದ (Karnataka)ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ (Teachers) ಹುದ್ದೆಗಳಿಗೆ 2021-22ನೇ ಸಾಲಿಗೆ ತಾತ್ಕಾಲಿಕವಾಗಿ 23,078 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ (Department of Education) ಕಳೆದ ನವೆಂಬರ್ ನಲ್ಲಿ ಆದೇಶಿಸಿತ್ತು. ಇದೀಗ ಖಾಲಿ ಇರುವ ಹುದ್ದೆಗಳು ಭರ್ತಿಯಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮತ್ತೊಂದು ಆದೇಶ ಹೊರಬಿದ್ದಿದೆ.

PLASTIC BANNED IN SCHOOL: ತಕ್ಷಣದಿಂದಲೇ ಜಾರಿಯಾಗುವಂತೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

ಪ್ರಾಥಮಿಕ ಶಾಲೆಗಳಿಗೆ (Primary Schools) 18000 ಅತಿಥಿ ಶಿಕ್ಷಕರು ಮತ್ತು ಪ್ರೌಢ ಶಾಲೆಗಳಿಗೆ (High Schools) ಎರಡನೇ ಹಂತದಲ್ಲಿ 5078 ಅತಿಥಿ ಶಿಕ್ಷಕರನ್ನು ನೇಮಕ (Recruitment) ಮಾಡಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿತ್ತು. ಪ್ರತಿ ಜಿಲ್ಲೆ, ತಾಲೂಕುಗಳ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪ್ರತಿಯಾಗಿ ಎಷ್ಟುಮಂದಿ ಅತಿಥಿ ಶಿಕ್ಷಕರನ್ನು (Guest Teachers) ನೇಮಕ ಮಾಡಿಕೊಳ್ಳಬೇಕೆಂಬ ಪಟ್ಟಿಯನ್ನು ಕೂಡ ಇಲಾಖೆ ಪ್ರಕಟಿಸಿತ್ತು, ಆಯಾ ಶಾಲಾ ಮುಖ್ಯ ಶಿಕ್ಷಕರಿಗೇ ಅತಿಥಿ ಉಪನ್ಯಾಸಕರ ನೇಮಕಾತಿ ಹೊಣೆ ವಹಿಸಲಾಗಿತ್ತು. ಪ್ರಾಥಮಿಕ ಶಿಕ್ಷಕರನ್ನು ಸೆಪ್ಟೆಂಬರ್‌ ತಿಂಗಳಿಂದ 2022ರ ಮಾರ್ಚ್‌ವರೆಗೆ, ಪ್ರೌಢಶಾಲಾ ಶಿಕ್ಷಕರನ್ನು ಅಕ್ಟೋಬರ್‌ 21ರಿಂದ ಏಪ್ರಿಲ್‌ 2022ರವರೆಗೆ ಅನ್ವಯಿಸುವಂತೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕಿತ್ತು. ಅತಿಥಿ ಶಿಕ್ಷಕ ಹುದ್ದೆಗೆ ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್‌ ಆಧಾರದಲ್ಲಿ ಆಯ್ಕೆ ಮಾಡಬೇಕು ಎಂದು ಆಯುಕ್ತರು ತಿಳಿಸಿದ್ದರು.

Bank of Baroda Recruitment 2021: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗ, ತಿಂಗಳಿಗೆ 63,840 ರೂ

ನೇಮಕಗೊಳ್ಳುವ ಪ್ರಾಥಮಿಕ ಶಾಲಾ ಅತಿಥಿ ಉಪನ್ಯಾಸಕರಿಗೆ ಮಾಸಿಕ 7500 ರು., ಪ್ರೌಢಶಾಲಾ ಅತಿಥಿ ಉಪನ್ಯಾಸಕರಿಗೆ ಮಾಸಿಕ 8000 ರು. ಸಂಭಾವನೆ(Remuneration೦ ನಿಗದಿಪಡಿಸಲಾಗಿತ್ತು. ಈ ಮಧ್ಯೆ, ಪ್ರಸ್ತುತ ನಡೆಯುತ್ತಿರುವ ಶಿಕ್ಷಕರ ವರ್ಗಾವಣೆ(Transfer) ಪ್ರಕ್ರಿಯೆ ಮೇಲೆ ಯಾವುದೇ ಶಾಲೆಯ ಖಾಲಿ ಹುದ್ದೆಗೆ ವರ್ಗಾವಣೆಯಾಗಿ ಬಂದ ಶಿಕ್ಷಕರ ಸ್ಥಾನಕ್ಕೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದಲ್ಲಿ ನಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಾಲ್ಲೂಕಿನ ಒಳಗಿನ ಬೇರೊಂದು ಶಾಲೆಗೆ ಆ ಅತಿಥಿ ಶಿಕ್ಷಕರನ್ನು ನಿಯೋಜಿಸಬೇಕು ಎಂದು ಕೂಡ ತಿಳಿಸಿತ್ತು. ಆದರೆ ಈಗ ಹೆಚ್ಚು ಅಭಾವವಿದ್ದು ಮತ್ತೊಮ್ಮೆ ತನ್ನ ಆದೇಶ ಹೊರಡಿಸಿದೆ. ಮಾಹಿತಿ ಪ್ರಕಾರ ಇಲಾಖೆಯಲ್ಲಿ ಸುಮಾರು 30 ಸಾವಿರ ಶಿಕ್ಷಕರ ಕೊರತೆ ಇದ್ದು ಅತಿಥಿ ಉಪನ್ಯಾಸಕರಿಂದ ಈ ಕೊರತೆ ನಿಭಾಯಿಸಲು ಸರ್ಕಾರ ಮುಂದಾಗಿದೆ.

Latest Videos
Follow Us:
Download App:
  • android
  • ios