ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ವಿವಿಧ ತಾಲ್ಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾಧಿಕಾರಿ ಅನುಮೋದನೆಯಂತೆ ಶಿಶು ಅಭಿವೃದ್ಧಿ ಯೋಜನೆಗಳಡಿಯಲ್ಲಿ ಅರ್ಜಿ ಅಹ್ವಾನ ಮಾಡಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
ಧಾರವಾಡ/ಬೆಂಗಳೂರು, (ಜ.04): ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಧಾರವಾಡ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ನೇಮಕಾತಿ ಪರಿಷ್ಕ್ರತ ಮಾರ್ಗಸೂಚಿ, ಜಿಲ್ಲಾಧಿಕಾರಿ ಅನುಮೋದನೆಯಂತೆ ಶಿಶು ಅಭಿವೃದ್ಧಿ ಯೋಜನೆಗಳಡಿಯಲ್ಲಿ ಅರ್ಜಿ ಅಹ್ವಾನ ಮಾಡಲಾಗಿದೆ.
ಉದ್ಯೋಗದ ಸುವರ್ಣ ಅವಕಾಶ: 8000 ಹುದ್ದೆಗಳಿಗೆ SBI ಅರ್ಜಿ ಆಹ್ವಾನ
ಧಾರವಾಡ ಜಿಲ್ಲೆಯ ವಿವಿಧ ತಾಲ್ಲೂಕಿನ 7 ಅಂಗನವಾಡಿ ಕಾರ್ಯಕರ್ತೆ, 60 ಅಂಗನವಾಡಿ ಸಹಾಯಕಿ ಗೌರವ ಸೇವೆ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಆನ್ ಲೈನ್ ಮೂಲಕ ಆಸಕ್ತರು ಜನವರಿ 31 ರೊಳಗೆ ಅರ್ಜಿ ಸಲ್ಲಿಸಬೇಕು.
ಇತರ ಮಾಹಿತಿಗೆ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳ ಕಚೇರಿ ಅಥವಾ ದೂರವಾಣಿ 0836 2444838, 2440733 ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಶೆಟ್ಟರ ತಿಳಿಸಿದ್ದಾರೆ.
ರಾಜ್ಯ ಮತ್ತು ಸೆಂಟ್ರಲ್ ಜಾಬ್ಸ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು ಗ್ರಮಾಂತರ ಜಿಲ್ಲೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 53 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 11 ಅಂಗನವಾಡಿ ಕಾರ್ಯಕರ್ತೆ ಮತ್ತು 42 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಜನವರಿ 31,2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4ನೇ ತರಗತಿ ಮತ್ತು ಗರಿಷ್ಟ 9ನೇ ತರಗತಿ ತೇರ್ಗಡೆಯಾಗಿರಬೇಕು.
ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನವರಾಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ಆಯ್ಕೆ: ಈ ಕೆಳಕಂಡಂತೆ ಆದ್ಯತೆ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆ ಹೊಂದಿದ್ದು ವಯೋಮಿತಿ ಹಾಗೂ ಸ್ಥಳೀಯರಾಗಿರುವುದು ಕಡ್ಡಾಯ.
ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.