ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಧಾರವಾಡ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿ.
ಧಾರವಾಡ, (ಆ.23): ಧಾರವಾಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 22 ಗ್ರಾಮಲೆಕ್ಕಿಗ ಹುದ್ದೆಗಳನ್ನು ನೇರ ನೇಮಕಾತಿಯಿಂದ ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 4,2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
Jobs ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಶೈಕ್ಷಣಿಕ ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್‌ಸಿ ಅಥವಾ ಐಸಿಎಸ್‌ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ: ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನ ಶ್ರೇಣಿ: 21,400 ರಿಂದ 42,000 ರು. ತಿಂಗಳಿಗೆ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ: ಪಿಯುಸಿ ಅಥವಾ ಸಿ.ಬಿ.ಎಸ್.ಇ ಅಥವಾ ಐ.ಸಿ.ಎಸ್.ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ