DRDO ನೇಮಕಾತಿ: 68 ಎಂಜಿನಿಯರ್ ಹುದ್ದೆಗಳಿಗೆ 70,000 ರೂ. ಮಾಸಿಕ ಸ್ಟೈಫಂಡ್
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿಯಲ್ಲಿ ಖಾಲಿ ಇರುವ 68 ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜುಲೈ 21 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಯ್ದ ಅಭ್ಯರ್ಥಿಗಳಿಗೆ ಮಾಸಿಕ 50 ಸಾವಿರ ರೂ.ನಿಂದ 70 ಸಾವಿರ ರೂ.ವರೆಗೆ ಸ್ಟೈಫಂಡ್ ಸಿಗಲಿದೆ.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ), ದೇಶದ ಅತ್ಯುನ್ನತ ವಲಯಗಳಲ್ಲೊಂದು. ರಕ್ಷಣಾ ವಿಭಾಗದಲ್ಲಿ ವಿನೂತನ ಆವಿಷ್ಕಾರ ಮಾಡುವುದು, ಯುದ್ಧ ವಿಮಾನಗಳನ್ನು ತಯಾರಿಸೋ ಮೂಲಕ ದೇಶ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕೇವಲ ದೇಶದ ರಕ್ಷಣಾ ವಲಯವಷ್ಟೇ ಅಲ್ಲ, ಜನರ ಆರೋಗ್ಯ ಕಾಪಾಡುವಲ್ಲೂ ಮೈಲಿಗಲ್ಲು ಸೃಷ್ಟಿಸುತ್ತಾ ಬಂದಿದೆ. ಇತ್ತೀಚೆಗಷ್ಟೇ ಕೋವಿಡ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿದ್ದ ಡಿಆರ್ ಡಿಒ, 2-ಡಿಯೋಕ್ಸಿ-ಡಿ-ಗ್ಲುಕೋಸ್ ಎಂಬ ಕೋವಿಡ್ ರೋಗ ನಿರೋಧಕ ಔಷಧಿಯನ್ನು ಅಭಿವೃದ್ಧಿ ಪಡಿಸಿತ್ತು. ಅಂತಹ ಡಿಆರ್ ಡಿಒ ಸಂಸ್ಥೆ, ಇದೀಗ ಮತ್ತೆ ಕಾಪ್ಟರ್ ಗಳ ತಯಾರಿಕೆಗಾಗಿ ಅಭ್ಯರ್ಥಿಗಳ ನೇಮಕಾತಿಗೆ ಮುಂದಾಗಿದೆ.
ಆದಾಯ ತೆರಿಗೆ ಇಲಾಖೆ 155 ಹುದ್ದೆಗೆ ನೇಮಕಾತಿ: ಕ್ರೀಡಾಪಟುಗಳಿಗೆ ಅವಕಾಶ
68 ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಕೇಂದ್ರವಾದ ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ (ಎಡಿಎ) ಯಲ್ಲಿ ಕೆಲಸ ಮಾಡಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಏಜೆನ್ಸಿಯಲ್ಲಿ ವಾಯುಪಡೆ ಹಾಗೂ ನೌಕಾಸೇನೆಯ ಲೈಟ್ ಕಾಂಬ್ಯಾಟ್ ಏರ್‌ಕ್ರಾಫ್ಟ್‌ಗಳನ್ನು ತಯಾರಿಸಲಾಗುತ್ತದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಜುಲೈ ೨೧ ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳ ಅಧಿಕೃತ ಅಧಿಸೂಚನೆಯ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.
ಅರ್ಹ ಎಂಜಿನಿಯರ್ ಅಭ್ಯರ್ಥಿಗಳಿಂದ ಒಟ್ಟು ೬೮ ಪ್ರಾಜೆಕ್ಟ್ ಎಂಜಿನಿಯರ್‌ಗಳ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳ ಪೈಕಿ ಎರಡು ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳಿಂದ 46 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಹಾಗೇ ನಾಲ್ಕು ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ 17 ಹುದ್ದೆಗಳಿವೆ. ಇನ್ನು ೮ ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ೫ ಹುದ್ದೆಗಳಿವೆ. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಹಾಗಾಗಿ, ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಮೆಟಲರ್ಜಿ, ಮೆಕ್ಯಾನಿಕಲ್ ಎಂಜಿನಿಯರಿಂಗ್, ಏರೋಸ್ಪೇಸ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್, ಮೆಕಾಟ್ರಾನಿಕ್ಸ್- ಇತರೆ ಎಂಜಿನಿಯರಿಂಗ್ ಸ್ಟ್ರೀಮ್ ನಲ್ಲಿ ಪದವಿ ಪಡೆದಿರಬೇಕು. ಪ್ರತಿಯೊಂದು ಸ್ಟ್ರೀಮ್ ಗೂ ವಿಭಿನ್ನವಾದ ಅರ್ಹತೆಗಳು ಇರುತ್ತವೆ. ಡಿಆರ್‌ಡಿಓದ ಅಧಿಕೃತ ವೆಬ್‌ಸೈಟ್ https://rac.gov.in/index.php?lang=en&id=0 ಭೇಟಿ ನೀಡಿ, ಅರ್ಹತೆಗಳನ್ನು ಪರಿಶೀಲಿಸಬಹುದು.
ಆತ್ಮನಿರ್ಭರ ತಾಂತ್ರಿಕ ಶಿಕ್ಷಣ; ಸ್ಥಳೀಯ ಭಾಷೆಗಳಲ್ಲೇ ಎಂಜಿನಿಯರಿಂಗ್ ಕೋರ್ಸು!
ಈ ಹುದ್ದೆಗಳಿಗೆ ಭಾರತೀಯ ಪ್ರಜೆಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಹುದ್ದೆಗೆ ಆಯ್ಕೆಯಾಗುವ ಮೊದಲು ಆನ್‌ಲೈನ್ ಸಂದರ್ಶನ ಮತ್ತು ವೈಯಕ್ತಿಕ ಸಂದರ್ಶನವನ್ನು ಎದುರಿಸಬೇಕಾಗುತ್ತದೆ.
ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಯು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಬಹುದು. ಅವರ ಕಾರ್ಯಕ್ಷಮತೆಗೆ ಅನುಗುಣವಾಗಿ ಅದನ್ನು ಮತ್ತೆ ಎರಡು ವರ್ಷಗಳವರೆಗೆ ವಿಸ್ತರಣೆ ಮಾಡುವ ಅವಕಾಶವಿದೆ. ಅಭ್ಯರ್ಥಿಗಳು 50,000 ರಿಂದ 70,000 ರೂ.ಗಳವರೆಗೆ ಮಾಸಿಕ ಸ್ಟೈಫಂಡ್ ಪಡೆಯಲು ಅರ್ಹರಾಗಿರುತ್ತಾರೆ.
ಈ ಎಲ್ಲ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಲು ಇಲ್ಲಿ ಕ್ಲಿಕ್ ಮಾಡಿ.
ಅಂದಹಾಗೆ ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆದರೆ ಪ್ರತ್ಯೇಕ ಅರ್ಜಿ ನಮೂನೆಗಳನ್ನು ಸಲ್ಲಿಸಬೇಕಾಗುತ್ತದೆ. ಅಗತ್ಯ ಮಾಹಿತಿಯನ್ನು ನಮೂದಿಸಿ ಮತ್ತು ಅಗತ್ಯ ದಾಖಲೆಗಳ ಪ್ರತಿಗಳನ್ನು ಅಪ್‌ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.
ಎಸ್‌ಬಿಐನಲ್ಲಿ 6100 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪಾಸ್‌ಪೋರ್ಟ್ ಗಾತ್ರದ ಛಾಯಾಚಿತ್ರಗಳು, ಮಾರ್ಕ್ ಶೀಟ್ ಗಳು, ಪದವಿ ಪ್ರಮಾಣ ಪತ್ರಗಳು, ಆದಾಯ ಮತ್ತು ಜಾತಿ ಪ್ರಮಾಣಪತ್ರಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನ ಕಡ್ಡಾಯವಾಗಿ ಸಲ್ಲಿಸಬೇಕು.ಅರ್ಜಿ ಸಲ್ಲಿಸಿದ ಬಳಿಕ ಅಪ್ಲಿಕೇಶನ್ ಸಂಖ್ಯೆಯನ್ನ ಬರೆದಿಟ್ಟುಕೊಳ್ಳಿ. ಮುಂದಿನ ಪ್ರಕ್ರಿಯೆಗೆ ಅತ್ಯಗತ್ಯವಾಗಿರುತ್ತದೆ.