ಕಲ್ಯಾಣ ಕರ್ನಾಟಕದ 97 ಪಿಡಿಒ ಹುದ್ದೆಗಳಿಗೆ ಇಂದು, ನಾಳೆ ಪರೀಕ್ಷೆ
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯನಗರ, ಬಳ್ಳಾರಿ, ಕೊಪ್ಪಳ ಜಿಲ್ಲಾ ಕೇಂದ್ರಗಳು ಹಾಗೂ ಭಾಲ್ಕಿ, ಜೇವರ್ಗಿ, ಶಹಾಪುರ, ಸಿಂಧನೂರು, ಹಗರಿ ಬೊಮ್ಮನಹಳ್ಳಿ, ಕೂಡ್ಲಿಗಿ, ಗಂಗಾವತಿ ಮತ್ತು ಕುಷ್ಟಗಿ ತಾಲೂಕು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಬೆಂಗಳೂರು(ನ.16): ಗ್ರಾಮೀಣಾಭಿವೃದ್ಧಿ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕ ಭಾಗದ 298 ಪರೀಕ್ಷಾ ಉಪ ಕೇಂದ್ರಗಳಲ್ಲಿ ಶನಿವಾರ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಕಡ್ಡಾಯ ಕನ್ನಡ ಪರೀಕ್ಷೆಗೆ 74,150 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯನಗರ, ಬಳ್ಳಾರಿ, ಕೊಪ್ಪಳ ಜಿಲ್ಲಾ ಕೇಂದ್ರಗಳು ಹಾಗೂ ಭಾಲ್ಕಿ, ಜೇವರ್ಗಿ, ಶಹಾಪುರ, ಸಿಂಧನೂರು, ಹಗರಿ ಬೊಮ್ಮನಹಳ್ಳಿ, ಕೂಡ್ಲಿಗಿ, ಗಂಗಾವತಿ ಮತ್ತು ಕುಷ್ಟಗಿ ತಾಲೂಕು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಶೀಘ್ರ 10,000 ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
ಸ್ಪರ್ಧಾತ್ಮಕ ಪರೀಕ್ಷೆಗೆ 99,107 ಅಭ್ಯರ್ಥಿಗಳು:
ಇದೇ ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ (ನ.17) ಪಿಡಿಒ ನೇಮಕಾತಿ 'ಸ್ಪರ್ಧಾತ್ಮಕ ಪರೀಕ್ಷೆ' ನಡೆಯಲಿದೆ. 99,107 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ತಿಳಿಸಿದೆ.