Asianet Suvarna News Asianet Suvarna News

'ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ : ತಡೆಯಾಜ್ಞೆ ವದಂತಿ ನಂಬಬೇಡಿ’

* ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಕೋರ್ಟ್ ತಡೆಯಾಜ್ಞೆ ನೀಡಿದ್ಯಾ?
* ಪರೀಕ್ಷೆಗೆ ಒಂದು ದಿನ ಬಾಕಿ ಇರುವಾಗಲೇ ಕರ್ನಾಟಕ ಹೈಕೋರ್ಟ್ ತಡೆ ನೀಡಿ ಎಂದು ಸುದ್ದಿ
* ತಡೆಯಾಜ್ಞೆ ವದಂತಿ ನಂಬಬೇಡಿ ’

Fake News high court Stay on assistant professor Post Exams On March 12 rbj
Author
First Published Mar 11, 2022, 10:15 PM IST

ಬೆಂಗಳೂರು, (ಮಾ.11): ಕರ್ನಾಟಕದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಪರೀಕ್ಷೆಗೆ ಹೈಕೋರ್ಟ್‌ ತಡೆ ನೀಡಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. 

ಮಾರ್ಚ್ 12ರಿಂದ 16ರವರೆಗೆ ಪರೀಕ್ಷೆಗಳು ನಡೆಯಲಿವೆ. ಆದ್ರೆ, ಪರೀಕ್ಷೆಗೆ ಒಂದು ದಿನ ಬಾಕಿ ಇರುವಾಗಲೇ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ ಎನ್ನವ ಸುದ್ದಿಯನ್ನು ಹಬ್ಬಿಸಲಾಗಿದೆ. ತಡೆಯಾಜ್ಞೆ ಸುದ್ದಿ ವದಂತಿಯಾಗಿದ್ದು, ಅದನ್ನು ನಂಬಬೇಡಿ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿ ಹೇಳಿದೆ.

Professor Recruitment ಸಹಾಯಕ ಪ್ರಾಧ್ಯಾಪಕರ ನೇಮಕ: ಅಕ್ರಮಕ್ಕೆ ಕಡಿವಾಣ ಹಾಕಲು ಮುಂದಾದ ಪ್ರಾಧಿಕಾರ

ಪರೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಸಂಗತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಇ.ಡಿ ರಮ್ಯ ಅವರು ಪ್ರತಿಕ್ರಿಯಿಸಿದ್ದು, ಕೋರ್ಟ್ ತಡೆಯಾಜ್ಞೆ ನೀಡಿದೆ ಎನ್ನುವ ಆಧಾರರಹಿತ ವದಂತಿಯನ್ನು ಅಭ್ಯರ್ಥಿಗಳು ನಂಬಿ, ಮೋಸ ಹೋಗಬಾರದು ಎಂದು ಮನವಿ ಮಾಡಿದ್ದಾರೆ.

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಭಾಗವಾಗಿ ಮಾರ್ಚ್ 12ರಿಂದ 16ರವರೆಗೆ ನಿಗದಿಯಾಗಿರುವ ಸ್ಪರ್ಧಾತ್ಮಕ ಪರೀಕ್ಷೆಯು ಅಬಾಧಿತವಾಗಿ ಮತ್ತು ಕಟ್ಟುನಿಟ್ಟಾಗಿ ನಡೆಯಲಿದೆ. ಈ ಸಂಬಂಧವಾಗಿ ಕೋರ್ಟ್ ತಡೆಯಾಜ್ಞೆ ನೀಡಿದೆ ಎನ್ನುವ ಆಧಾರರಹಿತ ವದಂತಿಯನ್ನು ಅಭ್ಯರ್ಥಿಗಳು ನಂಬಿ, ಮೋಸ ಹೋಗಬಾರದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಇ.ಡಿ ರಮ್ಯ ಅವರು ತಿಳಿಸಿದ್ದಾರೆ.

ಪರೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಸಂಗತಿಗೆ ಸಂಬಂಧಿಸಿದಂತೆ ಅವರು ಈ ಸ್ಪಷ್ಟೀಕರಣ ನೀಡಿದ್ದಾರೆ.

ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಸೂಚನೆ
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇರುವ 1,242 ಸಹಾಯಕ ಪ್ರಾಧ್ಯಾಪಕ (Assistant Professor) ಹುದ್ದೆಗಳ ನೇಮಕಾತಿಗೆ ಇದೇ 12ರಿಂದ 16ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. 

ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಪರೀಕ್ಷಾ ಕೇಂದ್ರಗಳಿರುವ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠರು, ಕಮಿಷನರ್ ಮತ್ತಿತರ ಅಧಿಕಾರಿಗಳೊಂದಿಗೆ ಬುಧವಾರ ವಿಡಿಯೋ ಸಂವಾದ ನಡೆಸಿದ್ದರು.

ಈ ಸಭೆಯಲ್ಲಿ ಅವರು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಕಲು ಹೊಡೆಯುವುದು ಸೇರಿದಂತೆ ಯಾವುದೇ ಅಕ್ರಮಕ್ಕೆ ಕಿಂಚಿತ್ತೂ ಅವಕಾಶ ಮಾಡಿಕೊಡಬಾರದು. ಏನಾದರೂ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಮತ್ತು ಪಾರದರ್ಶಕವಾಗಿ ನಡೆಸಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.

ವಿಚ್ಛಿದ್ರಕಾರಿ ಶಕ್ತಿಗಳು ಪರೀಕ್ಷಾ ವ್ಯವಸ್ಥೆಯನ್ನು ಹಾಳುಗೆಡವಲು ಅಥವಾ ಈ ನೇಮಕಾತಿ ಪ್ರಕ್ರಿಯೆಗೆ ಕಳಂಕ ತರಲು ಆಸ್ಪದ ಕೊಡಬಾರದು. ಹಾಗೇನಾದರೂ ಆದರೆ, ಪರೀಕ್ಷಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠರನ್ನೇ ಹೊಣೆಗಾರರಾಗಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಅಕ್ರಮಕ್ಕೆ ಕಡಿವಾಣ ಹಾಕಲು ಸಹಾಯವಾಣಿ
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿ(Assistant Professor Recruitment) ಪ್ರಕ್ರಿಯೆಯು ಯಾವುದೇ ಅಕ್ರಮಗಳಿಲ್ಲದೆ, ಪಾರದರ್ಶಕವಾಗಿ ನಡೆಯುತ್ತಿದೆ. ಆದರೆ, ಈ ಬಗ್ಗೆ ಹರಿದಾಡುತ್ತಿರುವ ಅನಪೇಕ್ಷಿತ ವದಂತಿಗಳಿಗೆ ಕಡಿವಾಣ ಹಾಕಿ, ಕಠಿಣ ಕ್ರಮ ಜರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಹಾಯವಾಣಿಯನ್ನು ಆರಂಭಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ, ಅಭ್ಯರ್ಥಿಗಳಿಗೆ ಯಾವುದಾದರೂ ಆಮಿಷ ಒಡ್ಡಲು ಯಾರಾದರೂ ಪ್ರಯತ್ನಿಸುತ್ತಿದ್ದರೆ ಅಥವಾ ವದಂತಿಗಳನ್ನು ಹರಡುತ್ತಿರುವವರು ಕಂಡುಬಂದರೆ ಮೊಬೈಲ್ ಸಂಖ್ಯೆ 99015- 81708ಕ್ಕೆ ನೇರವಾಗಿ ಕಚೇರಿ ಸಮಯದಲ್ಲಿ ಕರೆ ಮಾಡಬಹುದು ಇಲ್ಲವೇ ವಾಟ್ಸ್ ಅಪ್ ಮೂಲಕ ತಿಳಿಸಬಹುದು. ಈ ಮಾಹಿತಿಯನ್ನು ಗೌಪ್ಯವಾಗಿಟ್ಟು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Follow Us:
Download App:
  • android
  • ios