SDA, FDA ಪರೀಕ್ಷೆಗೆ ಹೊಸ ದಿನಾಂಕ ಪ್ರಕಟಿಸಿದ ಕೆಪಿಎಸ್‌ಸಿ
* SDA, FDA ಪರೀಕ್ಷೆಗೆ ಹೊಸ ದಿನಾಂಕ ಪ್ರಕಟಿಸಿದ ಕೆಪಿಎಸ್‌ಸಿ
* ಕಿರಿಯ ಸಹಾಯಕರ, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಎರಡು ದಿನ ಪರೀಕ್ಷೆ
* ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು
ಬೆಂಗಳೂರು, (ಜೂನ್.30): ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ FDA ಹಾಗೂ SDA ಪರೀಕ್ಷೆಗೆ ಹೊಸ ದಿನಾಂಕ ನಿಗದಿ ಮಾಡಲಾಗಿದೆ.
ಇಂದು (ಬುಧವಾರ) ಕರ್ನಾಟಕ ಲೋಕಸೇವಾ ಆಯೋಗ (KPSC) ಘೋಷಣೆ ಮಾಡಿದ್ದು, ಇದೇ ಸೆಪ್ಟೆಂಬರ್ 18 ಹಾಗೂ 19ರಂದು ಕಿರಿಯ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಪರೀಕ್ಷೆಗಳು ನಡೆಯಲಿವೆ.
SDA ಪರೀಕ್ಷೆ ಮತ್ತೆ ಮುಂದೂಡಿದ ಕೆಪಿಎಸ್‌ಸಿ
2019ನೇ ಸಾಲಿನ ರಾಜ್ಯದ ವಿವಿಧ ಇಲಾಖೆಯಲ್ಲಿನ ಉಳಿಕ ಮೂಲ ವೃಂದದ ಹಾಗೂ ಹೈದರಾಬಾದ್ ಕರ್ನಾಟಕ ವೃಂದದ ಕಿರಿಯ ಸಹಾಯಕರ, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಎರಡು ದಿನ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.
ಪರೀಕ್ಷೆ ವೇಳಾಪಟ್ಟಿ
* ಸೆ.18ರಂದು ಶನಿವಾರ ಬೆಳಿಗ್ಗೆ 10 ರಿಂದ 11.30ರವರೆಗೆ ಪತ್ರಿಕೆ -1: ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ
* ಸೆ.19ರಂದು ಭಾನುವಾರ ಬೆಳಿಗ್ಗೆ 10 ರಿಂದ 11.30ರವರೆಗೆ ಪತ್ರಿಕೆ-2: ಸಾಮಾನ್ಯ ಜ್ಞಾನ.
* 19-09-2021ರ ಭಾನುವಾರ ಮಧ್ಯಾಹ್ನ 2 ರಿಂದ 3.30ರವರೆಗೆ ಪತ್ರಿಕೆ -3: ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್.