ಕಾಲೇಜುಗಳಿಗೆ ಬೋಧಕರ ನೇಮಕಕ್ಕೆ ಸರ್ಕಾರ ಅನುಮತಿ

* ಇನ್ನೊಂದು ತಿಂಗಳಲ್ಲಿ ನೇಮಕಾತಿ ಆದೇಶಕ್ಕೆ ನಿರ್ಧಾರ
* ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ
* ಜೂನ್‌, ಜುಲೈನಲ್ಲಿ 2, 4 ಮತ್ತು 6ನೇ ಸೆಮಿಸ್ಟರ್‌ ತರಗತಿಗಳನ್ನು ಪ್ರಾರಂಭ 

Government Approved to Appoint 340 Professors to Colleges in Karnataka grg

ಬೆಂಗಳೂರು(ಜೂ.28):  ರಾಜ್ಯದ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 340 ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಅನುಮತಿ ನೀಡಿದ್ದು, ಅರ್ಹ ಅಭ್ಯರ್ಥಿಗಳಿಗೆ ಜೂನ್‌-ಜುಲೈನಲ್ಲಿ ನೇಮಕಾತಿ ಆದೇಶ ನೀಡುವಂತೆ ಆದೇಶಿಸಿದೆ.

ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದು, ವಿವಿಧ ವಿಶ್ವವಿದ್ಯಾಲಯಗಳು ಹೊರಡಿಸಿರುವ ಸುತ್ತೋಲೆಗಳಲ್ಲಿ 2021-22ನೇ ಶೈಕ್ಷಣಿಕ ವರ್ಷ ಬರುವ ಆಗಸ್ಟ್‌ನಿಂದ ನವೆಂಬರ್‌ನಲ್ಲಿ ಪ್ರಾರಂಭವಾಗುವುದಾಗಿ ತಿಳಿಸಿವೆ. ಆದರೆ, ಕೋವಿಡ್‌ ಹಿನ್ನೆಲೆಯಲ್ಲಿ 2020-21ನೇ ಶೈಕ್ಷಣಿಕ ವರ್ಷವು ಇನ್ನೂ ಮುಗಿದಿಲ್ಲ. 

ಕರ್ನಾಟಕ ಲೋಕಸೇವಾ ಆಯೋಗಕ್ಕೆ (KPSC)ಇಬ್ಬರು ಸದಸ್ಯರುಗಳ ನೇಮಕ

ಪ್ರಸಕ್ತ ಜೂನ್‌, ಜುಲೈನಲ್ಲಿ 2, 4 ಮತ್ತು 6ನೇ ಸೆಮಿಸ್ಟರ್‌ ತರಗತಿಗಳನ್ನು ಪ್ರಾರಂಭಿಸಲಾಗಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಆನ್‌ಲೈನ್‌ ತರಗತಿಗಳನ್ನು ನಡೆಸಲಾಗುತ್ತಿದೆ. ಹಾಗಾಗಿ ಆರ್ಥಿಕ ಇಲಾಖೆ ಈಗಾಗಲೇ ನೀಡಿರುವ ಸಹಮತಿ ಮೇರೆಗೆ ಅನುದಾನಿತ ಪದವಿ ಅಥವಾ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 340 ಬೋಧಕರ ಹುದ್ದೆಗಳನ್ನು ಭರ್ತಿ ಮಾಡಿ ನೇಮಕಾತಿ ಆದೇಶ ನೀಡುವಂತೆ ಸೂಚಿಸಿದ್ದಾರೆ.
 

Latest Videos
Follow Us:
Download App:
  • android
  • ios