Asianet Suvarna News Asianet Suvarna News

ಸರ್ಕಾರಿ ನೌಕರರ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ; ಮುಂದಿನ 15 ದಿನ ವರ್ಗಾವಣೆ ಪರ್ವ

ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ 2013ರ ಮಾರ್ಗಸೂಚಿಯನ್ನು ರದ್ದುಗೊಳಿಸಿ 2024-25ನೇ ಸಾಲಿನಿಂದ ಅನ್ವಯವಾಗುವಂತೆ ಹೊಸ ವರ್ಗಾವಣಾ ಮಾರ್ಗಸೂಚಿಯನ್ನು ಹೊರಡಿಸಿದೆ.

government employees transfer New guidelines for year 2024-25 have been published sat
Author
First Published Jun 25, 2024, 8:11 PM IST | Last Updated Jun 25, 2024, 8:11 PM IST

ಬೆಂಗಳೂರು (ಜೂ.25) : ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ 2013ರ ಮಾರ್ಗಸೂಚಿಯನ್ನು ರದ್ದುಗೊಳಿಸಿ 2024-25ನೇ ಸಾಲಿನಿಂದ ಅನ್ವಯವಾಗುವಂತೆ ಹೊಸ ವರ್ಗಾವಣಾ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ನಿಯಮಾನುಸಾರ ಸರ್ಕಾರದ ಎ, ಬಿ, ಸಿ ಹಾಗೂ ಡಿ ವೃಂದಗಳಿಗೆ ಅನ್ವಯವಾಗುವಂತೆ ಒಂದು ಸ್ಥಳದಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಬೇಕು ಎಂಬುದನ್ನು ತಿಳಿಸಲಾಗಿದೆ. 

ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 5ರಡಿ ವರ್ಗೀಕರಿಸಲಾಗಿರುವ ಹುದ್ದೆಗಳಾದ ಎ, ಬಿ, ಸಿ ಮತ್ತು ಡಿ ವೃಂದದ ಸರ್ಕಾರಿ ನೌಕರರನ್ನು ಸಕ್ಷಮ ಪ್ರಾಧಿಕಾರವು ವರ್ಗಾವಣೆ/ಚಲನವಲನಗಳನ್ನು ಮಾಡಬಹುದು. ಆದರೆ, ಈ ವೇಳೆ ಸದರಿ ಆದೇಶದಲ್ಲಿ ನಮೂದಿಸಿರುವ ಷರತ್ತುಗಳಿಗೊಳಪಟ್ಟು ಅಂಶಗಳನ್ನು ಪರಿಗಣಿಸಿ ಹಾಗೂ ಮುಖ್ಯವಾಗಿ ಸಾರ್ವಜನಿಕ ಹಿತದೃಷ್ಟಿಯಲ್ಲಿ ಪಾರದರ್ಶಕವಾಗಿ ವರ್ಗಾವಣೆ ಮಾಡಬೇಕು. ಆದರೆ, ವರ್ಗಾವಣೆ/ ಚಲನವಲನಗಳನ್ನು ಮಾಡುವಾಗ ಯಾವುದೇ ಸರ್ಕಾರಿ ನೌಕರನು ಕಡ್ಡಾಯ ನಿರೀಕ್ಷಣೆಯಲ್ಲಿ ಉಳಿಯುವಂತಹ ಸಂದರ್ಭಗಳು ಉಂಟಾಗದಂತೆ ನೋಡಿಕೊಳ್ಳತಕ್ಕದ್ದು ಎಂದು ಸೂಚಿಸಲಾಗಿದೆ.

ಉಚಿತ ಊಟ, ವಸತಿಯೊಂದಿಗೆ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ; ಜು.02 ಕೊನೆ ದಿನ

ಜುಲೈ 9ರವರೆಗೆ ಸಾರ್ವತ್ರಿಕ ವರ್ಗಾವಣೆ ಮಾಡಲು ಸಚಿವರಿಗೆ ಅಧಿಕಾರ: ಪ್ರಸಕ್ತ 2024-25ನೇ ಸಾಲಿನಲ್ಲಿ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆ/ ಚಲನವಲನಗಳ ಸಂಖ್ಯೆಯು ಒಂದು ಜೇಷ್ಟತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ. 6ನ್ನು ಮೀರದಂತೆ 25.06.2024 ರಿಂದ 09.07.2024ವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ. ಒಂದು ಸ್ಥಳದಲ್ಲಿ ಈ ಕೆಳಗೆ ಸೂಚಿಸಿರುವ ಸೇವಾವಧಿಯನ್ನು ಪೂರ್ಣಗೊಳಿಸದ ಯಾವುದೇ ಸರ್ಕಾರಿ ನೌಕರನನ್ನು ಸಾಧಾರಣವಾಗಿ ವರ್ಗಾವಣೆ/ ಚಲನವಲನ ಮಾಡುವಂತಿಲ್ಲ.

ಸರ್ಕಾರಿ ನೌಕರರು ಒಂದು ಸ್ಥಳದಲ್ಲಿರಬಹುದಾದ ಕನಿಷ್ಠ ಅವಧಿ:
ವೃಂದ     =   ಸೇವಾವಧಿ (ವರ್ಷಗಳು)
ಗುಂಪು- ಎ ಹುದ್ದೆಗಳು = 2 ವರ್ಷ
ಗುಂಪು- ಬಿ ಹುದ್ದೆಗಳು = 2 ವರ್ಷ
ಗುಂಪು- ಸಿ ಹುದ್ದೆಗಳು = 4 ವರ್ಷ
ಗುಂಪು- ಡಿ ಹುದ್ದೆಗಳು = 7 ವರ್ಷ

ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರು ಪೂರೈಕೆ

ಹೈದರಾಬಾದ್ ಕರ್ನಾಟಕದಿಂದ 10 ವರ್ಷ ಹೊರ ಹೋಗುವಂತಿಲ್ಲ:
ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ನೆಲೆಸಿರುವ ಕಛೇರಿಗಳಿಗೆ ಸ್ಥಳಿಯ ವೃಂದ ಮತ್ತು ಮಿಕ್ಕುಳಿದ ವೃಂದಗಳಲ್ಲಿನ ವಿವಿಧ ವೃಂದದ ಹುದ್ದೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆದುರಾಗಿ ನೇಮಕಾತಿ ಹೊಂದಿರುವ ನೌಕರರನ್ನು ಅವರ ನೇಮಕಾತಿ ದಿನಾಂಕದಿಂದ ಕನಿಷ್ಟ 10 ವರ್ಷಗಳವರೆವಿಗೂ ಹೈದರಾಬಾದ್ ಕರ್ನಾಟಕ ಪ್ರದೇಶ ಹೊರತುಪಡಿಸಿ ವರ್ಗಾವಣೆ ಮಾಡಬಾರದು. ತಮ್ಮ ಇಲಾಖೆಯ ವ್ಯಾಪ್ತಿಯಡಿ ಬರುವ ಇಲಾಖೆಗಳ ಒಂದು ನಿರ್ದಿಷ್ಟವಾದ ಹುದ್ದೆಯ ಕಾರ್ಯ ಸ್ವರೂಪದ / ಸೂಕ್ಷ್ಮತೆಯ ಆಧಾರದ ಮೇಲೆ ಒಂದು ಹುದ್ದೆಯಲ್ಲಿ ಸರ್ಕಾರಿ ನೌಕರನು ಸೇವೆ ಸಲ್ಲಿಸಬಹುದಾದ ಕನಿಷ್ಠ ಅವಧಿಯನ್ನು ಸಚಿವಾಲಯದ ಆಡಳಿತ ಇಲಾಖೆಗಳು ಸಿಎಂ ಸಿದ್ದರಾಮಯ್ಯ ಪೂರ್ವಾನುಮೋದನೆಯೊಂದಿಗೆ ಕಾಲಕಾಲಕ್ಕೆ ಪರಿಷ್ಕರಿಸಿ/ನಿಗದಿಪಡಿಸಿ ಆದೇಶ ಹೊರಡಿಸಬಹುದು. 

Latest Videos
Follow Us:
Download App:
  • android
  • ios