Library Supervisor Recruitment 2022: ಹಾವೇರಿಯ ಪಂಚಾಯತ್‌ನಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಹಾವೇರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕನಕಾಪುರ ಗ್ರಾಮ ಪಂಚಾಯಿತಿಯಲ್ಲಿನ ಗ್ರಂಥಾಲಯದಲ್ಲಿ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

Government Librarian Supervisor   Recruitment in Haveri district  Apply Now gow

ಬೆಂಗಳೂರು(ಡಿ.28): ಸಾರ್ವಜನಿಕ ಗ್ರಂಥಾಲಯ ಇಲಾಖೆ (department of public libraries ) ವತಿಯಿಂದ ಹಾವೇರಿ (Haveri ) ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕನಕಾಪುರ ಗ್ರಾಮ ಪಂಚಾಯಿತಿಯಲ್ಲಿನ ಗ್ರಂಥಾಲಯದಲ್ಲಿ ಗ್ರಂಥಾಲಯ ಮೇಲ್ವಿಚಾರಕ (Library Supervisor) ಕಂ-ಮಾಹಿತಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದೆ.  

ಶೈಕ್ಷಣಿಕ ವಿದ್ಯಾರ್ಹತೆ: ಹಾವೇರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ  ಕನಕಾಪುರ ಗ್ರಾಮ ಪಂಚಾಯಿತ್ ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಗ್ರಂಥಾಲಯ ವಿಜ್ಞಾನದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು.

ಅರ್ಹತೆಗಳು:  ಸಾಮಾನ್ಯ ಮಹಿಳಾ ಅಭ್ಯರ್ಥಿಗೆ ಈ ಹುದ್ದೆ ಮೀಸಲಾಗಿದೆ. ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ನಿಗದಿಪಡಿಸಲಾದ ಮೀಸಲಾತಿಗೆ ಒಳಪಡುವ ಅಭ್ಯರ್ಥಿ ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು.

IBPS PRELIMS RESULT 2021: ಬ್ಯಾಂಕಿಗ್ ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಪ್ರಕಟ, ಈಗಲೇ ಚೆಕ್ ಮಾಡಿ

ವಯೋಮಿತಿ: ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಮಾಹಿಳಾ ಅಭ್ಯರ್ಥಿಯ ವಯಸ್ಸು ಕನಿಷ್ಠ18 ವರ್ಷ  ಇರಬೇಕು. ಗರಿಷ್ಟ 33 ವರ್ಷ ವಯೋಮಿತಿ ಇರಬೇಕು.

ಆಯ್ಕೆ ಪ್ರಕ್ರಿಯೆ: ಅಧಿಸೂಚನೆಯಲ್ಲಿ ಕೇಳಲಾಗಿರುವ ಅರ್ಹತೆಗಳು ಮತ್ತು ಹೆಚ್ಚು ಅಂಕಗಳನ್ನು ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ: ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಫಾರಂಗಳನ್ನು ಗ್ರಾಮ ಪಂಚಾಯತ್ ಕಾರ್ಯಾಲಯಗಳಲ್ಲಿ ಹಾಗೂ ಕಚೇರಿಯಲ್ಲಿ ಬೆಳಿಗ್ಗೆ  10 ರಿಂದ ಸಂಜೆ 5:30ರೊಳಗೆ ಪಡೆಯಬಹುದು. ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕನಕಾಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ  ಜನವರಿ 31,2022ರೊಳಗೆ ಸಲ್ಲಿಸಲು ಕೋರಲಾಗಿದೆ. ಇತರೆ ಹೆಚ್ಚಿನ ಮಾಹಿತಿಗಾಗಿ ಹಾವೇರಿ ಜಿಲ್ಲಾ ಕೇಂದ್ರ ಗ್ರಂಥಾಲಯ ಅಥವಾ ದೂರವಾಣಿ ಸಂಖ್ಯೆ 08375-236022 ಗೆ ಕರೆ ಮಾಡಬಹುದು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳ ವಿವರ ಇಂತಿದೆ: 
ಆಧಾರ್ ಕಾರ್ಡ್
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಜೆರಾಕ್ಸ್‌ ಕಾಪಿ
ಲೈಬ್ರರಿ ಸೈನ್ಸ್‌ ಪದವಿ / ಪಿಜಿ ಡಿಗ್ರಿ ಪ್ರಮಾಣ ಪತ್ರ ಜೆರಾಕ್ಸ್‌ ಕಾಪಿ.
ಇತ್ತೀಚಿನ ಭಾವಚಿತ್ರ.
ಇತರೆ ಅಗತ್ಯ ದಾಖಲೆಗಳು

Vijayapura Panchayat Recruitment 2022: ಪಂಚಾಯಿತ್ ಗ್ರಂಥಾಲಯದಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ವ್ಯಾಪ್ತಿಯ ಪಂಚಾಯಿತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ: ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ್ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ (Library Supervisor ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 24 ಕೊನೆಯ ದಿನವಾಗಿದೆ.  ಹೆಚ್ಚಿನ ಮಾಹಿತಿಗೆ https://vijayapura.nic.in/ ಗೆ ಭೇಟಿ ನೀಡಿ.

ಅರ್ಹತೆಗಳು: ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.
ನಿಗದಿಪಡಿಸಲಾದ ಮೀಸಲಾತಿಗೆ ಒಳಪಡುವ ಅಭ್ಯರ್ಥಿ ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು. 
ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದಿದ್ದವರಿಗೆ ಆದ್ಯತೆ ನೀಡಲಾಗುವುದು.

ವಯೋಮಿತಿ: ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ18 ವರ್ಷ  ಇರಬೇಕು. ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿ ಯ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿ ಇರಬೇಕು.

ಕಚೇರಿ ವಿಳಾಸ: ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ ವಿಜಯಪುರ.

ಅರ್ಜಿ ಸಲ್ಲಿಕೆ: ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಫಾರಂಗಳನ್ನು ಗ್ರಾಮ ಪಂಚಾಯತ್ ಕಾರ್ಯಾಲಯಗಳಲ್ಲಿ ಹಾಗೂ ಕಚೇರಿಯಲ್ಲಿ ಬೆಳಿಗ್ಗೆ  10 ರಿಂದ ಸಂಜೆ 5:30ರೊಳಗೆ ಪಡೆಯಬಹುದು. ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜನವರಿ 24,2022ರೊಳಗೆ ಸಲ್ಲಿಸಲು ಕೋರಲಾಗಿದೆ.

Latest Videos
Follow Us:
Download App:
  • android
  • ios