Asianet Suvarna News Asianet Suvarna News

10,000 ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕಕ್ಕೆ ಸಮ್ಮತಿ

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 8 ಸಾವಿರ ಮತ್ತು ಪ್ರೌಢ ಶಾಲೆಗಳಿಗೆ 2 ಸಾವಿರ ಸೇರಿ ಒಟ್ಟಾರೆ 10 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಅಥವಾ 2024ನೇ ಶೈಕ್ಷಣಿಕ ಸಾಲಿಗೆ ಹೆಚ್ಚುವರಿಯಾಗಿ ನೇಮಕ ಮಾಡಿಕೊಳ್ಳಲು ಮುಂದಾದ ಸರ್ಕಾರ. 

Government of Karnataka Approves Recruitment of 10000 Guest Teachers grg
Author
First Published Aug 19, 2023, 2:00 AM IST

ಬೆಂಗಳೂರು(ಆ.19):  ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಹೆಚ್ಚುವರಿಯಾಗಿ 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 8 ಸಾವಿರ ಮತ್ತು ಪ್ರೌಢ ಶಾಲೆಗಳಿಗೆ 2 ಸಾವಿರ ಸೇರಿ ಒಟ್ಟಾರೆ 10 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಅಥವಾ 2024ನೇ ಶೈಕ್ಷಣಿಕ ಸಾಲಿಗೆ ಹೆಚ್ಚುವರಿಯಾಗಿ ನೇಮಕ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ.

ಸರ್ಕಾರಿ ಸಂಬಳ ಬೇಡ, ತಿಂಗಳಿಗಾಗುವಷ್ಟು ದಿನಸಿ ಕೊಡಿ ಸಾಕು: ಅತಿಥಿ ಉಪನ್ಯಾಸಕರ ಮನವಿ

ಶಾಲಾ ಶಿಕ್ಷಣ ಇಲಾಖೆಯು 13,352 ಕಾಯಂ ಶಿಕ್ಷಕರ ನೇಮಕಾತಿಗೆ ಮುಂದಾಗಿದ್ದರೂ ಹಲವು ಕಾರಣಗಳಿಂದಾಗಿ ಪ್ರಕ್ರಿಯೆ ವಿಳಂಬವಾಗಿ ಮಕ್ಕಳಿಗೆ ತೊಂದರೆ ಉಂಟಾಗಿತ್ತು. ಆದ್ದರಿಂದ ಶಿಕ್ಷಕರ ಕೊರತೆ ನೀಗಿಸುವಂತೆ ಜನಪ್ರತಿನಿಧಿಗಳು, ಪೋಷಕರು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಕೌನ್ಸೆಲಿಂಗ್‌ ಮೂಲಕ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡಿದ್ದು, ಖಾಲಿ ಇರುವ ಹುದ್ದೆ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಖಾಲಿಯಾಗಿರುವ ಹುದ್ದೆಗಳನ್ನು ಅತಿಥಿ ಶಿಕ್ಷಕರಿಂದ ಆದ್ಯತೆ ಮೇಲೆ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯು ಸೂಚಿಸಿದೆ.

ಮೇ ತಿಂಗಳಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 27 ಸಾವಿರ ಮತ್ತು ಪ್ರೌಢಶಾಲೆಗಳಿಗೆ 6 ಸಾವಿರ ಅತಿಥಿ ಶಿಕ್ಷಕರನ್ನು ಸರ್ಕಾರ ಮಂಜೂರು ಮಾಡಿತ್ತು. ಇದೀಗ ಪುನಃ 10 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಒಪ್ಪಿಗೆ ಸೂಚಿಸಿದೆ.

Follow Us:
Download App:
  • android
  • ios