ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ವೈದ್ಯಕೀಯ ಭತ್ಯೆ ಶೇ.150 ಹೆಚ್ಚಳ

ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ವೈದ್ಯಕೀಯ ಭತ್ಯೆಯನ್ನು ₹200 ರಿಂದ ₹500 ಕ್ಕೆ ಹೆಚ್ಚಿಸಲಾಗಿದೆ. ಆದರೆ ಈ ಸೌಲಭ್ಯವು ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಯಾಗುವವರೆಗೆ ಲಭ್ಯವಿರುತ್ತದೆ.

Govt employees medical allowance increased 150 percent sat

ಬೆಂಗಳೂರು (ಆ.27): ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲ ಸರ್ಕಾರಿ ನೌಕರರ ವೈದ್ಯಕೀಯ ಭತ್ಯೆಯನ್ನು 200 ರೂ.ಗಳಿಂದ 500 ರೂ.ಗಳಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಇನ್ನು ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (ಕೆ.ಎ.ಎಸ್.ಎಸ್) ಸೌಲಭ್ಯವು ಅನುಷ್ಠಾನಗೊಳ್ಳುವವರೆಗೆ ಈ ವೈದ್ಯಕೀಯ ಸೌಲಭ್ಯವು ಲಭ್ಯವಿರುತ್ತದೆ. ನಗದುರಹಿತ ವೈದ್ಯಕೀಯ ಸೌಲಭ್ಯ ಯೋಜನೆಯು ಅನುಷ್ಠಾನಗೊಂಡ ನಂತರದಲ್ಲಿ ವೈದ್ಯಕೀಯ ಭತ್ಯೆಯ ಮಂಜೂರಾತಿಯ ಈ ಆದೇಶವು ಜಾರಿಯಲ್ಲಿರುವುದು ಕೊನೆಗೊಳ್ಳುತ್ತದೆ. ಜೊತೆಗೆ ನಗದುರಹಿತ (ಕೆ.ಎ.ಎಸ್.ಎಸ್) ಯೋಜನೆಯು ಅನುಷ್ಠಾನಗೊಂಡ ಬಳಿಕ ಯಾವುದೇ ಸರ್ಕಾರಿ ನೌಕರನು ಈ ಸೌಲಭ್ಯವನ್ನು ಪಡೆಯಲು ಅರ್ಹನಿರುವುದಿಲ್ಲ. ಈ ಭತ್ಯೆಯನ್ನು ಕ್ರಮಬದ್ದಗೊಳಿಸಲು ವಿಧಿಸಿರುವ ಇತರೆ ಷರತ್ತುಗಳು ಅನ್ವಯಿಸುತ್ತವೆ. ಈ ಮೂಲಕ ರಾಜ್ಯ ಸರ್ಕಾರದಿಂದ ಸಿ ಮತ್ತು ಡಿ ದರ್ಜೆಯ ನೌಕರರಿಗೆ ಸಿಹಿ ಸುದ್ದಿಯನ್ನು ಕೊಡಲಾಗಿದೆ.

ದರ್ಶನ್‌ಗೆ ಜೈಲಲ್ಲಿ ರಾಜಾತಿಥ್ಯ: ರಾಜ್ಯದ ಎಲ್ಲಾ ಜೈಲುಗಳ ವ್ಯವಸ್ಥೆ ಪರಿಶೀಲನೆಗೆ ಸೂಚನೆ

ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ: ಸರ್ಕಾರಿ ನೌಕರರಿಗೆ ಆರೋಗ್ಯ ಸೌಲಭ್ಯಗಳನ್ನು ಪಡೆಯಲು ಸರ್ಕಾರದಿಂದ ವಿಶೇಷ ಯೋಜನೆ ಲಭ್ಯವಿದೆ. ಹೀಗಾಗಿ, ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಆಗುವವರೆಗೆ ಮಾತ್ರ ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು. ಇನ್ನು ಆರೋಗ್ಯ ಸಂಜೀವಿನಿ ಜಾರಿಯಾದ ಬಳಿಕ ವೈದ್ಯಕೀಯ ಭತ್ಯೆ ಸ್ಥಗಿತಗೊಳ್ಳುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Latest Videos
Follow Us:
Download App:
  • android
  • ios