ಶಿವಮೊಗ್ಗ GTTCಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಮತ್ತು ದಾವಣಗೆರೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ
- ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಶಿವಮೊಗ್ಗದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆ ಖಾಲಿಯಿದೆ.
- ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕಡೆಯ ದಿನ
- ದಾವಣಗೆರೆಯ 120 ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಜ.18 ಕೊನೆ ದಿನ
ಬೆಂಗಳೂರು(ಡಿ.20): GTTC Recruitment 2022 : ಶಿವಮೊಗ್ಗ (Shivamogga) ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (Govt. Tool Room and Training Centre -GTTC ) ಶಿವಮೊಗ್ಗ ಇಲ್ಲಿ ಅತಿಥಿ ಉಪನ್ಯಾಸಕರ (Guest Lecturer) ಹುದ್ದೆಗೆ ಆಸಕ್ತ ನತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕಡೆಯ ದಿನವಾಗಿದೆ.
ಡಿಟಿಡಿಎಂ/ಡಿಪಿಎಂ, ಬಿ.ಇ & ಎಂ.ಟೆಕ್(ಮೆಕ್ಯಾನಿಕಲ್), ಬಿ.ಇ/ಎಂ.ಟೆಕ್(ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್) ಕೈಗಾರಿಕಾ ಕ್ಷೇತ್ರದಲ್ಲಿ ಎರಡು ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ.ಸಿಎ 38, ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ, ಶಿವಮೊಗ್ಗ 577 222 ಇಲ್ಲಿ ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ ಸೈಟ್ https://gttc.co.in/shivamogga/ ಗೆ ಭೇಟಿ ನೀಡಿ.
UNION BANK RECRUITMENT 2022: ಸ್ನಾತಕೋತ್ತರ ಪದವೀಧರರಿಗೆ ಯೂನಿಯನ್ ಬ್ಯಾಂಕ್‌ನಲ್ಲಿ ಉದ್ಯೋಗ
Davangere Anganwadi Recruitment 2022: ದಾವಣಗೆರೆ ಜಿಲ್ಲೆ (Davangere District)ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ (Women and Children Welfare Department) ಕಾರ್ಯ ನಿರ್ವಹಿಸುತ್ತಿರುವ 5 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ (Anganwadi Centers)ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
EPFO Recruitment 2022: ಇಪಿಎಫ್ಓ ನಲ್ಲಿ ಖಾಲಿ ಇರುವ 98 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಒಟ್ಟು 120 ಅಂಗನವಾಡಿ ಕಾರ್ಯಕರ್ತೆ (Anganwadi Workers) ಮತ್ತು ಅಂಗನವಾಡಿ ಸಹಾಯಕಿ (Anganwadi Helpers) ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ, 4ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ (Online) ಮೂಲಕ ಮಾತ್ರವೇ ಜನವರಿ 18 ರವರೆಗೆ ಅರ್ಜಿ ಹಾಕಬಹುದು. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ anganwadirecruit.kar.nic.in ಗೆ ಭೇಟಿ ನೀಡಿ.
KMF Recruitment 2022: ವಿಜಯಪುರ & ಬಾಗಲಕೋಟೆ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಕೆಲಸ ಖಾಲಿ ಇದೆ
ವಯೋಮಿತಿ ಮತ್ತು ಆಯ್ಕೆ ವಿಧಾನ: ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಯ ಆಯ್ಕೆ ನಡೆಯಲಿದೆ.
BCP Recruitment 2022: ಬೆಂಗಳೂರು ಸಿಟಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ
ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೇನಾದರೂ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
Abhyudaya Bank Recruitment 2022: CA, MBA, PGDBM ಆದವರಿಗೆ ಅಭ್ಯುದಯ ಬ್ಯಾಂಕ್ ನಲ್ಲಿ ಕೆಲಸ ಇದೆ