Asianet Suvarna News Asianet Suvarna News

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ: ಅರ್ಜಿ ಹಾಕಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಬಗ್ಗೆ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Hassan Women and Child Development recruitment Apply for 18 various Post
Author
Bengaluru, First Published Jan 20, 2020, 7:30 PM IST
  • Facebook
  • Twitter
  • Whatsapp

ಹಾಸನ, (ಜ.20): ಹಾಸನ  ಜಿಲ್ಲಾ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 18 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಾಸನ ಕಚೇರಿಗೆ ಪೋಷಣ್ ಅಭಿಯಾನ ಯೋಜನೆಯಡಿ ಕೆಲಸ ನಿರ್ವಹಿಸಲು ಜಿಲ್ಲಾ ಮಟ್ಟದಲ್ಲಿ ಸಂಯೋಜಕರು ಮತ್ತು ಜಿಲ್ಲಾ ಸಹಾಯಕರು ಹಾಗೂ ಪ್ರತಿ ಯೋಜನಾ ಮಟ್ಟದಲ್ಲಿ ತಾಲ್ಲೂಕು ಸಂಯೋಜಕರು ಹಾಗೂ ತಾಲ್ಲೂಕು ಯೋಜನಾ ಸಹಾಯಕರುಗಳಂತೆ ಒಟ್ಟು 18 ಹುದ್ದೆಗಳನ್ನು ತಾತ್ಕಾಲಿಕವಾಗಿ ನೇರ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮಲೆಕ್ಕಾಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನ; ಪರೀಕ್ಷೆ ಇಲ್ಲದೇ ನೇರ ನೇಮಕಾತಿ

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ  21-01-2020 ರಿಂದ ಫೆ. 2 ಸಂಜೆ 5.30 ರ ಒಳಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಸನ ಕೆ.ಆರ್. ಪುರಂ, 9ನೇ ಕ್ರಾಸ್, ಇವರಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

 ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 08172-267218, 235133 ಸಂಪರ್ಕಿಸಿ.

Follow Us:
Download App:
  • android
  • ios