ಹಾವೇರಿ ಕಾನೂನು ಸೇವಾ ಪ್ರಾಧಿಕಾರದಲ್ಲಿ ಆಡಳಿತ ಸಹಾಯಕ, ಬಾಗಲಕೋಟೆಯಲ್ಲಿ ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಸಲ್ಲಿಸಿ

ಕರ್ನಾಟಕದ ಹಾವೇರಿ ಜಿಲ್ಲೆಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಆಡಳಿತ ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.15 ಕೊನೆಯ ದಿನ.  ಬಾಗಲಕೋಟೆ ನಗರಸಭೆಯಲ್ಲಿ ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆ ಇದ್ದು ಜ.10ರೊಳಗೆ ಅರ್ಜಿ ಸಲ್ಲಿಸಿ

Haveri District legal services authority administrative assistant recruitment notification apply now gow

ಬೆಂಗಳೂರು(ಜ.6): ಹಾವೇರಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ (Haveri District Legal Services Authority) ಖಾಲಿ ಇರುವ ಆಡಳಿತ ಸಹಾಯಕರ (Administrative Assistant) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಜನವರಿ 15ರೊಳಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಂದು ಆಡಳಿತ ಸಹಾಯಕರ ಹುದ್ದೆ ಖಾಲಿ ಇದ್ದು, ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ  ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಕೇಂದ್ರ ಅಥವಾ ರಾಜ್ಯ ಸರ್ಕಾರದ ಸೇವೆಯಿಂದ ಸ್ವಯಂ ನಿವೃತ್ತಿ ಅಥವಾ ವಯೋನಿವೃತ್ತಿಯಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಾನದಂಡಗಳು: ಕಾನೂನು ಸೇವಾ ಪ್ರಾಧಿಕಾರದಲ್ಲಿ ಖಾಲಿ ಇರುವ ಆಡಳಿತ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸುವ ಆಸಕ್ತರು ಡಿ ದರ್ಜೆಗಿಂತ ಮೇಲ್ಪಟ್ಟ ಯಾವುದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸಿ ಸೇವೆಯಿಂದ ನಿವೃತ್ತಿಯಾಗಿರಬೇಕು .
ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನಹೊಂದಿರಬೇಕು.
ಕನ್ನಡ ಅಥವಾ ಇಂಗ್ಲೀಷ್ ಭಾಷೆಗಳಲ್ಲಿ ಬೆರಳಚ್ಚುಗಾರಿಕೆಯಲ್ಲಿ ಪರಿಣಿತಿ ಇರಬೇಕು.

ವೇತನ: ಆಡಳಿತ ಸಹಾಯಕರ ಹುದ್ದೆಗೆ ಪ್ರತಿ ಮಾಸಿಕ ರೂ.14,867 ಹಾಗೂ ಸಂಚಾರಿ ದೂರವಾಣಿ ಭತ್ಯೆ ರೂ.300 ನಿಗಧಿಪಡಿಸಲಾಗಿದೆ.

DHFWS Chikkamagaluru Recruitment 2022: ಚಿಕ್ಕಮಗಳೂರಿನಲ್ಲಿ ದಾದಿಯರು​​​ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆಗೆ ಹೇಗೆ?
ನಿಗಧಿತ ಅರ್ಜಿ ನಮೂನೆಯನ್ನು ಹಾವೇರಿ (Haveri ) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಿಂದ ಪಡೆದು, ತಮ್ಮ ಸ್ವ ಹಸ್ತಾಕ್ಷರದಲ್ಲಿ ಭರ್ತಿ ಮಾಡಿದ ಅರ್ಜಿಗೆ ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸಂಬಂಧಪಟ್ಟ ದಾಖಲೆಗಳ ಸ್ವಯಂ ಪ್ರಮಾಣಿಕೃತ ಜೆರಾಕ್ಸ್‌ ಪ್ರತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾಗಿರುವ ವಿಳಾಸ: ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಲಯದ ಆವರಣ, ಹಾವೇರಿ. ಇಲ್ಲಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದು. ಅಪ್ಲಿಕೇಶನ್‌ ಸಲ್ಲಿಸಿ ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ನಿಗಧಿತ ದಿನಾಂಕದಂದು ಹಾಜರಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಭೇಟಿ ನೀಡಲು ಸೂಚಿಸಲಾಗಿದೆ.

KPSC Group C Answer Key: ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ, ಆಕ್ಷೇಪಣೆ ಸಲ್ಲಿಸಲು ಜನವರಿ 11 ಕೊನೆ ದಿನ

ಬಾಗಲಕೋಟೆ ನಗರಸಭೆಯಲ್ಲಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಆಹ್ವಾನ:  ಬಾಗಲಕೋಟೆ ನಗರಸಭೆಯು ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ (department of skill development entrepreneurship and livelihood) ದೀನದಯಾಳ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ (Community Resource Person) ಹುದ್ದೆಗೆ ಗೌರಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಒಟ್ಟು 2 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಬಾಗಲಕೋಟೆ (Bagalkote) ನಗರಸಭೆ ವ್ಯಾಪ್ತಿಯ ಸ್ವ-ಸಹಾಯ ಸಂಘದಲ್ಲಿ ಕನಿಷ್ಠ ಮೂರು ವರ್ಷದಿಂದ ಸದಸ್ಯರಾಗಿದ್ದು, ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯರಾಗಿರುವವರು ಅರ್ಜಿ ಸಲ್ಲಿಸಬಹುದು. 18 ರಿಂದ 45 ವರ್ಷದೊಳಗಿರುವವರು ಅರ್ಜಿ ಸಲ್ಲಿಸುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಬಾಗಲಕೋಟೆ ನಗರಸಭೆ ಕಾರ್ಯಾಲಯ ಸಂಪರ್ಕಿಸಲು ಕೋರಲಾಗಿದೆ. ಆಯ್ಕೆಯಾದವರಿಗೆ ಮಾಸಿಕ ಗೌರಧನ 8 ಸಾವಿರ, ಟಿಎ ಗರಿಷ್ಟ 2 ಸಾವಿರ ನೀಡಲಾಗುತ್ತದೆ. 

Latest Videos
Follow Us:
Download App:
  • android
  • ios