Asianet Suvarna News Asianet Suvarna News

Professor Recruitment ಸಹಾಯಕ ಪ್ರಾಧ್ಯಾಪಕರ ನೇಮಕ: ಅಕ್ರಮಕ್ಕೆ ಕಡಿವಾಣ ಹಾಕಲು ಮುಂದಾದ ಪ್ರಾಧಿಕಾರ

* ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿ 
* ಅಕ್ರಮಕ್ಕೆ ಕಡಿವಾಣ ಹಾಕಲು ಮುಂದಾದ ರ್ನಾಟಕ ಪರೀಕ್ಷಾ ಪ್ರಾಧಿಕಾರ
* ಅಕ್ರಮಕ್ಕೆ ಕಡಿವಾಣ ಹಾಕಲು ಸಹಾಯವಾಣಿ

Helpline for Karnataka Assistant Professor Recruitment rbj
Author
First Published Mar 8, 2022, 3:51 PM IST

ಬೆಂಗಳೂರು, (ಮಾ.08): ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿ(Assistant Professor Recruitment) ಪ್ರಕ್ರಿಯೆಯು ಯಾವುದೇ ಅಕ್ರಮಗಳಿಲ್ಲದೆ, ಪಾರದರ್ಶಕವಾಗಿ ನಡೆಯುತ್ತಿದೆ. ಆದರೆ, ಈ ಬಗ್ಗೆ ಹರಿದಾಡುತ್ತಿರುವ ಅನಪೇಕ್ಷಿತ ವದಂತಿಗಳಿಗೆ ಕಡಿವಾಣ ಹಾಕಿ, ಕಠಿಣ ಕ್ರಮ ಜರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಹಾಯವಾಣಿಯನ್ನು ಆರಂಭಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ, ಅಭ್ಯರ್ಥಿಗಳಿಗೆ ಯಾವುದಾದರೂ ಆಮಿಷ ಒಡ್ಡಲು ಯಾರಾದರೂ ಪ್ರಯತ್ನಿಸುತ್ತಿದ್ದರೆ ಅಥವಾ ವದಂತಿಗಳನ್ನು ಹರಡುತ್ತಿರುವವರು ಕಂಡುಬಂದರೆ ಮೊಬೈಲ್ ಸಂಖ್ಯೆ 99015- 81708ಕ್ಕೆ ನೇರವಾಗಿ ಕಚೇರಿ ಸಮಯದಲ್ಲಿ ಕರೆ ಮಾಡಬಹುದು ಇಲ್ಲವೇ ವಾಟ್ಸ್ ಅಪ್ ಮೂಲಕ ತಿಳಿಸಬಹುದು. ಈ ಮಾಹಿತಿಯನ್ನು ಗೌಪ್ಯವಾಗಿಟ್ಟು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ: ಪ್ರವೇಶ ಪತ್ರ ಲಭ್ಯ, ವಸ್ತ್ರಸಂಹಿತೆ ಕಡ್ಡಾಯ

ಸಹಾಯಕ ಪ್ರಾಧ್ಯಾಪಕರ (Assistant Professor)ನೇಮಕಾತಿಯು ಸರಕಾರಿ ನಿಯಮಗಳಿಗೆ ಅನುಗುಣವಾಗಿ, ಪ್ರತಿಭೆಯನ್ನು ಆಧರಿಸಿ ನಡೆಯುತ್ತಿದೆ. ಈ ಬಗ್ಗೆ ಅಭ್ಯರ್ಥಿಗಳು ವದಂತಿಗಳನ್ನು ನಂಬಿ, ಮೋಸ ಹೋಗಬಾರದು. ಈ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರಕ್ಕಾಗಲಿ, ಅವ್ಯವಹಾರಕ್ಕಾಗಲಿ ಕಿಂಚಿತ್ತೂ ಆಸ್ಪದವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಲಿಖಿತ ಪರೀಕೆಯಲ್ಲಿ‌ ತೆಗೆದುಕೊಂಡ ಒಟ್ಟು ಅಂಕಗಳ ಆಧಾರದ ಮೇಲೆ ನೇಮಕಾತಿ ನಡೆಯುತ್ತದೆ. ಪಾರರ್ದಶಕವಾಗಿ ನಡೆಸಬೇಕು ‌ಎನ್ನುವ ಕಾರಣಕ್ಕೆ ಸಂದರ್ಶನ ಕೂಡ ಇಟ್ಟಿಲ್ಲ ಎಂದು ಅವರು ಹೇಳಿದರು.

 ನೇಮಕಾತಿ ಪ್ರಕ್ರಿಯೆಯ ಅಂಗವಾಗಿ ಈಗಾಗಲೇ ಘೋಷಿಸಿರುವಂತೆ ಮಾರ್ಚ್ 12ರಿಂದ 16ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಬರಲಿರುವವರು ಸೂಚಿತ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಇದುವರೆಗೂ ಪ್ರವೇಶ ಪತ್ರವನ್ನು ಡೌನ್-ಲೋಡ್ ಮಾಡಿಕೊಳ್ಳದೆ ಇರುವ ಅಭ್ಯರ್ಥಿಗಳು ಪ್ರಾಧಿಕಾರದ ಜಾಲತಾಣದ ಮೂಲಕ ಪ್ರವೇಶಪತ್ರವನ್ನು ತೆಗೆದುಕೊಳ್ಳಬೇಕು.

ಪರೀಕ್ಷೆಯು ಬೆಂಗಳೂರು, ಮೈಸೂರು, ಮಂಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಮತ್ತು ಕಲಬುರಗಿಗಳಲ್ಲಿ ನಡೆಯಲಿದೆ.  ಎಂದು  ಅವರು ತಿಳಿಸಿದ್ದಾರೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ
ಕರ್ನಾಟಕದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ (Assistant Professor Jobs) ಅರ್ಜಿ ಹಾಕಿರುವ ಅಭ್ಯರ್ಥಿಗಳು, ಮಾರ್ಚ್ ಮಧ್ಯಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಅಗತ್ಯವಿರುವ ಪ್ರವೇಶ ಪತ್ರವನ್ನು (Hall Ticket) ಫೆ.28ರಿಂದ http://kea.kar.nic.in ಜಾಲತಾಣದಲ್ಲಿ ಡೌನ್-ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ. 

ಜತೆಗೆ, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನೂ ನಿಗದಿಪಡಿಸಿದ್ದು, ನಿಷೇಧಿತ ವಸ್ತುಗಳ ಪಟ್ಟಿಯನ್ನೂ ತಿಳಿಸಲಾಗಿದೆ. ಈ ಪರೀಕ್ಷೆಯು ಮಾರ್ಚ್ 12ರಿಂದ 16ರವರೆಗೆ ನಡೆಯಲಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇತ್ತೀಚಿನ 2 ಭಾವಚಿತ್ರ, ಪ್ರವೇಶಪತ್ರ, ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ತರಬೇಕು ಎಂದಿದ್ದಾರೆ.

ಆದರೆ, ಪರೀಕ್ಷಾ ಕೊಠಡಿಗೆ ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು (ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂಟೂತ್, ಕೈ ಗಡಿಯಾರ), ಆಹಾರ ಪದಾರ್ಥಗಳು, ಸ್ಟೇಷನರಿ ವಸ್ತುಗಳು (ಪೆನ್ಸಿಲ್, ಕಾಗದ, ಎರೇಸರ್, ಇಂಚುಪಟ್ಟಿ, ಜಾಮಿಟ್ರಿ ಪೆಟ್ಟಿಗೆ, ಕ್ಯಾಲ್ಕುಲೇಟರ್, ಲಾಗ್ ಟೇಬಲ್) ಮತ್ತು ವೈಯಕ್ತಿಕ ವಸ್ತುಗಳನ್ನು (ವ್ಯಾಲೆಟ್, ಅಲಂಕಾರಿಕ ಕನ್ನಡಕ, ಬೆಲ್ಟ್, ಟೋಪಿ, ಕ್ಯಾಮರಾ, ಆಭರಣಗಳು) ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow Us:
Download App:
  • android
  • ios