362 ಕೆಎಎಸ್ ಹುದ್ದೆ: ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ಸೂಚನೆ
* ಕೆಎಟಿ ಆದೇಶದವರೆಗೆ ನೇಮಕ ಪತ್ರ ವಿತರಿಸುವಂತಿಲ್ಲ
* ಏ.4ರವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ
* 362 ಅಭ್ಯರ್ಥಿಗಳಿಗೆ ನೇಮಕ ಪತ್ರ ವಿತರಿಸಬಾರದು
ಬೆಂಗಳೂರು(ಮಾ.26): 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ(Gazetted Probationary) ಅಭ್ಯರ್ಥಿಗಳ ಆಯ್ಕೆ ಸಿಂಧು ಕುರಿತ ಕರ್ನಾಟಕ ಸಿವಿಲ್ ಸೇವೆಗಳ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಸಂಬಂಧ ಮಧ್ಯಂತರ ಆದೇಶ ಹೊರಡಿಸುವಂತೆ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣಕ್ಕೆ (KAT) ಹೈಕೋರ್ಟ್(High Court of Karnataka) ಸೋಮವಾರ ನಿರ್ದೇಶಿಸಿದೆ. ಎ.ಟಿ.ಶ್ರೀನಿವಾಸ್ ಮತ್ತಿತರರು ಸಲ್ಲಿಸಿದ್ದ ತಕರಾರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಕಾಯ್ದೆ ಜಾರಿ ಸಂಬಂಧ ಏ.4ರವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಕಾಯ್ದೆಯನ್ನು ಪ್ರಶ್ನಿಸಿ ಕೆಎಟಿಗೆ ಅರ್ಜಿ ಸಲ್ಲಿಸಲಾಗಿದೆ. ಆ ಅರ್ಜಿಗಳ ವಿಚಾರಣೆ ಸೋಮವಾರ ಆರಂಭವಾಗಲಿದೆ. ಅರ್ಜಿಗಳ ಸಂಬಂಧ ಅರ್ಜಿದಾರರ ಮಧ್ಯಂತರ ಮನವಿ ಕುರಿತು ಕೆಎಟಿ ನಿರ್ಧರಿಸುವವರೆಗೆ 362 ಅಭ್ಯರ್ಥಿಗಳಿಗೆ(Candidates) ನೇಮಕ ಪತ್ರ ವಿತರಿಸಬಾರದು ಎಂದು ಸರ್ಕಾರಕ್ಕೆ(Government of Karnataka) ವಿಭಾಗೀಯ ಪೀಠ ನಿರ್ದೇಶಿಸಿದೆ.
ಅಲ್ಲದೆ, ಕೆಎಟಿಯು ತನ್ನ ಮುಂದೆ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿದ ಎಲ್ಲ ವಾದಿಗಳು-ಪ್ರತಿವಾದಿಗಳ ವಾದ ಆಲಿಸಿದ ಬಳಿಕ ಅರ್ಜಿದಾರರ ಮಧ್ಯಂತರ ಮನವಿ ಕುರಿತು ಪರಿಶೀಲಿಸಿ ಕಾನೂನು ಪ್ರಕಾರ ಆದೇಶ ಹೊರಡಿಸಬೇಕು ಎಂದು ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಏ.4ಕ್ಕೆ ಮುಂದೂಡಿತು.
High Court of Karnataka: ಮದುವೆಯಿಂದ ಪತಿಯ ಜಾತಿ ಪತ್ನಿಗೆ ಬರೋದಿಲ್ಲ!
2011ನೇ ಸಾಲಿನಲ್ಲಿ ಕೆಎಎಸ್(KAS) ನೇಮಕದಲ್ಲಿ 362 ಅಭ್ಯರ್ಥಿಗಳ ಆಯ್ಕೆ ಕುರಿತು ಸಿಐಡಿ(CID) ತನಿಖಾ ವರದಿ ಸಲ್ಲಿಸಿತ್ತು. ಅದನ್ನು ಆಧರಿಸಿ ಹೈಕೋರ್ಟ್ ನೇಮಕಾತಿಯನ್ನೇ(Recruitment) ರದ್ದುಗೊಳಿಸಿತ್ತು. ಅದನ್ನು ಸುಪ್ರೀಂಕೋಟ್ ಕೂಡ ಎತ್ತಿಹಿಡಿದಿದೆ. ಆದರೂ 362 ಅಭ್ಯರ್ಥಿಗಳ ಅಕ್ರಮ ನೇಮಕ ಸಕ್ರಮಗೊಳಿಸಲು ಸರ್ಕಾರ ಕರ್ನಾಟಕ ಸಿವಿಲ್ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ಕಾಯ್ದೆ ರೂಪಿಸಿದೆ.
ಈ ಕಾಯ್ದೆ ಸಿಂಧುತ್ವ ಪ್ರಶ್ನಿಸಿ ಅರ್ಜಿದಾರರು ಕೆಎಟಿಗೆ ಅರ್ಜಿ ಸಲ್ಲಿಸಿದ್ದರು. ಕಾಯ್ದೆ ಜಾರಿಗೆ ತಡೆಯಾಜ್ಞೆ ನೀಡಬೇಕು ಮತ್ತು ಅಭ್ಯರ್ಥಿಗಳಿಗೆ ನೇಮಕ ಪತ್ರ ವಿತರಿಸದಂತೆ ಸರ್ಕಾರಕ್ಕೆ ನಿರ್ಬಂಧ ಹೇರಬೇಕು ಎಂಬ ಅರ್ಜಿದಾರರು ಮಧ್ಯಂತರ ಮನವಿ ಮಾಡಿದದರು. ಆ ಕುರಿತು ಕೆಎಟಿ ಯಾವುದೇ ಆದೇಶ ಮಾಡಿರಲಿಲ್ಲ. ಇದರಿಂದ ಅರ್ಜಿದಾರರು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಕೆಎಟಿಯ ಮಧ್ಯಂತರ ಆದೇಶ ನೀಡುವುದರ ಒಳಗೆ ಸರ್ಕಾರವು ಅಭ್ಯರ್ಥಿಗಳಿಗೆ ನೇಮಕ ಪತ್ರ ನೀಡಲಿದೆ. ಆದ್ದರಿಂದ ಕಾಯ್ದೆ ಜಾರಿಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದ್ದರು. ಈ ಅರ್ಜಿಗಳನ್ನು ಮಾ.23ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠ, ವಿವಾದಿತ ಕಾಯ್ದೆ ಜಾರಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿ ಮಧ್ಯಂತರ ಆದೇಶ ಹೊರಡಿಸಿತ್ತು.
Hijab Verdict: ಸುಪ್ರೀಂ ಅಂಗಳಕ್ಕೆ ಹಿಜಾಬ್, ಹೋರಾಟ ಮುಂದುವರೆಸುತ್ತೇವೆ: ಹಿಜಾಬ್ ಪರ ವಕೀಲರು
ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ರೂ ರೇಪ್: ಹೈಕೋರ್ಟ್
ಬೆಂಗಳೂರು: ಮದುವೆ ಎಂಬುದು ಪತ್ನಿಯ ಮೇಲೆ ಪೈಶಾಚಿಕ ಕೃತ್ಯ ನಡೆಸಲು ಪರವಾನಗಿ ನೀಡಲು ಅಲ್ಲ. ಪತ್ನಿ ‘ಲೈಂಗಿಕ ದಾಸಿ’ ಎಂಬ ಭಾವನೆಯಿಂದ ಲೈಂಗಿಕ ದೌರ್ಜನ್ಯ(Sexual Harassment) ಎಸಗುವ ಪತಿ ವಿರುದ್ಧ ಅತ್ಯಾಚಾರ ಪ್ರಕರಣ(Rape Case) ದಾಖಲಿಸಿ ದೋಷಾರೋಪ ಪಟ್ಟಿಹೊರಿಸಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್, ಪತ್ನಿ(Wife) ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗುವುದು ಅತ್ಯಾಚಾರ ಎಂಬುದಾಗಿ ಪರಿಗಣಿಸಲ್ಪಡುತ್ತದೆ. ವೈವಾಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಪತಿಗೆ ನೀಡುವ ವಿನಾಯಿತಿ ರದ್ದುಪಡಿಸುವ ಬಗ್ಗೆ ಶಾಸಕಾಂಗ ಯೋಚಿಸುವುದು ಸೂಕ್ತ ಎಂದು ಹೈಕೋರ್ಟ್ ಸಲಹೆ ನೀಡಿದೆ.