ಪಿಎಸ್ಐ ಪರೀಕ್ಷೆ ಮುಂದೂಡಿಕೆ, 600 ಹೊಸ ಪೋಸ್ಟ್ ಭರ್ತಿ ಬಗ್ಗೆ ಅಪ್ಡೇಟ್ ಕೊಟ್ಟ ಗೃಹ ಸಚಿವ ಪರಮೇಶ್ವರ!

ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡಿಕೆ ಮತ್ತು ಹೊಸದಾಗಿ 600 ಪಿಎಸ್‌ಐ ಹುದ್ದೆಗಳ ಭರ್ತಿಗೆ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದ್ದಾರೆ. 

Home Minister Parameshwar gave an update about PSI exam postponement filling of 600 new post sat

ಬೆಂಗಳೂರು (ಸೆ.10): ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡುವ ಬಗ್ಗೆ ಕೆಇಎ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ‌ ನಿರ್ಧಾರ ಕೈಗೊಳ್ಳಲಾಗುವುದು. ಜೊತೆಗೆ, 600 ಹೊಸ ಪಿಎಸ್‌ಐ ಹುದ್ದೆ ನೇಮಕಾತಿಗೂ ಸಿದ್ಧತೆ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 402 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯ ಹೊಣೆಯನ್ನು ಕೆಇಎ ಅವರಿಗೆ ವಹಿಸಲಾಗಿದೆ. ಸೆ.22ರಂದು ಪರೀಕ್ಷೆ ನಡೆಸಲು ನಿಗದಿ ಮಾಡಿದ್ದಾರೆ. ಪಿಎಸ್‌ಐ ಪರೀಕ್ಷೆ ಬರೆಯಬೇಕಾದ ನೂರಕ್ಕು ಹೆಚ್ಚು ಆಕಾಂಕ್ಷಿಗಳು, ಯುಪಿಎಸ್‌ಸಿ ಮುಖ್ಯಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಹೀಗಾಗಿ ಪರೀಕ್ಷಾ ದಿನ ಮುಂದೂಡುವಂತೆ ಮನವಿ ಸಲ್ಲಿಸಿದ್ದಾರೆ. ಪರೀಕ್ಷೆ‌ ಮುಂದೂಡುವ ಕುರಿತ ಸಾಧಕ-ಬಾಧಕಗಳನ್ನು ಇಲಾಖೆಯ ಅಧಿಕಾರಿಗಳು ಹಾಗೂ ಕೆಇಎ ಅವರೊಂದಿಗೆ ಮತ್ತೊಮ್ಮೆ ಚರ್ಚಿಸಿ, ಕ್ರಮ ಕೈಗೊಳ್ಳಲಾಗುವುದು ಎಂದರು.

ಡಾ.ಪರಮೇಶ್ವರ ದ್ರಾಕ್ಷಿ ಗೋಡಂಬಿ ಹೋಮ್ ಮಿನಿಸ್ಟರ್: ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್!

ನಮಗೆ ಯುಪಿಎಸ್‌ಸಿ ಮುಖ್ಯವಲ್ಲ. ಇಲಾಖೆಯಲ್ಲಿ 1,000 ಪಿಎಸ್ಐ ಹುದ್ದೆಗಳು ಖಾಲಿ ಇವೆ. ಈ ಹಿನ್ನೆಲೆಯಲ್ಲಿ ನಿಯಮ 32 ಅಡಿ ಎಎಸ್‌ಐಗಳಿಗೆ ಪಿಎಸ್ಐ ಹುದ್ದೆಗೆ ಬಡ್ತಿ ನೀಡಲಾಗಿದೆ. ಬೀದಿಯಲ್ಲಿ ನಿಂತು ಕರ್ತವ್ಯ ನಿರ್ವಹಿಸಬೇಕಾದ ಪಿಎಸ್ಐ ಇಲ್ಲವಾದರೆ, ಇಲಾಖೆ ಮುನ್ನಡೆಸುವುದು‌ ಹೇಗೆ ಎಂದು ಪ್ರಶ್ನಿಸಿದರು. ಇನ್ನು ಬಿಜೆಪಿ ಆಡಳಿತದ ಅವಧಿಯಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವಾದ ಬಳಿಕ ನೇಮಕಾತಿ ನಡೆದಿಲ್ಲ. ಎಲ್ಲ ಗೊಂದಲದ ನಡುವೆಯೂ ಕೋರ್ಟ್‌ನಿಂದ ಅನುಮತಿ ಪಡೆದು ಮರುಪರೀಕ್ಷೆ ನಡೆಸಲಾಗಿದೆ‌. ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವ ಹಂತದಲ್ಲಿದೆ. ಈ ನಡುವೆಯೇ ಮತ್ತೆ ಕೆಲವರು ಕೋರ್ಟ್‌ಗೆ ಹೋಗಿದ್ದು, ಅಂತಿಮ‌ಪಟ್ಟಿ ಪ್ರಕಟಿಸಲು ವಿಳಂಬವಾಗುತ್ತಿದೆ ಎಂದು ತಿಳಿಸಿದರು.

ಕಳೆದ ನಾಲ್ಕು ವರ್ಷಗಳಿಂದ ಪಿಎಸ್ಐ ನೇಮಕಾತಿ ನಡೆದಿಲ್ಲ. ಸಿಂಧುತ್ವ, ದಾಖಲಾತಿ ಪರಿಶೀಲನೆ, ತರಬೇತಿ ಪಡೆದು ಇಲಾಖೆಗೆ ಸೇರಲು‌ಒಂದು ವರ್ಷ ಬೇಕಾಗುತ್ತದೆ. ಎರಡು ವರ್ಷ ಪ್ರೊಬೆಷನರಿ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಈ ಪರಿಸ್ಥಿತಿಯ ಹಿನ್ನೆಲೆಯಲ್ಲಿ, 402 ಪಿಎಸ್‌ಐ ಹುದ್ದೆಗಳಿಗೆ ಆದಾಷ್ಟು ಬೇಗ ಪರೀಕ್ಷೆ ನಡೆಸಲು ಮುಂದಾಗಿದ್ದೇವೆ. ಇದಾದ ನಂತರ 600 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು‌.

ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ

ಕೆಲ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದು, ಕೆಇಎ ಮತ್ತು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಈಗ ಪರೀಕ್ಷೆ ಮುಂದೂಡಿದರೆ, ಮುಂದಿನ ಆರು ತಿಂಗಳವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ಕೆಇಎ ಅವರು ತಿಳಿಸಿದ್ದಾರೆ. ಪಿಎಸ್ಐ ಪರೀಕ್ಷೆ ಮುಂದೂಡುವಂತೆ ತಿಳಿಸಿದರೆ‌ ಮುಂದೂಡುತ್ತಾರೆ. ಆದರೆ, ಪರೀಕ್ಷೆ ನಡೆಸಲು 6 ತಿಂಗಳು ಬೇಕಾಗುತ್ತದೆ. ಬಿಜೆಪಿ ಆಡಳಿತದ ಅವಧಿಯಲ್ಲಿ ನಡೆದ ಎಲ್ಲ ಹಗರಣಗಳನ್ನು ಪರಿಶೀಲಿಸುತ್ತಿದ್ದೇವೆ. ಸರ್ಕಾರಕ್ಕೆ ಯಾರ ಮೇಲೂ ಸಾಫ್ಟ್‌ಕಾರ್ನರ್ ಇಲ್ಲ‌. ದ್ವೇಷದ ರಾಜಕಾರಣ ಮಾಡಬಾರದು ಎಂಬುದು ನಮ್ಮ ಉದ್ದೇಶ. ಬಿಜೆಪಿಯವರು ದ್ವೇಷದ ರಾಜಕಾರಣ ಮುಂದುವರಿಸಿದರೆ, ನಾವು ಅದನ್ನೇ ಮಾಡಬೇಕಾಗುತ್ತದೆ ಎಂದು ಹೇಳಿದರು.

Latest Videos
Follow Us:
Download App:
  • android
  • ios