Hatti Gold Mines Recruitment 2022: ಹಟ್ಟಿ ಚಿನ್ನದ ಗಣಿಯಲ್ಲಿ 1 ಲಕ್ಷಕ್ಕೂ ಅಧಿಕ ವೇತನದ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ
- ಖಾಲಿ ಇರುವ ಹುದ್ದೆಗಳ ಭರ್ತಿಗೆ ರಾಯಚೂರಿನ ಹಟ್ಟಿ ಗೋಲ್ಡ್ ಕಂಪೆನಿ
- ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ
- ಜನವರಿ 21 ಅರ್ಜಿ ಸಲ್ಲಿಸಲು ಕೊನೆಯ ದಿನ
ರಾಯಚೂರು(ಡಿ.26): ರಾಯಚೂರಿನ (Raichur) ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ (Hutti Gold Mines Company Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್ (Manager), ಡಿಜಿಎಂ, ಜನರಲ್ ಮ್ಯಾನೇಜರ್ (General Manager) ಹೀಗೆ ಒಟ್ಟು 4 ಹುದ್ದೆಗಳು ಖಾಲಿ ಇದ್ದು, ಬಿಇ, ಪಿಎಚ್.ಡಿ. ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ (Application) ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಲು ಜನವರಿ 21, 2022 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಂಪೆನಿಯ https://huttigold.karnataka.gov.in/ ಗೆ ಭೇಟಿ ನೀಡಿ ವಿವರಣೆ ಪಡೆದುಕೊಳ್ಳಬಹುದು.
ಜನರಲ್ ಮ್ಯಾನೇಜರ್- 1, ಡೆಪ್ಯುಟಿ ಜನರಲ್ ಮ್ಯಾನೇಜರ್-1, ಸೀನಿಯರ್ ಮ್ಯಾನೇಜರ್ -1, ಮ್ಯಾನೇಜರ್ -1 ಹೀಗೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ರಾಯಚೂರಿನ ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ಅಧಿಸೂಚನೆ ಹೊರಡಿಸಿದೆ.
ಶೈಕ್ಷಣಿಕ ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನರಲ್ ಮ್ಯಾನೇಜರ್- ಮೈನಿಂಗ್ ವಿಭಾಗದಲ್ಲಿ ಎಂಜಿನಿಯರಿಂಗ್ (BE) ಪೂರ್ಣಗೊಳಿಸಿರಬೇಕು.
ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ - BE, ಎಂಎಸ್ಸಿ, ಪಿಎಚ್ಡಿ, ಸ್ನಾತಕೋತ್ತರ ಪದವಿ, ಎಂಬಿಎ ಮಾಡಿರಬೇಕು.
ಮ್ಯಾನೇಜರ್ - ಮಿನರಲ್ ಡ್ರೆಸ್ಸಿಂಗ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ, ಕೆಮಿಕಲ್ ಎಂಜಿನಿಯರಿಂಗ್ ಓದಿರಬೇಕು.
UPSC RECRUITMENT 2022: ಖಾಲಿ ಇರುವ 187 ಹುದ್ದೆಗಳ ನೇಮಕಕ್ಕೆ ಯುಪಿಎಸ್‌ಸಿ ಅರ್ಜಿ ಆಹ್ವಾನ
ಅಭ್ಯರ್ಥಿಗಳ ಅನುಭವ:
ಜನರಲ್ ಮ್ಯಾನೇಜರ್- ಅಭ್ಯರ್ಥಿಯು ಕನಿಷ್ಠ 20 ವರ್ಷಗಳ ಅನುಭವ ಹೊಂದಿರಬೇಕು.
ಡೆಪ್ಯುಟಿ ಜನರಲ್ ಮ್ಯಾನೇಜರ್- ಕನಿಷ್ಠ 17 ವರ್ಷಗಳ ಅನುಭವ ಹೊಂದಿರಬೇಕು.
ಸೀನಿಯರ್ ಮ್ಯಾನೇಜರ್ - ಕನಿಷ್ಠ 15 ವರ್ಷಗಳ ಅನುಭವ ಹೊಂದಿರಬೇಕು.
ಮ್ಯಾನೇಜರ್ - ಕನಿಷ್ಠ 12 ವರ್ಷಗಳ ಅನುಭವ ಹೊಂದಿರಬೇಕು.
CSIR - UGC NET EXAM: ಜೂನ್ 2021ರ NET ಪರೀಕ್ಷೆಗೆ ಅರ್ಜಿ ಸಲ್ಲಿಸಲು ಜ.2 ಕೊನೆಯ ದಿನ
ಅಭ್ಯರ್ಥಿಗಳ ವಯೋಮಿತಿ:
ಜನರಲ್ ಮ್ಯಾನೇಜರ್- ಗರಿಷ್ಠ 50 ವರ್ಷ
ಡೆಪ್ಯುಟಿ ಜನರಲ್ ಮ್ಯಾನೇಜರ್- ಗರಿಷ್ಠ 50 ವರ್ಷ
ಸೀನಿಯರ್ ಮ್ಯಾನೇಜರ್ - ಗರಿಷ್ಠ 45 ವರ್ಷ
ಮ್ಯಾನೇಜರ್ - ಗರಿಷ್ಠ 45-50 ವರ್ಷ
ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆ: ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 300 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಡಿಡಿ ಮೂಲಕ ಅಭ್ಯರ್ಥಿಗಳು ಶುಲ್ಕ ಪಾವತಿ ಮಾಡಬೇಕಿದೆ. ಮೆರಿಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ವೇತನ ವಿವರ:
ಜನರಲ್ ಮ್ಯಾನೇಜರ್- ಮಾಸಿಕ ₹ 1,06,400-1,43,700
ಡೆಪ್ಯುಟಿ ಜನರಲ್ ಮ್ಯಾನೇಜರ್- ಮಾಸಿಕ ₹ 96,400-1,37,500
ಸೀನಿಯರ್ ಮ್ಯಾನೇಜರ್ - ಮಾಸಿಕ ₹ 81,300-1,28,200
ಮ್ಯಾನೇಜರ್ - ಮಾಸಿಕ ₹ 70,150-1,19,800
ಅರ್ಜಿ ಸಲ್ಲಿಸುವ ವಿಳಾಸ ಮತ್ತು ವಿಧಾನ: ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಂಡ ವಿಳಾಸಕ್ಕೆ ಕಳುಹಿಸಿ
I/c ಎಕ್ಸಿಕ್ಯೂಟಿವ್ ಡೈರೆಕ್ಟರ್
ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್
PO ಹಟ್ಟಿ- 584115
ರಾಯಚೂರು ಜಿಲ್ಲೆ
ಕರ್ನಾಟಕ
SSLC Examination 2022: SSLC ಪರೀಕ್ಷೆ ನೋಂದಣಿ ವಿಸ್ತರಣೆ, ಮೇ ನಲ್ಲಿ ಪರೀಕ್ಷೆ ನಡೆಸಲು ಚಿಂತನೆ