Asianet Suvarna News Asianet Suvarna News

ಆದಾಯ ತೆರಿಗೆ ಇಲಾಖೆ 155 ಹುದ್ದೆಗೆ ನೇಮಕಾತಿ: ಕ್ರೀಡಾಪಟುಗಳಿಗೆ ಅವಕಾಶ

ಆದಾಯ ತೆರಿಗೆ ಇಲಾಖೆಯು ಖಾಲಿ ಇರುವ ಹಲವು ಹುದ್ದಗೆಳಿಗೆ ನೇಮಕಾತಿಯನ್ನು ಮಾಡಿಕೊಳ್ಳುತ್ತಿದೆ. ಕ್ರೀಡಾಪಟುಗಳು ಮಾತ್ರವೇ ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಒಟ್ಟು 155 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 

Income Tax Department is recruiting its various posts and check details
Author
Bengaluru, First Published Jul 12, 2021, 12:29 PM IST

ದೇಶದ ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸುವ ಆದಾಯ ತೆರಿಗೆ ಇಲಾಖೆಯು ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಮುಂಬೈನ ಆದಾಯ ತೆರಿಗೆ ಪ್ರಧಾನ ಮುಖ್ಯ ಆಯುಕ್ತರು ಆದಾಯ ತೆರಿಗೆ ಇನ್ಸ್‌ಪೆಕ್ಟರ್, ತೆರಿಗೆ ಸಹಾಯಕ ಮತ್ತು ಮಲ್ಟಿ-ಟಾಸ್ಕಿಂಗ್ ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಕೆಲವು ಆಟಗಳು / ಕ್ರೀಡಾ ವಿಭಾಗಗಳಲ್ಲಿ ಗುರುತಿಸಿಕೊಂಡ ಉತ್ತಮ ಕ್ರೀಡಾಪಟುಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.     

ಆಸಕ್ತ ಅಭ್ಯರ್ಥಿಗಳು ಮುಂಬೈನ ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ https://www.incometaxmumbai.gov.in  ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 25 ಕೊನೆಯ ದಿನಾಂಕವಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಎಸ್‌ಬಿಐನಲ್ಲಿ  6100 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆದಾಯ ತೆರಿಗೆ ಇಲಾಖೆ ನೇಮಕ ಮಾಡಿಕೊಳ್ಳುತ್ತಿರುವ ಈ ಎಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ  25 ಕೊನೆಯ ದಿನವಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು. ಆಯ್ಕೆಯಾದ ಇನ್ಕಮ್ ಟ್ಯಾಕ್ ಇನ್ಸ್‌ಪೆಕ್ಟರ್, ಟಾಕ್ಸ್ ಅಸಿಸ್ಟೆಂಟ್, ಮಲ್ಟಿ ಟಾಸ್ಕಿಂಗ್ ಸಿಬ್ಬಂದಿಗೆ ಉತ್ತಮ ಸಂಬಳವೂ ಇದೆ.

ಅಂದಹಾಗೇ ಈ ನೇಮಕಾತಿ ಡ್ರೈವ್ ಮೂಲಕ 155 ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅದರಲ್ಲಿ 8  ಆದಾಯ ತೆರಿಗೆ ಇನ್ಸ್‌ಪೆಕ್ಟರ್ ಹುದ್ದೆ, 83 ತೆರಿಗೆ ಸಹಾಯಕ ಹುದ್ದೆಗೆ, ಮತ್ತು 64 ಮಲ್ಟಿ-ಟಾಸ್ಕಿಂಗ್ ಸಿಬ್ಬಂದಿ ಹುದ್ದೆ ಸೇರಿ ಒಟ್ಟು 155 ಹುದ್ದೆಗಳಿಗೆ ಅರ್ಹರನ್ನ ನೇಮಕ ಮಾಡಿಕೊಳ್ಳಲಾಗ್ತಿದೆ. 

PU ಪಾಸಾದವರಿಗೆ ಆಯಿಲ್ ಇಂಡಿಯಾ ಕಂಪನಿಯಲ್ಲಿ ಕೆಲಸ, ಅಪ್ಲೈ ಮಾಡಿ

ಆದಾಯ ತೆರಿಗೆ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 30 ವರ್ಷದೊಳಗಿನವರಾಗಿರಬೇಕು. ತೆರಿಗೆ ಸಹಾಯಕ ಹುದ್ದೆಗೆ ಅಭ್ಯರ್ಥಿಗಳು 18 ರಿಂದ 27 ವರ್ಷದೊಳಗಿರಬೇಕು. ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 25 ವರ್ಷದೊಳಗಿನವರಾಗಿರಬೇಕು.

ಭಾರತ್ ಪೆಟ್ರೋಲಿಯಂನಲ್ಲಿ ಅಪ್ರೆಂಟಿಸ್ಎಂಜಿನಿಯರ್ ‌ಹುದ್ದೆಗಳಿಗೆ ಅರ್ಜಿ ಆಹ್ವಾನ

ಆದಾಯ ತೆರಿಗೆ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಗ್ರಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.  ಇನ್ನು ತೆರಿಗೆ ಸಹಾಯಕ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಪದವಿ ಪಡೆದಿರಬೇಕು. ಜೊತೆಗೆ   ಡೇಟಾ ಎಂಟ್ರಿಯಲ್ಲಿ ಗಂಟೆಗೆ 8,000 ಪದ ಟೈಪ್ ಮಾಡುವ ಸ್ಪೀಡ್ ಹೊಂದಿರಬೇಕು. ಮಲ್ಟಿ-ಟಾಸ್ಕಿಂಗ್ ಸಿಬ್ಬಂದಿ ಹುದ್ದೆಗೆ ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಮಂಡಳಿಯಿಂದ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು. ಇನ್ನು ಕ್ರೀಡಾ ಅರ್ಹತೆಯನ್ನು ಪರೀಕ್ಷಿಸಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.

ಅಭ್ಯರ್ಥಿಗಳು https://www.incometaxmumbai.gov.in/ ವೆಬ್‌ಸೈಟ್‌ಗೆ ಭೇಟಿ ನೀಡಿ  ಅರ್ಜಿ ಸಲ್ಲಿಸಬೇಕು. 1/2/3/4/5 ಫಾರ್ಮ್‌ಗಳನ್ನು ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಬಹುದು. ಅಧಿಸೂಚನೆಯಲ್ಲಿ ಉಲ್ಲೇಖಿಸಿರುವಂತೆ ಆಯಾ ಕ್ರೀಡಾ ಅಧಿಕಾರಿಗಳು ಸಹಿ ಮಾಡಿರುವ ಫಾರ್ಮ್ ಅನ್ನು ಸ್ಕ್ಯಾನ್ ಮಾಡಿ, ಅದರ ಪ್ರತಿಗಳನ್ನು ಅರ್ಜಿ ನಮೂನೆಯೊಂದಿಗೆ ಅಪ್‌ಲೋಡ್ ಮಾಡಬೇಕು. ಈ ಫಾರ್ಮ್‌ಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡದಿದ್ರೆ, ಅರ್ಜಿಗಳನ್ನ ತಿರಸ್ಕರಿಸಲಾಗುತ್ತದೆ.

ಆದಾಯ ತೆರಿಗೆ ಇನ್ಸ್‌ಪೆಕ್ಟರ್ ಹುದ್ದೆಗೆ ಮಾಸಿಕ 44900 ರಿಂದ 142400 ರೂ ವೇತನ ಸಿಗಲಿದೆ. ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗೆ ಲೆವೆಲ್ 4 ಅಡಿ 25,500 to Rs 81,100 ರೂ.ವರೆಗೆ ವೇತನ ದೊರೆಯಲಿದೆ.  ಹಾಗೇ ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ ಹುದ್ದೆಗೆ ಲೆವೆಲ್-1 ಅಡಿ 18000 ದಿಂದ 59,900 ರೂ.ವರೆಗೆ ವೇತನ ಸಿಗಲಿದೆ. ಈ ಎಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 25 ಕೊನೆಯ ದಿನವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.

Follow Us:
Download App:
  • android
  • ios