KAPL Recruitment 2022: ಮಾಸಿಕ 87,000 ರೂ ವೇತನ , ಆಯುಷ್ ವಿಭಾಗದಲ್ಲಿ ಮ್ಯಾನೇಜರ್ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್  ಆಯುಷ್ ವಿಭಾಗದಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

KAPL recruitment for manager posts Apply Offline  before January 17th gow

ಬೆಂಗಳೂರು(ಜ.3): KAPL Recruitment 2022: ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​​(Karnataka Antibiotics and Pharmaceuticals Limited - KAPL) ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಯುಷ್ ವಿಭಾಗದಲ್ಲಿ ಒಟ್ಟು 1 ಮ್ಯಾನೇಜರ್ ( Manager) ಹುದ್ದೆ ಖಾಲಿ ಇದ್ದು, ಆಸಕ್ತರು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜನವರಿ 17, 2022 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ kaplindia.com ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: KAPL ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ವಿಜ್ಞಾನ/ವೈದ್ಯಕೀಯ, BAMS ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ಅನುಭವ: ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 10-14 ವರ್ಷಗಳ ಫಾರ್ಮಾ/ಆಯುರ್ವೇದ ಉತ್ಪನ್ನಗಳ ಮಾರ್ಕೆಟಿಂಗ್/ಮಾರಾಟದ ಅನುಭವವನ್ನು ಹೊಂದಿರಬೇಕು. ಜೊತೆಗೆ 2-3 ವರ್ಷಗಳು ಎರಡನೇ ಸಾಲಿನ ವ್ಯವಸ್ಥಾಪಕರಾಗಿ ಇರಬೇಕು. ಆಯುರ್ವೇದ ಉತ್ಪನ್ನಗಳ ಮಾರುಕಟ್ಟೆ ವೃತ್ತಿಪರರಿಗೆ ಆದ್ಯತೆ ನೀಡಲಾಗುತ್ತದೆ.

KARNATAKA SCHOOLS SELF DEFENCE TRAINING: ರಾಜ್ಯದ ವಿದ್ಯಾರ್ಥಿನಿಯರಿಗೆ 'ಸ್ವಯಂ ರಕ್ಷಣಾ' ಕೌಶಲ್ಯ ತರಬೇತಿ

ವಯೋಮಿತಿ: ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಯ ವಯಸ್ಸು ಗರಿಷ್ಠ 45 ವರ್ಷ. ಆದರೆ ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ

ವೇತನ: ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಮ್ಯಾನೇಜರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 87,000 ರೂ ವೇತನ ನೀಡಲಾಗುತ್ತದೆ. 

ಆಯ್ಕೆ ಪ್ರಕ್ರಿಯೆ & ಉದ್ಯೋಗ ಸ್ಥಳ: ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಕಾರ್ಪೋರೇಟ್ ಕಛೇರಿ ಪೀಣ್ಯ, ಬೆಂಗಳೂರು ಇಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ಅಧಿಸೂಚನೆಗೆ ಈ ಲಿಂಕ್ ಕ್ಲಿಕ್ ಮಾಡಿ https://www.kaplindia.com/job-postings/

ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ನೀಡಲಾಗಿರುವ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು ಕೇಳಲಾಗಿರುವ ವಿವರಣೆಯನ್ನು ತುಂಬಿ.  ದಾಖಲೆಗಳ ಸಮೇತ ಜನವರಿ 17ರ ಮುನ್ನ ಖುದ್ದಾಗಿ ಕಚೇರಿಗೆ ತೆಗೆದುಕೊಂಡು ಹೋಗಿ ನೇರ ಸಂದರ್ಶನದಲ್ಲಿ ಭಾಗಿಯಾಗಲು ಕೋರಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು 5 ವರ್ಷಗಳ ಕಾಲ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ.

Gadag Taluk Panchayat Recruitment 2022: ನರೇಗಾ ಯೋಜನೆಯಡಿ ಖಾಲಿ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟ

ಮೈಸೂರಿನಲ್ಲಿ ಜನವರಿ 4 ರಿಂದ ಉದ್ಯೋಗ ಮೇಳ: ಮೈಸೂರಿನಲ್ಲಿ ಬೃಹತ್ ಉದ್ಯೋಗ ಮತ್ತು ಕೌಶಲ್ಯ ಮೇಳ ಆಯೋಜನೆ ಮಾಡಲಾಗಿದೆ. ಜನವರಿ 4 ರಿಂದ 8ರ ತನಕ ವಿವಿಧ ಸ್ಥಳಗಳಲ್ಲಿ ಮೇಳ ನಡೆಯಲಿದೆ. ಕೆ. ಆರ್. ಕ್ಷೇತ್ರದ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಉದ್ಯೋಗ ಮತ್ತು ಕೌಶಲ್ಯ ಮೇಳ ನಡೆಯಲಿದೆ ಎಂದು ಬಿಜೆಪಿ ಶಾಸಕ ಎಸ್. ಎ. ರಾಮದಾಸ್ ಫೇಸ್‌ ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. ಶಾಸಕರು ಜನವರಿ 4ರಿಂದ ನಡೆಯುವ ಉದ್ಯೋಗ ಮತ್ತು ಕೌಶಲ್ಯ ನೋಂದಣಿ ಕಾರ್ಯಕ್ರಮದ ಪೂರ್ವ ಸಿದ್ಧತೆಯಾಗಿ ವಿವಿಧ ಅಧಿಕಾರಿಗಳ ಜತೆ ಸಭೆ ನಡೆಸಿರುವುದಾಗಿ ಮಾಹಿತಿ ನೀಡಿದ್ದಾರೆ.

ಜನವರಿ 4 ರಿಂದ 8ರ ತನಕ ಮಂಗಳವಾರದಿಂದ ಶನಿವಾರದ ತನಕ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯ ತನಕ ಉದ್ಯೋಗ ಮತ್ತು ಕೌಶಲ್ಯ ಮೇಳ ನಡೆಯಲಿದೆ.

ಜನವರಿ 4, 2022ರಂದು ವಿದ್ಯಾಶಂಕರ ಕಲ್ಯಾಣ ಮಂಟಪ, ಗನ್ ಹೌಸ್ ವೃತ್ತದ ಬಳಿ. ಜನವರಿ 5ರಂದು ಒಕ್ಕಲಿಗರ ಹಾಸ್ಟೆಲ್, 2ನೇ ಮೇನ್, ವಿದ್ಯಾರಣ್ಯಪುರಂನಲ್ಲಿ ಉದ್ಯೋಗ ಮೇಳ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ಜನವರಿ 6ರಂದು ನಿತ್ಯಾನಂದ ಕಲ್ಯಾಣ ಮಂಟಪ, ಸ್ಟರ್ಲಿಂಗ್ ಟಾಕೀಸ್ ಬಳಿ. ಜನವರಿ 7ರಂದು ಭ್ರಮರಾಂಭ ಕಲ್ಯಾಣ ಮಂಟಪ ಶ್ರೀರಾಂಪುರ 2ನೇ ಹಂತ ಮತ್ತು ಜನವರಿ 8ರಂದು ಸಾಮ್ರಾಟ್ ಕಲ್ಯಾಣ ಮಂಟಪ, ಉದಯರವಿ ರಸ್ತೆ, ಕುವೆಂಪು ನಗರ ಇಲ್ಲಿ ಉದ್ಯೋಗ ಮೇಳ ನಡೆಯಲಿದೆ.

Latest Videos
Follow Us:
Download App:
  • android
  • ios