Asianet Suvarna News Asianet Suvarna News

ರಾಜ್ಯ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಕರ್ನಾಟಕ ಸರ್ಕಾರ

ಮಂಗಳವಾರದ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ.

Karnataka cabinet-approves 15 casual leaves for government employees
Author
Bengaluru, First Published Feb 4, 2020, 9:45 PM IST

ಬೆಂಗಳೂರು, [ಫೆ.04]: ತಿಂಗಳ 4ನೇ ಶನಿವಾರ ರಜೆ ಅನ್ವಯವಾಗದ ಸರ್ಕಾರಿ ನೌಕರರಿಗೆ 10 ದಿನದ ಬದಲು 15 ದಿನಗಳ ಸಾಂದರ್ಬಿಕ ರಜೆ (ಸಿಎಲ್) ವಿಸ್ತರಿಸಲು ರಾಜ್ಯ ಸಚಿವ ಸಂಪುಟ  ಅನುಮೋದನೆ ನೀಡಿದೆ.

ಮಂಗಳವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಸುದೀರ್ಘ ಚರ್ಚೆ ನಡೆಯಿತು. ಸಂಪುಟ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ  ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧು ಸ್ವಾಮಿ ಈ ಬಗ್ಗೆ ಮಾಹಿತಿ ನೀಡಿದರು. 

ರಾಜ್ಯದಲ್ಲಿ 4ನೇ ಶನಿವಾರ ರಜೆ ರದ್ದು : ಯಾರಿಗೆ ಅನ್ವಯ ?

ಶಿಕ್ಷಕರು ಒಳಗೊಂಡಂತೆ ಕೆಲವು ಸರ್ಕಾರಿ ನೌಕರರಿಗೆ ಕಡಿತಗೊಳಿಸಿದ್ದ ಸಾಂದರ್ಬಿಕ ರಜೆಯನ್ನು 10 ರಿಂದ 15 ದಿನಗಳಿಗೆ ಹೆಚ್ಚಿಸಲು ಒಪ್ಪಿಗೆ ನೀಡಲಾಗಿದೆ ಎದು ಹೇಳಿದರು.

ಹೈಕೋರ್ಟ್‌ ಹಾಗೂ ರಾಜ್ಯದ ಎಲ್ಲಾ ಅಧೀನ ನ್ಯಾಯಾಲಯಗಳಿಗೆ ಸಂಬಂಧಿಸಿದ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ 4ನೇ ಶನಿವಾರದ ಸಾರ್ವತ್ರಿಕ ರಜೆ ರದ್ದುಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿತ್ತು.

2020ನೇ ವರ್ಷದ ಸಾರ್ವತ್ರಿಕ ರಜೆ ಪಟ್ಟಿ ಬಿಡುಗಡೆ: 7 ರಜೆ ನಷ್ಟ!

ರಾಜ್ಯ ಸರ್ಕಾರವು 2019ರ ಜೂನ್‌ ತಿಂಗಳಿಂದ ಅನ್ವಯವಾಗುವಂತೆ ಪ್ರತಿ ತಿಂಗಳ 4ನೇ ಶನಿವಾರದ ದಿನ ಸಾರ್ವತ್ರಿಕ ರಜೆ ಎಂದು ಘೋಷಿಸಿತ್ತು. ಆದ್ರೆ, ಹೈಕೋರ್ಟ್‌ ಹಾಗೂ ರಾಜ್ಯದ ಎಲ್ಲಾ ಅಧೀನ ನ್ಯಾಯಾಲಯಗಳಿಗೆ ಸಂಬಂಧಿಸಿದ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ 4ನೇ ಶನಿವಾರದ ಸಾರ್ವತ್ರಿಕ ರಜೆ ರದ್ದುಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿತ್ತು.

ಇದೀಗ ಯಾವ ನೌಕರನಿಗೆ 4ನೇ ಶನಿವಾರದ ರಜೆ ಅನ್ವಯವಾಗುವುದಿಲ್ಲವೋ ಅಂತವರ ರಜೆಗಳನ್ನು 10ರಿಂದ 15ಕ್ಕೆ ಏರಿಸಲಾಗಿದೆ. 

ಗ್ರಾಮಲೆಕ್ಕಾಧಿಕಾರಿ ಹುದ್ದೆಗೆ ನೇರ ನೇಮಕಾತಿ: ಅರ್ಜಿ ಹಾಕಿ

Follow Us:
Download App:
  • android
  • ios