ಕರ್ನಾಟಕ ಸಹಕಾರ ಗ್ರಾಹಕರ ಮಹಾಮಂಡಳದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳ ಭರ್ತಿಗೆ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ, ಬೆಂಗಳೂರು ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

karnataka cooperative consumers federation-ltd recruitment apply for various-post rbj

ಬೆಂಗಳೂರು, (ಮಾ.05): ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ, ಬೆಂಗಳೂರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಒಟ್ಟು 43 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ.   ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಜಾಬ್ಸ್‌ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 5/4/2021 ಕೊನೆಯ ದಿನವಾಗಿದ್ದು, ಖುದ್ದಾಗಿ/ ಅಂಚೆ ಮೂಲಕ/ ಕೋರಿಯರ್ ಮೂಲಕ ಅರ್ಜಿ ಸಲ್ಲಿಸುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ವಯೋಮಿತಿ: ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ 35, ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 38, ಪ.ಜಾ/ ಪ.ಪಂ/ ಪ್ರವರ್ಗ-1- 40 ವರ್ಷಗಳನ್ನು ಮೀರಿರಬಾರದು.

ಅರ್ಜಿ ಶುಲ್ಕ; ಪ.ಜಾತಿ/ ಪ.ಪಂ/ ಪ್ರ.ವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ. 500 + ಅಂಚೆ ಶುಲ್ಕ ರೂ. 30 ಪ್ರತ್ಯೇಕ. ಇತರೆ ವರ್ಗದ ಅಭ್ಯರ್ಥಿಗಳಿಗೆ 1000 + ಅಂಚೆ ಕಚೇರಿ ಶುಲ್ಕ ರೂ. 30 ಪ್ರತ್ಯೇಕ. ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದೇ ಅರ್ಜಿ ಸಲ್ಲಿಸತಕ್ಕದ್ದು. 

ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ ಅಂತಹ ಅಭ್ಯರ್ಥಿಗಳು ಒಂದೇ ನೋಂದಣಿ ಸಂಖ್ಯೆಯಡಿಯಲ್ಲಿಯೇ ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ, ಪ್ರತ್ಯೇಕವಾಗಿ ಅರ್ಜಿ ಸಲ್ಲಿಸತಕ್ಕದ್ದು. 

ಅಭ್ಯರ್ಥಿಗಳು ತಪ್ಪು ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 6364818873 ಸಂಖ್ಯೆಗೆ (ಬೆಳಗ್ಗೆ 10 ರಿಂದ 6 ಗಂಟೆಯ ತನಕ ಮಾತ್ರ ಕರೆ ಮಾಡಬಹುದು).

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Latest Videos
Follow Us:
Download App:
  • android
  • ios