ಸಿಆರ್‌ಪಿ, ಬಿಆರ್‌ಪಿ, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಯೋಜಕರ ಲಿಖಿತ ಪರೀಕ್ಷೆ ಮುಂದೂಡಿಕೆ

* ಸಿಆರ್‌ಪಿ, ಬಿಆರ್‌ಪಿ, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಯೋಜಕರ ಲಿಖಿತ ಪರೀಕ್ಷೆ ಮುಂದೂಡಿಕೆ
* ಇದೇ ಮಾ.15 ಮತ್ತು 16ರಂದು ನಡೆಯಬೇಕಿದ್ದ ಸಿಆರ್‌ಪಿ, ಬಿಆರ್‌ಪಿ ಪರೀಕ್ಷೆ
* ಮಾ.15 ಮತ್ತು 16ರ ಬದಲಿಗೆ ಮಾ.19ರಿಂದ 21ರಂದು ನಡೆಯಲಿರುವ ಪರೀಕ್ಷೆಗಳು

Karnataka crp and brp Exams postponed to M 19 And 21 rbj

ಬೆಂಗಳೂರು, (ಮಾ.08): ಇದೇ ಮಾ.15 ಮತ್ತು 16ರಂದು ನಡೆಯಬೇಕಿದ್ದ ಸಿಆರ್‌ಪಿ, ಬಿಆರ್‌ಪಿ, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಯೋಜಕರು ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರ ಹುದ್ದೆಗಳ (Teacher Jobs) ಲಿಖಿತ ಪರೀಕ್ಷೆಯನ್ನು (Written Exam) ಮುಂದೂಡಲಾಗಿದೆ.

ಮಾ.15 ಮತ್ತು 16ರ ಬದಲಿಗೆ ಮಾ.19ರಿಂದ 21ರಂದು ಪರೀಕ್ಷೆಗಳು (Exams) ನಡೆಯಲಿವೆ.  ಮಾ.15 ಮತ್ತು 16ರಂದು ಸರ್ಕಾರಿ ಪ್ರಥಮ ದರ್ಜೆ ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿಗೆ ಪರೀಕ್ಷೆ ನಡೆಯುತ್ತಿದೆ. ಈ ಪರೀಕ್ಷೆಗಳಿಗೆ ಶಿಕ್ಷಕರು ಕೂಡ ಹಾಜರಾಗುವ ಸಾಧ್ಯತೆಗಳಿರುವುದರಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ: ಪ್ರವೇಶ ಪತ್ರ ಲಭ್ಯ, ವಸ್ತ್ರಸಂಹಿತೆ ಕಡ್ಡಾಯ

ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಪರೀಕ್ಷೆಗೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ತಿಳಿಸಿದೆ.ತಾತ್ಕಾಲಿಕ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಮಾ.10ರ ವರೆಗೆ ಸಮಯ ನೀಡಲಾಗಿದೆ.

ಮಾ.10ರಂದು ಪರಿಷ್ಕೃತ ತಾತ್ಕಾಲಿಕ ಅರ್ಹತಾ ಪಟ್ಟಿ ಪ್ರಕಟಿಸಲಾಗುತ್ತದೆ. ಮಾ.15ರಂದು ಅರ್ಹ ಪಟ್ಟಿಯನ್ನು ಸಂಗ್ರಹಿಸಿ ಆಯಾ ಜಿಲ್ಲಾ ಉಪನಿರ್ದೇಶಕರು ಆಯುಕ್ತರ ಕಚೇರಿಗಳಿಗೆ ಕಳುಹಿಸಬೇಕು. ಮಾ.19ರಿಂದ 21ರ ವರೆಗೆ ಲಿಖೀತ ಪರೀಕ್ಷೆ ಮೂಲಕ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್‌ ನಡೆಸಲಾಗುತ್ತದೆ.

ಮಾ.22ರಿಂದ 24ರ ವರೆಗೆ ಖಾಲಿ ಹುದ್ದೆಗಳ ಮಾಹಿತಿ ಅಪ್‌ಲೋಡ್‌ ಮಾಡುವುದು ಮತ್ತು ಮಾ.31ರಂದು ನಿರ್ದಿಷ್ಟ ಹುದ್ದೆಗಳಿಗೆ ಸ್ಥಳನಿಯುಕ್ತಿಗೊಳಿಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಆಯುಕ್ತರಾದ ಡಾ. ಆರ್‌. ವಿಶಾಲ್‌ ತಿಳಿಸಿದ್ದಾರೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ
ಕರ್ನಾಟಕದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ (Assistant Professor Jobs) ಅರ್ಜಿ ಹಾಕಿರುವ ಅಭ್ಯರ್ಥಿಗಳು, ಮಾರ್ಚ್ ಮಧ್ಯಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಅಗತ್ಯವಿರುವ ಪ್ರವೇಶ ಪತ್ರವನ್ನು (Hall Ticket) ಫೆ.28ರಿಂದ http://kea.kar.nic.in ಜಾಲತಾಣದಲ್ಲಿ ಡೌನ್-ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ. 

ಜತೆಗೆ, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನೂ ನಿಗದಿಪಡಿಸಿದ್ದು, ನಿಷೇಧಿತ ವಸ್ತುಗಳ ಪಟ್ಟಿಯನ್ನೂ ತಿಳಿಸಲಾಗಿದೆ. ಈ ಪರೀಕ್ಷೆಯು ಮಾರ್ಚ್ 12ರಿಂದ 16ರವರೆಗೆ ನಡೆಯಲಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇತ್ತೀಚಿನ 2 ಭಾವಚಿತ್ರ, ಪ್ರವೇಶಪತ್ರ, ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ತರಬೇಕು ಎಂದಿದ್ದಾರೆ.

ಆದರೆ, ಪರೀಕ್ಷಾ ಕೊಠಡಿಗೆ ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು (ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂಟೂತ್, ಕೈ ಗಡಿಯಾರ), ಆಹಾರ ಪದಾರ್ಥಗಳು, ಸ್ಟೇಷನರಿ ವಸ್ತುಗಳು (ಪೆನ್ಸಿಲ್, ಕಾಗದ, ಎರೇಸರ್, ಇಂಚುಪಟ್ಟಿ, ಜಾಮಿಟ್ರಿ ಪೆಟ್ಟಿಗೆ, ಕ್ಯಾಲ್ಕುಲೇಟರ್, ಲಾಗ್ ಟೇಬಲ್) ಮತ್ತು ವೈಯಕ್ತಿಕ ವಸ್ತುಗಳನ್ನು (ವ್ಯಾಲೆಟ್, ಅಲಂಕಾರಿಕ ಕನ್ನಡಕ, ಬೆಲ್ಟ್, ಟೋಪಿ, ಕ್ಯಾಮರಾ, ಆಭರಣಗಳು) ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Latest Videos
Follow Us:
Download App:
  • android
  • ios