ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಉದ್ಯೋಗವಕಾಶಗಳು
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಸಕ್ತ ಮತ್ತು ಅರ್ಹರು 10/12/2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈ ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರು, (ನ. 25) : ರಾಜ್ಯ ಅರಣ್ಯ ಇಲಾಖೆ ಇರುವ ಅರಣ್ಯ ವ್ಯವಸ್ಥಾಪನಾಧಿಕಾರಿ (forest settlement officer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 8 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ 2 ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಗ್ರಾಮಲೆಕ್ಕಿಗ ಹುದ್ದಗಳ ನೇಮಕಾತಿ: ಅರ್ಜಿ ಸಲ್ಲಿಸಿ
ಅರ್ಜಿಗಳನ್ನು ಸಲ್ಲಿಸಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ 10/12/2019 ಕೊನೆಯ ದಿನವಾಗಿದ್ದು, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಆಯ್ಕೆಯಾದವರು ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಕೋಲಾರ, ಹಾಸನ, ರಾಯಚೂರು, ಧಾರವಾಡದಲ್ಲಿ ಕೆಲಸ ಮಾಡಬೇಕಿದೆ. ಕರ್ತವ್ಯ ನಿರ್ವಹಿಸುವ ಕೇಂದ್ರಸ್ಥಾನದ ಜಿಲ್ಲಾ ವ್ಯಾಪ್ತಿಯ ಅರ್ಜಿದಾರರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಇನ್ನಷ್ಟು ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವೇತನ ಶ್ರೇಣಿ: ಗುತ್ತಿಗೆ ಆಧಾರದ ಮೇಲೆ ನೇಮಕವಾದ ಅರಣ್ಯ ವ್ಯವಸ್ಥಾಪನಾಧಿಕಾರಿಗೆ ಮಾಸಿಕವಾಗಿ 50 ಸಾವಿರ ರು. ನಿಗದಿಪಡಿಸಲಾಗಿದೆ.
ವಯೋಮಿತಿ: ಅರ್ಜಿಯನ್ನು ಆಹ್ವಾನಿಸಿ ಜಾರಿ ಮಾಡಲಾಗಿರುವ ಈ ಅಧಿಸೂಚನೆಯ ದಿನಾಂಕಕ್ಕೆ ಅರ್ಜಿದಾರರು 70 ವರ್ಷ ವಯಸ್ಸನ್ನು ಮೀರಿಬಾರದು.
ಅರ್ಹತೆ: ಅರ್ಜಿದಾರರು ಸಹಾಯಕ ಆಯುಕ್ತರು (ಕಂದಾಯ) ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರಬೇಕು. ಅರಣ್ಯ ಮೋಜಣಿ ಹಾಗೂ ಗಡಿರೇಖೆ ಗುರುತಿಸುವಿಕೆ ಮತ್ತು ನಕಾಶೆ ತಯಾರಿಕೆ, ಭೂ ವಿವಾದಗಳ ಕುರಿತಂತೆ ಸಿವಿಲ್ ನ್ಯಾಯಾಲಯದಂತೆ ಕರ್ತವ್ಯ ನಿರ್ವಹಿಸಬೇಕು
ಆಸಕ್ತರು ಅಂಚೆ ಮೂಲಕ ಅಥವ ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಬೇಕಿದ್ದು, ವೆಬ್ ಸೈಟ್‌ನಲ್ಲಿ ಅರ್ಜಿ ಮತ್ತು ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಳಾಸ : ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಮುಖ್ಯಸ್ಥರು ಅರಣ್ಯ ಪಡೆ), ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು 560003.