ಬೆಂಗಳೂರು, (ಏ.02):  339 ಅರಣ್ಯ ರಕ್ಷಕ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಲು ಏಪ್ರಿಲ್  15ರ ವರೆಗೆ ಇದ್ದ ಕೊನೆ ದಿನಾಂಕವನ್ನು ಮೇ.18ರ ವರೆಗೆ ಕಾಲಾವಕಾಶ ನೀಡಲಾಗಿದೆ.

ಕೊರೋನಾ ವೈರಸ್ ತಡೆಗೆ ಲಾಕ್‌ಡೌನ್ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. 

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 327+12 (ಬ್ಯಾಕ್‌ಲಾಗ್) ಒಟ್ಟು 339 ಅರಣ್ಯ ರಕ್ಷಕ  ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ: ಅರ್ಜಿ ಹಾಕಿ

ವಿದ್ಯಾರ್ಹತೆ: ದ್ವಿತೀಯ ಪಿಯುಸಿ /12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ  ಹೊಂದಿರಬೇಕು.

ವಯೋಮಿತಿ: ವಯೋಮಿತಿಯೊಳಗಿನ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ಮತ್ತು ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಸಾಮಾನ್ಯ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಕನಿಷ್ಠ 18 ರಿಂದ ಗರಿಷ್ಠ 32 ವರ್ಷ ವಯೋಮಿತಿಯನ್ನ ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ:ಅರಣ್ಯ ರಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400 ರಿಂದ 42,000 ರೂ ವೇತನವನ್ನು ನೀಡಲಾಗುವುದು. 

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಮೆರಿಟ್ ಹಾಗೂ ಪ್ರವರ್ಗವಾರು ಮೀಸಲಾತಿ ಆಧಾರದ ಮೇಲೆ ವೃತ್ತವಾರು ಪ್ರತ್ಯೇಕವಾಗಿ 1:20 ಪಟ್ಟಿಯನ್ನು ಸಿದ್ದಪಡಿಸಿ, ಅರ್ಹ ಅಭ್ಯರ್ಥಿಗಳಿಗೆ ಮಾತ್ರ ದೇಹದಾರ್ಢ್ಯತೆ, ದೈಹಿಕ ತಾಳ್ವಿಕೆ ಮತ್ತು ದೈಹಿಕ ಕಾರ್ಯಸಮರ್ಥತೆ ಪರೀಕ್ಷೆಗಳಿಗೆ ಪ್ರವೇಶ ಪತ್ರ ನೀಡಲಾಗುವುದು. 

ದೈಹಿಕ ಪರೀಕ್ಷೆಗಳಲ್ಲಿ ಅರ್ಹರಾದ ಅಭ್ಯರ್ಥಿಗಳನ್ನು ಮಾತ್ರ ಲಿಖಿತ ಪರೀಕ್ಷೆಗೆ ಪರಿಗಣಿಸಿ, ಪರೀಕ್ಷೆ ನಡೆಯುವ ಸ್ಥಳ ಮತ್ತು ವೇಳೆಯನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

 ಅರ್ಜಿ ಶುಲ್ಕ: ಸಾಮಾನ್ಯ ವರ್ಗ 2ಎ, 2ಬಿ, 3ಎ ಮತ್ತು 3ಬಿ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ100 ರೂ +ಸೇವಾ ಶುಲ್ಕ ರೂ. 20.00.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಕುಷ್ಠ ರೋಗದಿಂದ ಗುಣಮುಖಹೊಂದಿದ ಅಂಗವಿಕಲ ಅಭ್ಯರ್ಥಿ ಹಾಗೂ ಮಾಹಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 25.00 + ಸೇವಾ ಶುಲ್ಕ ರೂ.20.00. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಮುದ್ರಿತ ಅಂಚೆ ಚಲನ್ ಪ್ರತಿಯನ್ನು ತೆಗೆದುಕೊಂಡು, ಇ-ಪಾವತಿ ಸೌಲಭ್ಯವಿರುವ ಅಂಚೆ ಕಚೇರಿಯಲ್ಲಿ ಶುಲ್ಕವನ್ನು ಪಾವತಿಸತಕ್ಕದ್ದು. 

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ