ಪೊಲೀಸ್ ಹಾಗೂ ಶಿಕ್ಷಕ ಹುದ್ದೆ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ನೀಡಿದೆ.

ಬೆಂಗಳೂರು, (ಸೆಪ್ಟೆಂಬರ್.12): ಕರ್ನಾಟಕದಲ್ಲಿ ಪಿಎಸ್‌ಐ, ಪ್ರೌಢ ಶಿಕ್ಷಣ ಇಲಾಖೆಯ ಶಿಕ್ಷಕರ ನೇಮಕಾತಿ ಹಾಗೂ ಕೆಪಿಟಿಸಿಎಲ್‌ ನೇಮಕಾತಿಯಲ್ಲಿ ಅಕ್ರಮಗಳು ನಡೆದಿದ್ದು, ಈ ಕೇಸ್‌ಗೆ ಸಂಬಂಧಿಸಿದಂತೆ ಪೊಲೀಸರು ಹಲವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇದರ ಮಧ್ಯೆ ಕರ್ನಾಟಕ ಸರ್ಕಾರ ಮತ್ತೆ ಶಿಕ್ಷಕ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

ಹೌದು.. 2,500 ಹೊಸ ಶಿಕ್ಷಕರ ನೇಮಕಾತಿಗೆ ಕರ್ನಾಟಕ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಹ ಶಿಕ್ಷಕರು - 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು - 200 ಹುದ್ದೆಗಳು ಹಾಗೂ ವಿಶೇಷ ಶಿಕ್ಷಕರು - 100 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಜಾಬ್ಸ್‌ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಸಹ ಶಿಕ್ಷಕರು - 2,200 ಹುದ್ದೆಗಳು.

ದೈಹಿಕ ಶಿಕ್ಷಣ ಶಿಕ್ಷಕರು - 200 ಹುದ್ದೆಗಳು.

ವಿಶೇಷ ಶಿಕ್ಷಕರು - 100 ಹುದ್ದೆಗಳು.@BSBommai@BJP4Karnataka

— B.C Nagesh (@BCNagesh_bjp) September 12, 2022

ಈಗಾಲೇ ರಾಜ್ಯ ಸರ್ಕಾರ 15,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆ ನೇಮಕಾತಿ ಪ್ರಕ್ರಿಯೆ ಚಾಲನೆಯಲ್ಲಿ ಇರುವಾಗಲೇ ಇದೀಗ ಹೊಸದಾಗಿ 2,500 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಶಿಕ್ಷಕರಾಗು ನಿರೀಕ್ಷೆಯಲ್ಲಿದ್ದವರಿಗೆ ಡಬಲ್ ಧಮಾಕ ಸಿಕ್ಕಂತಾಗಿದೆ.

ಪೊಲೀಸ್ ಇಲಾಖೆಯಲ್ಲಿ ನೇಮಕಾತಿ
ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಮತ್ತೊಂದೆಡೆ ಪೊಲೀಸ್ ಇಲಾಖೆಯಲ್ಲೂ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ.

ಅಗತ್ಯ ಮಾನವ ಸಂಪನ್ಮೂಲದ ಮೂಲಕ ಪೊಲೀಸ್ ಇಲಾಖೆಯನ್ನು ಬಲಪಡಿಸುವಲ್ಲಿ ಕರ್ನಾಟಕ ಸರ್ಕಾರ ಮುಂಚೂಣಿಯಲ್ಲಿದ್ದು, ಹೊಸದಾಗಿ 3,064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ತೃತೀಯ ಲಿಂಗದ ಅಭ್ಯರ್ಥಿಗಳಿಗೂ ಅವಕಾಶವಿದೆ.@BSBommai@DgpKarnatakapic.twitter.com/YyxKOV6daO

— Araga Jnanendra (@JnanendraAraga) September 12, 2022

ಅಗತ್ಯ ಮಾನವ ಸಂಪನ್ಮೂಲದ ಮೂಲಕ ಪೊಲೀಸ್ ಇಲಾಖೆಯನ್ನು ಬಲಪಡಿಸುವಲ್ಲಿ ಕರ್ನಾಟಕ ಸರ್ಕಾರ ಮುಂಚೂಣಿಯಲ್ಲಿದ್ದು, ಹೊಸದಾಗಿ 3,064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ತೃತೀಯ ಲಿಂಗದ ಅಭ್ಯರ್ಥಿಗಳಿಗೂ ಅವಕಾಶವಿದೆ. ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಟ್ವಿಟ್ಟರ್‌ ಮೂಲಕ ಮಾಹಿತಿ ನೀಡಿದ್ದಾರೆ.

ಈಗಾಗಲೇ ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಸಾಲು ಸಾಲು ಅಕ್ರಮಗಳು ನಡೆಯುತ್ತಿವೆ. ಸರ್ಕಾರಿ ಅಧಿಕಾರಿಗಳ ಭ್ರಷ್ಟಾಚಾರ ಒಂದು ಕಡೆ ಸದ್ದು ಮಾಡುತ್ತಿದ್ದರೇ, ಹಣ ಪಡೆದ ಸರ್ಕಾರದ ಅಧಿಕಾರಿಗಳೇ ಅನರ್ಹ ಅಭ್ಯರ್ಥಿಗಳ ಅಕ್ರಮ ನೇಮಕಾತಿ ನಡೆಸುತ್ತಿರುವ ಸಂಗತಿ ಬೆಚ್ಚಿ ಬೀಳಿಸುತ್ತಿದೆ.. ಪ್ರಸ್ತುತದಲ್ಲಿ ಪ್ರತಿಭಾವಂತ ಅಭ್ಯರ್ಥಿಗಳಿಗೆ ಬೆಲೆ ಇಲ್ಲದಂತಾಗಿದ್ದು, ಹಣ ಇದ್ದವರಿಗೆ ಹಾಗೂ ದೊಡ್ಡ ದೊಡ್ಡವರ ಪ್ರಭಾವ ಹೊಂದಿದ್ದವರಿಗೆ ಅವಕಾಶ ಎನ್ನುವಂತಾಗಿದೆ. ಈ ಮೂಲಕ ಪ್ರತಿಭಾವಂತ ಅಭ್ಯರ್ಥಿಗಳಿಗೆ ಅವಕಾಶವೇ ಇಲ್ಲದಂತಾಗಿದೆ.