ಬೆಂಗಳೂರು, (ಸೆ.09) : ಇನ್ಮುಂದೆ ಓರ್ವ ಸರ್ಕಾರಿ ನೌಕರ ಮತ್ತೊಂದು ಸರ್ಕಾರಿ ಹುದ್ದೆಗೆ ಆಯ್ಕೆಗಾಗಿ ಅರ್ಜಿ ಸಲ್ಲಿಸುವ ಮುನ್ನವೇ ಎನ್. ಒ. ಸಿ. ಪಡೆಯುವುದಕ್ಕೆ ವಿನಾಯಿತಿ ನೀಡಿದೆ. ಇದು ರಾಜ್ಯ ಸರ್ಕಾರಿ ನೌಕರರಿಗೆ ಸಂತಸ ತಂದಿದೆ.

ಸರ್ಕಾರಿ ಹುದ್ದೆಯಲ್ಲಿದ್ದು, ಮತ್ತೊಂದು ಸರ್ಕಾರಿ ಹುದ್ದೆಗಾಗಿ ಅರ್ಜಿ ಸಲ್ಲಿಸಲು ತಾವು ಕರ್ತವ್ಯ ನಿರ್ವಹಿಸುತ್ತಿರುವ ಇಲಾಖೆಯಿಂದ ನೋ ಅಬ್ಜೆಕ್ಷನ್ ಪ್ರಮಾಣ ಪತ್ರ(NOC) ಪಡೆಯುವುದು ಕಡ್ಡಾಯವಾಗಿತ್ತು. ಆದ್ರೆ, ಇದೀಗ NOC ಅವಶ್ಯಕತೆ ಇಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಈ ಕುರಿತಂತೆ ರಾಜ್ಯ ಸರ್ಕಾರ ವಿಶೇಷ ರಾಜ್ಯ ಪತ್ರ ಹೊರಡಿಸಿದ್ದು, ಸರ್ಕಾರಿ ನೌಕರರಾಗಿದ್ದು, ಮತ್ತೊಂದು ಸರ್ಕಾರಿ ಹುದ್ದೆಗಾಗಿ ಅರ್ಜಿ ಸಲ್ಲಿಸುವ ವೇಳೆಯಲ್ಲಿ ತಾವು ಕರ್ತವ್ಯ ನಿರ್ವಹಿಸುತ್ತಿದ್ದಂತ ಇಲಾಖೆಯಿಂದ ನಿರಾಪೇಕ್ಷಣ ಪ್ರಮಾಣ ಪತ್ರ(ಎನ್‌ಒಸಿ) ಪಡೆಯುವುದು ಕಡ್ಡಾಯವಾಗಿತ್ತು. ಇಂತಹ ನೇಮಕಾತಿ ನಿಯಮವದಲ್ಲಿ ಬದಲಾವಣೆ ಮಾಡಲಾಗಿದ್ದು, ಕಲಂ 11ರಂತೆ ಸರ್ಕಾರಿ ಹುದ್ದೆ ಹೊಂದಿರುವ ವ್ಯಕ್ತಿಯು, ಮತ್ತೊಂದು ಸರ್ಕಾರಿ ಹುದ್ದೆಗೆ ನೇರವಾಗಿಯೇ ನೇಮಕಾತಿ ಪ್ರಾಧಿಕಾರಕ್ಕೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಸ್ಪಷ್ಟಪಡಿಸಿದೆ.

ಆದ್ರೆ, ಮತ್ತೊಂದು ಸರ್ಕಾರಿ ಹುದ್ದೆಗಾಗಿ ಅರ್ಜಿ ಸಲ್ಲಿಸಿದ ನಂತರ ಸರ್ಕಾರಿ ನೌಕರ ಆ ಹುದ್ದೆಗೆ ನೇಮಕವಾದಲ್ಲಿ, ತಪ್ಪದೇ ತಮ್ಮ ಮಾತೃ ಇಲಾಖೆಗೆ ತಾವು ನೇಮಕಗೊಂಡಿರುವ ಬಗ್ಗೆ ಪ್ರಮಾಣಪತ್ರವನ್ನು ಸಲ್ಲಿಸಬೇಕು. ತಮ್ಮ ಮಾತೃ ಇಲಾಖೆಯ ಗಮನಕ್ಕೆ ತಂದು ನೇಮಕಗೊಂಡಿರುವ ಮತ್ತೊಂದು ಹುದ್ದೆಗೆ ರಿಪೋರ್ಟ್ ಮಾಡಿಕೊಳ್ಳಬೇಕು ಎಂದು ತಿಳಿಸಿದೆ.