ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ, ವೇತನ ಹೆಚ್ಚಳದ ಜೊತೆಗೆ ಇನ್ನಷ್ಟು ಹುದ್ದೆ ಭರ್ತಿಗೆ ಸರ್ಕಾರ ಆದೇಶ

* ಪದವಿ ಪೂರ್ವ  ಕಾಲೇಜು ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ,
* ವೇತನ ಹೆಚ್ಚಿಸಿದ ಆದೇಶ ಹೊರಡಿಸಿದ ಕರ್ನಾಟಕ ಸರ್ಕಾರ
* ಬಗ್ಗೆ ಮಾಹಿತಿ ನೀಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್

Karnataka Govt Increases Salary of PU College guest lecturers rbj

ಬೆಂಗಳೂರು, (ಜುಲೈ.06): ಕರ್ನಾಟಕದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ‘ಪರಿಷ್ಕರಣೆ’ ಮಾಡಲಾಗಿದ್ದು, 9,000 ದಿಂದ 12,000 ರೂ.ಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರಸಕ್ತ ಸಾಲಿನಲ್ಲಿ ಉಪನ್ಯಾಸಕರ ಕೊರತೆ ನೀಗಿಸಲು 3,708 ಅತಿಥಿ ಉಪನ್ಯಾಸಕರ ಸೇವೆಯನ್ನು ಭರ್ತಿ ಮಾಡಲಾಗುತ್ತಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

2022-23ನೇ ಶೈಕ್ಷಣಿಕ ಸಾಲಿನಲ್ಲಿ ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಒಟ್ಟು 3708 ಅತಿಥಿ ಉಪನ್ಯಾಸಕರುಗಳನ್ನು ನೇಮಕಾತಿ ಮಾಡಿಕೊಳ್ಳಬೇಕಾಗಿದೆ.

Khelo India ಯೋಜನೆಯಡಿ ರಾಜ್ಯದ ಹಲವೆಡೆ ನೇಮಕಾತಿ

ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಪ್ರತಿಯಾಗಿ ಪ್ರಸಕ್ತ ಸಾಲಿನಲ್ಲೂ 3500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಹಾಗೂ ಆ ಬೋಧಕರ ಸಂಭಾವನೆಯನ್ನು 9 ಸಾವಿರ ರು.ನಿಂದ 15 ಸಾವಿರ ರು.ಗೆ ಹೆಚ್ಚಿಸುವಂತೆ ಕೋರಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.

‘ಪಿಯು ಇಲಾಖೆ ನಿರ್ದೇಶಕರಾದ ಆರ್‌.ರಾಮಚಂದ್ರನ್‌ 2022-23ನೇ ಸಾಲಿನಲ್ಲಿ ಸರ್ಕಾರಿ ಪಿಯು ಕಾಲೇಜುಗಳಿಗೆ 3500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಹಾಗೂ ಅವರ ಗೌರವ ಧನವನ್ನು 15 ಸಾವಿರ ರು.ಗಳಿಗೆ ಹೆಚ್ಚಿಸಬೇಕೆಂದು ಕೋರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್
ರಾಯಚೂರು: ಶಿಕ್ಷಣ ಕ್ಷೇತ್ರವನ್ನು ಇನ್ನಷ್ಟು ಬಲಗೊಳಿಸುವ ಸಲುವಾಗಿ ಸರ್ಕಾರದಿಂದ 15 ಸಾವಿರ ಹೊಸ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಪೈಕಿ 5 ಸಾವಿರ ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ.

 ಮಂಗಳವಾರ ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಿ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಅಳವಡಿಸಿರುವ ಮಳೆ ನೀರು ಕೊಯ್ಲು ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಇದೆ. ಅದನ್ನು ನಿವಾರಿಸಲು ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಲಾಗಿದೆ. 371(ಜೆ) ಮೀಸಲಾತಿಯಡಿ ಸ್ಥಳೀಯರು ನೇಮಕಾತಿ ಆಗುವುದರಿಂದ ಪ್ರದೇಶ ಬಿಟ್ಟು ಶಿಕ್ಷಕರು ಬೇರೆಡೆ ವರ್ಗಾವಣೆ ಆಗುವುದಿಲ್ಲ ಎಂದು ಹೇಳಿದರು.

ಕೋವಿಡ್ ಕಾರಣದಿಂದ ಕಳೆದ ವರ್ಷ ಸರಿಯಾಗಿ ಶಾಲೆಗಳು ನಡೆಯದ ಕಾರಣ ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಹೀಗಾಗಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಕಲಿಕಾ ಚೇತರಿಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕಲಿಕಾ ಚೇತರಿಕೆ ಕೋರ್ಸ್ ಬೋಧಿಸಿದ ನಂತರವೇ ಪಠ್ಯ ಬೋಧನೆ ಮಾಡಲಾಗುತ್ತದೆ ಎಂದು ತಿಳಿಸಿದರು.

Latest Videos
Follow Us:
Download App:
  • android
  • ios